Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿಯಲ್ಲಿ ಸೌಹಾರ್ದ-ಸಾಮರಸ್ಯ ಕುಸಿತ:...

ಕರಾವಳಿಯಲ್ಲಿ ಸೌಹಾರ್ದ-ಸಾಮರಸ್ಯ ಕುಸಿತ: ಚಂದ್ರಕಲಾ ನಂದಾವರ

ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪ್ರದಾನ-ಬಹುಭಾಷಾ ಕವಿಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ3 Sept 2021 11:27 PM IST
share
ಕರಾವಳಿಯಲ್ಲಿ ಸೌಹಾರ್ದ-ಸಾಮರಸ್ಯ ಕುಸಿತ: ಚಂದ್ರಕಲಾ ನಂದಾವರ

ಮಂಗಳೂರು, ಸೆ.3: ಕರಾವಳಿಯ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲು ಎಲ್ಲ ಧರ್ಮಗಳ ನಡುವೆ ಅತ್ಯಂತ ಹೆಚ್ಚು ಸೌಹಾರ್ದ ಮತ್ತು ಸಾಮರಸ್ಯ ಕಂಡು ಬರುತ್ತಿತ್ತು. ಆದರೆ ಪ್ರಸಕ್ತ ದಿನಮಾನಗಳಲ್ಲಿ ಅದು ಕಾಣ ಸಿಗುತ್ತಿಲ್ಲ. ಕರಾವಳಿಯಲ್ಲಿ ಸೌಹಾರ್ದ-ಸಾಮರಸ್ಯವು ಕುಸಿತ ಕಂಡಿದೆ ಎಂದು ಸಾಹಿತಿ ಚಂದ್ರಕಲಾ ನಂದಾವರ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಸಹಕಾರಿ ಸದನದ ಶಾಂತಿ ಪ್ರಕಾಶನ ಸಭಾಂಗಣದಲ್ಲಿ ಮುಸ್ಲಿಂ ಲೇಖಕರ ಸಂಘದಿಂದ ದಿ. ಯು.ಟಿ. ಫರೀದ್ ಸ್ಮರಾಣಾರ್ಥ 2019ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರಾವಳಿಯ ಭಾಗದಲ್ಲಿ ನಾವು ಮುಸ್ಲಿಮರ ಮನೆಗಳಿಗೆ ತೆರಳಿ ಹಬ್ಬಗಳನ್ನು ಆಚರಿಸಿ, ಪರಸ್ಪರ ಸಂತೋಷದಿಂದ ಪಾಲ್ಗೊಳ್ಳುತ್ತಿದ್ದೆವು. ಪ್ರತಿಯಾಗಿ ಮುಸ್ಲಿಮರೂ ಹಿಂದೂಗಳೊಂದಿಗೆ ಸಹೋದತ್ವದಿಂದ ಇದ್ದರು. ಆದರೆ ಇತ್ತೀಚೆಗೆ ಕರಾವಳಿಯಲ್ಲಿ ಧರ್ಮಗಳ ನಡುವೆ ಬಿರುಕು ಕಾಣಿಸಿಕೊಳ್ಳಲು ಶುರುವಾಗಿದೆ. ಇದಕ್ಕೆ ಕಾರಣರಾದವರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದು ಅವರು ತಾಕೀತು ಮಾಡಿದ್ದಾರೆ.

ಹೆಣ್ಣು ಹೆತ್ತ ಪೋಷಕರು ಸಮಾಜಮುಖಿಯಾಗಲಿ: ಯಾವುದೇ ಧರ್ಮದಲ್ಲಿ ಪೋಷಕರು ವಿಚಾರವಂತರಾದರೆ, ಸಮಾಜಮುಖಿ ಮನಸ್ಸಿನವ ರಾದರೆ ಅವರ ಹೆಣ್ಣುಮಕ್ಕಳು ತಮ್ಮ ಬದುಕು ಕಟ್ಟಿಕೊಳ್ಳುವುದಷ್ಟೇ ಅಲ್ಲದೆ, ಉಳಿದವರ ಬಾಳನ್ನೂ ಬೆಳಗಿಸಲಿದ್ದಾರೆ ಎಂದು ಚಂದ್ರಕಲಾ ನಂದಾವರ ತಿಳಿಸಿದ್ದಾರೆ.

