ಸೆ.11ಕ್ಕೆ 21ನೇ ವರ್ಷದ ಬೃಹತ್ ರಕ್ತದಾನ ಶಿಬಿರ
ಉಡುಪಿ, ಸೆ.3: ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ, ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ ಹಾಗೂ ಜಿಲ್ಲಾ ಸರಕಾರಿ ಆಸ್ಪತ್ರೆ ರಕ್ತನಿಧಿ ಕೇಂದ್ರ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅರಣ್ಯ ಹುತಾತ್ಮರ ಸ್ಮರಣಾರ್ಥ ಅಜ್ಜರಕಾಡು ಪುರಭವನದಲ್ಲಿ ಸೆ.11ರಂದು ಬೆಳಗ್ಗೆ 10 ಗಂಟೆಗೆ 21ನೇ ವರ್ಷದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಉಡುಪಿ ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯದ ಉಪವಲಯ ಅರಣ್ಯ ಅಧಿಕಾರಿಗಳ ಅಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ ಎಂ., ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ಅಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಭಾಗವಹಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
Next Story





