Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರ್ಹರ ಪಡಿತರ ಚೀಟಿ ರದ್ದುಪಡಿಸುವುದಿಲ್ಲ:...

ಅರ್ಹರ ಪಡಿತರ ಚೀಟಿ ರದ್ದುಪಡಿಸುವುದಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ4 Sept 2021 6:31 PM IST
share
ಅರ್ಹರ ಪಡಿತರ ಚೀಟಿ ರದ್ದುಪಡಿಸುವುದಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು, ಸೆ. 4: `ರಾಜ್ಯದಲ್ಲಿ ದ್ವಿಚಕ್ರ ವಾಹನ, ಟಿವಿ, ಫ್ರಿಡ್ಜ್ ಹೊಂದಿದ್ದಾರೆಂಬ ಕಾರಣಕ್ಕೆ ಅಂತ್ಯೋದಯ ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿ ರದ್ದುಪಡಿಸುವುದಿಲ್ಲ' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಶನಿವಾರ ಸ್ಪಷ್ಟಣೆ ನೀಡಿದೆ.

ಶನಿವಾರ ಈ ಸಂಬಂಧ ಆಹಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಹಾಗೂ ಆಹಾರ ಇಲಾಖೆ ಆಯುಕ್ತೆ ಡಾ.ಶಮ್ಲಾ ಇಕ್ಬಾಲ್ ಪ್ರತ್ಯೇಕ ಪ್ರಕಟನೆ ನೀಡಿದ್ದು, `ದ್ವಿಚಕ್ರ ವಾಹನ, ಟಿವಿ ಹಾಗೂ ಫ್ರಿಡ್ಜ್ ಹೊಂದಿರುವವರ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಸರಕಾರ ರದ್ದುಪಡಿಸಿದೆ' ಎಂಬ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಸ್ಪಷ್ಟಣೆ ನೀಡಿದ್ದು, ಇಂತಹ ಯಾವುದೇ ನಿರ್ದೇಶನ ಅಥವಾ ಆದೇಶವನ್ನು ರಾಜ್ಯ ಸರಕಾರ ಯಾವುದೇ ಜಿಲ್ಲೆಗಳಿಗೆ ನೀಡಿರುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅನರ್ಹ ಅಂತ್ಯೋದಯ ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿ ಹೊಂದಿದ್ದಾರೆಂಬ ದೂರುಗಳ ಹಿನ್ನೆಲೆಯಲ್ಲಿ ಅಂತಹ ಅನರ್ಹ ಕುಟುಂಬಗಳಿಂದ ಪಡಿತರ ಚೀಟಿಗಳನ್ನು ಹಿಂತಿರುಗಿಸಲು ಸೂಚಿಸಲಾಗಿದೆ. ಜೊತೆಗೆ ವಿವಿಧ ರೀತಿಯ ಪರಿಶೀಲನೆಗಳಿಂದ ಅನರ್ಹರನ್ನು ಪತ್ತೆ ಮಾಡಿ ಆದ್ಯತೇತರ ಕುಟುಂಬಗಳಿಗೆ (ಎಪಿಎಲ್) ವರ್ಗಾಯಿಸಲಾಗುತ್ತಿದೆ.

ಮೂರು ಹೆಕ್ಟೇರ್ ಗಿಂತ ಹೆಚ್ಚು ಜಮೀನು ಹೊಂದಿರುವ, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು ಮತ್ತು ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಹೆಚ್ಚು ಇರುವ ಕುಟುಂಬಗಳ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿ ಕುಟುಂಬಗಳ ಅನರ್ಹತೆಯನ್ನು ನಿರ್ಧರಿಸಿ, ಆದ್ಯತೇತರ ವರ್ಗಕ್ಕೆ (ಎಪಿಎಲ್) ಪರಿವರ್ತಿಸುವ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಪರಿಶೀಲನೆ ಇನ್ನೂ ಪ್ರಗತಿಯಲ್ಲಿದೆ.

ಅಲ್ಲದೆ, ಆದಾಯ ತೆರಿಗೆ ಇಲಾಖೆ ಮತ್ತು ವಾರ್ಷಿಕ ವರಮಾನ ಹಾಗೂ ಇತರೆ ಕಾರಣಗಳಿಗಾಗಿ ಆದ್ಯತೇತರ ಕುಟುಂಬಕ್ಕೆ ವರ್ಗಾಯಿಸಲ್ಪಟ್ಟ ಕೆಲವು ಕುಟುಂಬಗಳು ಈ ವಿಷಯವಾಗಿ ಸಲ್ಲಿಸುವ ಮನವಿಗಳನ್ನು ಮರು ಪರಿಶೀಲಿಸಿ, ಅರ್ಹ ಕುಟುಂಬಗಳನ್ನು ಆದ್ಯತಾ ಕುಟುಂಬಗಳಾಗಿ ಮುಂದುವರೆಸಲು ಜಿಲ್ಲಾಧಿಕಾರಿಗಳಿಗೆ ಕಾಲ ಕಾಲಕ್ಕೆ ಸೂಚನೆ ನೀಡಲಾಗುತ್ತಿದೆ. ಯಾವುದೇ ಅರ್ಹ ಕುಟುಂಬಗಳ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿಗಳನ್ನು ಯಾವುದೇ ಅಧಿಕಾರಿ ಆಧಾರ ರಹಿತವಾಗಿ ರದ್ದುಪಡಿಸಿದರೆ ಅಥವಾ ಪರಿವರ್ತಿಸಿದರೆ, ಅಂತಹ ಕುಟುಂಗಳು ತಾಲೂಕಿನ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳು ಅಥವಾ ಆಹಾರ ಇಲಾಖೆ ಜಂಟಿ/ಉಪ ನಿರ್ದೇಶಕರನ್ನು ಸಂಪರ್ಕಿಸಲು ತಿಳಿಸಿದ್ದು, ಅರ್ಹರಿಗೆ ಅನ್ಯಾಯವಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

ಅನರ್ಹರು: ಮಾನದಂಡಕ್ಕೆ ವಿರುದ್ಧವಾಗಿ ಬಿಪಿಎಲ್ ಕಾರ್ಡ್ ಪಡೆದ ಒಟ್ಟು ಅನರ್ಹ ಕುಟುಂಬ-3,55,516, ಆ ಪೈಕಿ ಸರಕಾರಿ ನೌಕರರು-2,127, ಮೂರು ಹೆಕ್ಟೇರ್‍ಗಿಂತ ಹೆಚ್ಚು ಜಮೀನು ಹೊಂದಿರುವವರು-2.18 ಲಕ್ಷ. ವರದಿಯಾದ ಅಂತ್ಯೋದಯ ಕಾರ್ಡ್-27,527, ಆದ್ಯೇತರಕ್ಕೆ(ಬಿಪಿಎಲ್) ಪರಿವರ್ತಿಸಿದ ಅಂತ್ಯೋದಯ ಕಾರ್ಡ್-7,413, ವರದಿಯಾದ ಆದ್ಯತಾ(ಬಿಪಿಎಲ್)ಕಾರ್ಡ್-3,28,178, ಆದ್ಯೇತರಕ್ಕೆ ಪರಿವರ್ತಿಸಿದ(ಎಪಿಎಲ್) ಕಾರ್ಡ್-1,09,790 ಈವರೆಗೆ ಪರಿವರ್ತಿಸಿದ ಒಟ್ಟು ಕುಟುಂಬ-1,17,203.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X