ಹಿಂದೂ-ಮುಸ್ಲಿಂ ಎರಡೂ ಧರ್ಮಗಳಲ್ಲಿ ಮಹಿಳೆಯರನ್ನು ಸಕಾರಾತ್ಮಕ ಹಾಗೂ ನಕಾರಾತ್ಮಕವಾಗಿ ನೋಡುವ ವೈಖರಿಯು ಇತಿಹಾಸದಲ್ಲೂ ಇದೆ; ಪ್ರಸಕ್ತ ದಿನಮಾನಗಳಲ್ಲೂ ಇದೆ. ಇದನ್ನು ನಿರಂತರವಾಗಿ ಉಲ್ಲೇಖಿಸುತ್ತಾ ಬಂದಿದ್ದೇನೆ. ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮುಖ್ಯವಾಹಿನಿಗೆ ಬರಬೇಕು. ತಮ್ಮ ಆಸಕ್ತ ಕ್ಷೇತ್ರಗಳಲ್ಲಿ ಅವಿರತವಾಗಿ ಗುರುತಿಸಿಕೊಳ್ಳಬೇಕು ಎಂದರು.

ಹೆಣ್ಣುಮಕ್ಕಳಿಗೆ ಪೋಷಕರು ಎಲ್ಲ ವಿಷಯಗಳಲ್ಲೂ ಪ್ರೋತ್ಸಾಹಿಸಬೇಕು. ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ದಿ.ಮುಮ್ತಾಝ್ ಬೇಗಂ ಅವರ ಮನೆಯವರು ಕೂಡ ಅವರಿಗೆ ಎಲ್ಲ ಸಂದರ್ಭದಲ್ಲಿ ಸಹಕರಿಸಿದ್ದರು. ಹಾಗಾಗಿಯೇ ಮುಮ್ತಾಝ್ ಎಲ್ಲವನ್ನೂ ಸಾಧಿಸಿ ತೋರಿಸಿದರು. ಮುಗ್ಧತೆಯ ಪ್ರತಿರೂಪವಾಗಿದ್ದ ಮುಮ್ತಾಝ್ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇಆದ ಕೊಡುಗೆ ನೀಡಿದ್ದಾರೆ. ಸಾಹಿತ್ಯ ಎನ್ನುವುದು ಜೀವನದ ಅನುಭವದ ದ್ರವ್ಯ. ಇದನ್ನು ಮುಮ್ತಾಝ್ ಅವರ ಸಾಹಿತ್ಯಿಕ ಬರಹದಲ್ಲಿ ಕಾಣಬಹುದಾಗಿದೆ ಎಂದರು. ಕೊನೆಗೆ ಮುಮ್ತಾಝ್ ಅವರ ಕೃತಿಗಳ ಬಗ್ಗೆ ವಿಶ್ಲೇಷಿಸಿದರು.

2019ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿಯನ್ನು ದಿ.ಮುಮ್ತಾಝ್ ಬೇಗಂ ಅವರ ಪುತ್ರ ಜಹೀರ್ ಅಹ್ಮದ್ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಮುಸ್ಲಿಂ ಮಹಿಳಾ ಸಾಹಿತ್ಯ ಸಂಘದ ಸಮಿನಾ ಅಫ್ಸನಾ, ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದ ತೀರ್ಪುಗಾರರಾದ ಅಬ್ದುಲ್ ರಝಾಕ್ ಅನಂತಾಡಿ, ಅಬ್ದುಲ್ ರಹಿಮಾನ್ ಕುತ್ತೆತ್ತೂರು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಹಮ್ಮದ್ ಸಲೀಂ ಬೋಳಂಗಡಿ ಪ್ರಾರ್ಥಿಸಿದರು. ಮುಸ್ಲಿಂ ಲೇಖಕರ ಸಂಘದ ಜೊತೆ ಕಾರ್ಯದರ್ಶಿ ಎ.ಕೆ. ಕುಕ್ಕಿಲ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.

ಕವಿಗೋಷ್ಠಿ: ಕವಿಗೋಷ್ಠಿಯನ್ನು ಸಾಹಿತಿ ಮುಹಮ್ಮದ್ ಬಡ್ಡೂರು ಉದ್ಘಾಟಿಸಿ, ಕವಿಗೋಷ್ಠಿಯಲ್ಲಿ ಕವನ ಮಂಡಿಸಿದರು. ಪ್ರಶಾಂತಿ ಶೆಟ್ಟಿ ಇರುವೈಲು (ತುಳು), ರೇಮಂಡ್ ಡಿಕುನ್ಹ (ಕೊಂಕಣಿ), ಸಿಹಾನ ಬಿ.ಎಂ. (ಕನ್ನಡ) ಕವನ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X