Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನ್‍ಲೈನ್ ಜೂಜು ನಿಷೇಧಿಸಲು ಪೊಲೀಸ್...

ಆನ್‍ಲೈನ್ ಜೂಜು ನಿಷೇಧಿಸಲು ಪೊಲೀಸ್ ಕಾಯ್ದೆಗೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ4 Sept 2021 5:25 PM IST
share
ಆನ್‍ಲೈನ್ ಜೂಜು ನಿಷೇಧಿಸಲು ಪೊಲೀಸ್ ಕಾಯ್ದೆಗೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು, ಸೆ. 4: ರಾಜ್ಯದಲ್ಲಿ ಎಲ್ಲ ರೀತಿಯ `ಆನ್‍ಲೈನ್ ಜೂಜು' ನಿಷೇಧಿಸಲು ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಮಾಡಲಾಗಿದ್ದು, `ಆನ್‍ಲೈನ್ ಜೂಜು ನಿಷೇಧಿಸುವಂತೆ ಕೋರಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಈ ಸಂಬಂಧ ಸೂಕ್ತ ಕ್ರಮಕ್ಕೆ ಸೂಚಿಸಿತ್ತು. ಆ ಹಿನ್ನೆಲೆಯಲ್ಲಿ ಸರಕಾರ ಕರ್ನಾಟಕ ಪೋಲೀಸ್ ಕಾಯ್ದೆಗೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಂಪುಟ ಸಭೆ ಬಳಿಕ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿಜಿಟಲ್, ಹಣ, ಟೋಕನ್ ವ್ಯವಸ್ಥೆ ಸೇರಿದಂತೆ ಯಾವುದೇ ರೂಪದಲ್ಲಿ ಹಣವನ್ನು ಪಣಕ್ಕಿಟ್ಟು ಆಡುವ ಆನ್‍ಲೈನ್ ಜೂಜಾಟವನ್ನು ನಿಯಂತ್ರಿಸಲು ಕರ್ನಾಟಕ ಪೆÇಲೀಸ್ ಕಾಯ್ದೆಯ ಅಡಿಯಲ್ಲಿ ಕ್ರಮ ಜರುಗಿಸಲು ಅವಕಾಶ ಕಲ್ಪಿಸಲಾಗಿದೆ. ಸೆ.13ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಉದ್ದೇಶಿತ ಮಸೂದೆ ಮಂಡಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದರು.

17.72 ಕೋಟಿ ರೂ.ಮಂಜೂರು: ಸಂಭವನೀಯ ಕೋವಿಡ್ ಮೂರನೆ ಮೂರನೆ ಅಲೆ ಎದುರಿಸಲು ಔಷಧಿಗಳು ಸೇರಿದಂತೆ ಅಗತ್ಯ ವೈದ್ಯಕೀಯ ಪರಿಕರಣಗಳ ಖರೀದಿಗೆ ಆರೋಗ್ಯ ಇಲಾಖೆಗೆ 17.72 ಕೋಟಿ ರೂ.ಮಂಜೂರು ಮಾಡುವ ಪ್ರಸ್ತಾವಕ್ಕೆ ಸಂಪುಟ ಅನುಮೋದನೆ ನೀಡಿದೆ. ಅಲ್ಲದೆ, ಮಾಗಡಿ ತಾಲೂಕಿನ ಚಿಕ್ಕಕಲ್ಯ ಮತ್ತು ಚನ್ನರಾಯಪಟ್ಟಣದ ಕೈಗಾರಿಕಾ ತರಬೇತಿ ಕೇಂದ್ರಗಳನ್ನು 101 ಕೋಟಿ ರೂ.ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಪ್ರಸ್ತಾವಕ್ಕೂ ಸಂಪುಟ ಸಮ್ಮತಿಸಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಪ್ರಕರಣ ಕೈಬಿಡಲು ತೀರ್ಮಾನ: ಮೈಸೂರು ಅರಮನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಲೋಕಾಯುಕ್ತ ಪ್ರಕರಣಗಳ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಪ್ರಕರಣ ಕೈಬಿಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ. ಅರಮನೆಯ ಗೋಡೆ ಮತ್ತು ಕಂಬಗಳಿಗೆ ಚಿನ್ನದ ಲೇಪನ ಕಾಮಗಾರಿ, ಆನೆಗಳಿಗೆ ನೆಲಹಾಸು ಹಾಕುವ ಕಾಮಗಾರಿಗಳು, ಛಾಯಾಗ್ರಾಹಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಕೈಬಿಡಲು ಸಂಪುಟ ಸಮ್ಮತಿಸಿದೆ ಎಂದು ಅವರು ತಿಳಿಸಿದರು.

ಅಲ್ಲದೆ, ತುಮಕೂರು ಜಿಲ್ಲೆಯ ಹೇಮಾವತಿ ನಾಲೆಯಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ ಒಟ್ಟು 98.50 ಕೋಟಿ ರೂ. ಬಿಡುಗಡೆಗೆ ನಿರ್ಧಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಮಾಧುಸ್ವಾಮಿ ಇದೇ ವೇಳೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X