Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಮಹಿಳೆಯರ...

ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಸಂರಕ್ಷಿಸಿ: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ3 Sept 2021 11:25 PM IST
share
ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಮಹಿಳೆಯರ ಹಕ್ಕುಗಳನ್ನು ಸಂರಕ್ಷಿಸಿ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಸೆ.3: ಸರಕಾರ ನಡೆಸುತ್ತಿರುವ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಾಗಿರುವ ಮಹಿಳೆಯರ ಮಾನವಹಕ್ಕುಗಳ ಉಲ್ಲಂಘನೆಯಾಗುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸುಪ್ರೀಂಕೋರ್ಟ್ ವಿವಿಧ ರಾಜ್ಯ ಸರಕಾರಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮೂರು ತಿಂಗಳುಗಳ ಕಾಲಾವಕಾಶ ನೀಡಿದೆ.

2016ರಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಹಾಗೂ 2020ರಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ನಡೆಸಿದ ಅಧ್ಯಯನ ವರದಿಯನ್ನು ಆಧರಿಸಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ, ವಿಕ್ರಮ್‌ನಾಥ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಸಾಂಸ್ಥಿಕ ಪಾಲನೆಯಲ್ಲಿರುವ ದೇಶದ ನೂರಾರು ಮಾನಸಿಕ ಅಸ್ವಸ್ಥ ಮಹಿಳೆಯರು ಅನುಭವಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ವರದಿಯಲ್ಲಿ ಗಮನಸೆಳೆಯಲಾಗಿದೆ.ಸಂವಿಧಾನವು ಖಾತರಿಪಡಿಸಿರುವಂತಹ ಘನತೆ ಹಾಗೂ ಖಾಸಗಿತನದಂತಹ ಮೂಲಭೂತ ಹಕ್ಕುಗಳು ಅವರಿಗೆ ಲಭ್ಯವಾಗುತ್ತಿಲ್ಲವೆಂದು ಅಧ್ಯಯನ ವರದಿ ಆತಂಕ ವ್ಯಕ್ತಪಡಿಸಿತ್ತು.

‘‘ಈ ಮಹಿಳೆಯರಿಗೆ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನಿರಾಕರಿಸಲಾಗುತ್ತಿದೆ. ತಾಯಂದಿರಿಗೆ ಅವರ ಮಕ್ಕಳನ್ನು ಸಮೀಪದಲ್ಲಿ ಇಟ್ಟುಕೊಳ್ಳಲು ಅವಕಾಶ ನೀಡಲಾಗುತ್ತಿಲ್ಲ. ಹಲವಾರು ಸರಕಾರಿ ಮಾನಸಿಕ ಆರೋಗ್ಯ ಸಂಸ್ಥೆಗಳು ತಾಯಿ-ಮಗುವಿಗೆ ಪ್ರತ್ಯೇಕ ವಾರ್ಡ್ ಇರುವುದಿಲ್ಲವೆಂದು ನ್ಯಾಯಪೀಠವು ಗುರುವಾರ ಪ್ರಕಟಿಸಿದ 12 ಪುಟಗಳ ಆದೇಶದಲ್ಲಿ ತಿಳಿಸಿದೆ. ಅವರಿಗೆ ಖಾಸಗಿತನದ ಅವಕಾಶವಿಲ್ಲ ಅಷ್ಟೇ ಅಲ್ಲದೆ ಅವರ ತಲೆಯನ್ನು ವಿಕಾರವಾಗಿ ಬೋಳಿಸಲಾಗುತ್ತಿದೆ ಮತ್ತು ಅವರಿಗೆ ಆಧಾರ್‌ನಂತಹ ಯಾವುದೇ ದಾಖಲೆಪತ್ರಗಳ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡುತ್ತಿಲ್ಲ. ಅವರಿಗೆ ಭಿನ್ನಸಾಮರ್ಥ್ಯ ಪ್ರಮಾಣಪತ್ರಗಳನ್ನು ಅಥವಾ ಪಿಂಚಣಿಯನ್ನು ನೀಡಲಾಗುತ್ತಿಲ್ಲ’’ ಎಂದು ನ್ಯಾಯಪೀಠ ಆಸಮಾಧಾನ ವ್ಯಕ್ತಪಡಿಸಿದೆ. ನ್ಯಾಯವಾದಿ ಗೌರವ್ ಕುಮಾರ್ ಬನ್ಸಾಲ್ ಅವರು ಸಲ್ಲಿಸಿದ ಅರ್ಜಿಯೊಂದರಲ್ಲಿ ಸರಕಾರಿ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಮಹಿಳೆಯರ ಯಾತನೆ ಹಾಗೂ ಈ ಅಧ್ಯಯನ ವರದಿಯ ಅಂಶಗಳ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸುವಲ್ಲಿ ಆಗಿರುವ ಪ್ರಗತಿಯ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಾಸಿಕ ಸಭೆಗಳನ್ನು ನಡೆಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿತು. ಮಹಾರಾಷ್ಟ್ರ ಹಾಗೂ ಉತ್ತರಪ್ರದೇಶದಂತಹ ರಾಜ್ಯಗಳಲ್ಲಿ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಗುಣಮುಖರಾದ ರೋಗಿಗಳನ್ನು ಭಿಕ್ಷುಕ ಗೃಹಳಲ್ಲಿ ಕೂಡಿಹಾಕುತ್ತಿರುವುದನ್ನು ಆಘಾತಕಾರಿ ಸಂಗತಿಯ ಬಗ್ಗೆ ಅರ್ಜಿದಾರರು ಗಮನಸೆಳೆದಿದ್ದರು. ಅಸ್ತಿತ್ವದಲ್ಲಿರುವ ವೃದ್ಧಾಶ್ರಮ ಗಳನ್ನು ಹಾಗೂ ಹಾಸ್ಟೆಲ್‌ಗಳನ್ನು ಪುನರ್ವಸತಿ ಕೇಂದ್ರಗಳಾಗಿ ಪರಿವರ್ತಿಸುವ ಉತ್ತರಪ್ರದೇಶದ ನಡೆಯುವ ಕೇವಲ ಬಾಯಿಮಾತಿನಲ್ಲಷ್ಟೇ ಉಳಿದಿದೆ ಎಂದು ಸುಪ್ರೀಂಕೋರ್ಟ್‌ಅಭಿಪ್ರಾಯಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X