Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲಾ, ತಾಲೂಕು ಪಂಚಾಯತ್ ಕ್ಷೇತ್ರಗಳ...

ಜಿಲ್ಲಾ, ತಾಲೂಕು ಪಂಚಾಯತ್ ಕ್ಷೇತ್ರಗಳ ಪುನರ್ ವಿಂಗಡಣೆಗೆ ಆಯೋಗ ರಚಿಸಲು ಸಂಪುಟ ಅಸ್ತು: ಸಚಿವ ಮಾಧುಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ4 Sept 2021 5:35 PM IST
share
ಜಿಲ್ಲಾ, ತಾಲೂಕು ಪಂಚಾಯತ್  ಕ್ಷೇತ್ರಗಳ ಪುನರ್ ವಿಂಗಡಣೆಗೆ ಆಯೋಗ ರಚಿಸಲು ಸಂಪುಟ ಅಸ್ತು: ಸಚಿವ ಮಾಧುಸ್ವಾಮಿ

ಬೆಂಗಳೂರು, ಸೆ. 4: `ರಾಜ್ಯದಲ್ಲಿನ ಜಿಲ್ಲಾ ಪಂಚಾಯತ್  ಮತ್ತು ತಾಲೂಕು ಪಂಚಾಯತ್  ಕ್ಷೇತ್ರಗಳ ಪುನವಿರ್ಂಗಡಣೆಗೆ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪ್ರತ್ಯೇಕ ಕ್ಷೇತ್ರ ಪುನವಿರ್ಂಗಡಣಾ ಆಯೋಗ ರಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ' ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, `ಪ್ರತ್ಯೇಕ ಆಯೋಗ ರಚನೆಗೆ ಪೂರಕವಾಗಿ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಕಾನೂನಿನ ಪ್ರಕಾರ ಚುನಾವಣಾ ಆಯೋಗವೇ ಕ್ಷೇತ್ರ ಪುನವಿರ್ಂಗಡಣೆ ಮಾಡಲು ಅವಕಾಶವಿಲ್ಲ. ಕಳೆದ ಬಾರಿ ತಪ್ಪಾಗಿ ಆ ರೀತಿ ಪ್ರಕ್ರಿಯೆ ನಡೆಸಲಾಗಿದೆ.

ಇದರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತ್  ಕ್ಷೇತ್ರಗಳ ಪುನವಿರ್ಂಗಡಣೆಯಲ್ಲಿ ತಪ್ಪುಗಳಾಗಿವೆ ಎಂದು ಆರೋಪಿಸಿ ಹೈಕೋರ್ಟ್‍ಗೆ 2 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಸಮಸ್ಯೆ ತಪ್ಪಿಸಲು ಪ್ರತ್ಯೇಕ ಆಯೋಗ ರಚನೆಗೆ ತೀರ್ಮಾನಿಸಲಾಗಿದೆ. ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಕ್ಷೇತ್ರ ಪುನವಿರ್ಂಗಡಣಾ ಆಯೋಗದಲ್ಲಿ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸದಸ್ಯರಾಗಲಿದ್ದು, ಆಯುಕ್ತರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಅಗತ್ಯ ಇರುವ ಎಲ್ಲ ಸಂದರ್ಭಗಳಲ್ಲಿ ಸೀಮಿತ ಕಾಲಾವಧಿಗೆ ಆಯೋಗವನ್ನು ನೇಮಿಸಲಾಗುವುದು ಎಂದು ತಿಳಿಸಿದರು.

`ಪ್ರತ್ಯೇಕ ಆಯೋಗ ಸಿದ್ಧಪಡಿಸುವ ಕ್ಷೇತ್ರ ಪುನವಿರ್ಂಗಡಣಾ ವರದಿಗಳಿಗೆ ಎರಡು ಹಂತಗಳಲ್ಲಿ ಸಲಹೆ, ಆಕ್ಷೇಪಣೆ ಸ್ವೀಕರಿಸಿ, ಇತ್ಯರ್ಥಪಡಿಸಲಾಗುವುದು. ಮೊದಲು ಜಿಲ್ಲಾಧಿಕಾರಿ ಹಂತದಲ್ಲಿ ಆಕ್ಷೇಪಣೆ ಸ್ವೀಕರಿಸಲಾಗುವುದು. ಅಂತಿಮವಾಗಿ ಕ್ಷೇತ್ರ ಪುನವಿರ್ಂಗಡಣಾ ಆಯೋಗವೇ ಆಕ್ಷೇಪಣೆ ಸ್ವೀಕರಿಸಿ, ವಿಲೇವಾರಿ ಮಾಡುವ ವ್ಯವಸ್ಥೆ ಬರಲಿದೆ ಎಂದು ಸಚಿವ ಮಾಧುಸ್ವಾಮಿ ಇದೇ ವೇಳೆ ಸ್ಪಷ್ಟಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X