Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಬಂಡವಾಳ ಹೂಡಲು...

ರಾಜ್ಯದಲ್ಲಿ ಬಂಡವಾಳ ಹೂಡಲು ಥೈಲ್ಯಾಂಡ್‍ಗೆ ಆಹ್ವಾನ: ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ4 Sept 2021 9:39 PM IST
share
ರಾಜ್ಯದಲ್ಲಿ ಬಂಡವಾಳ ಹೂಡಲು ಥೈಲ್ಯಾಂಡ್‍ಗೆ ಆಹ್ವಾನ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಸೆ.4: ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದರೆ ಅಂತಹ ಕಂಪೆನಿಗಳಿಗೆ ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಆಶ್ವಾಸನೆ ಕೊಟ್ಟಿದ್ದಾರೆ.

ಈ ಸಂಬಂಧ ಶನಿವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಥೈಲ್ಯಾಂಡ್‍ನ ರಾಯಭಾರಿ ನಿತಿರೂಗೆ ಫೋನ್ ಪ್ರಸರ್ಟ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳನ್ನು ಅವರು ಮನವರಿಕೆ ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಥೈಲ್ಯಾಂಡ್‍ನ ರಾಯಭಾರಿ ಭಾರತದಲ್ಲಿ ಉದ್ಯಮ ನಡೆಸಲು ಸ್ಟಾರ್ಟಪ್ ಮತ್ತು ಹೆಚ್ಚಿನ ಅನ್ವೇಷಣೆ ಬಗ್ಗೆ ಗಮನ ಸೆಳೆದರು. 

ಇದಕ್ಕೂ ಸಹ ಸಮ್ಮತಿಸಿದ ಸಚಿವ ಮುರುಗೇಶ್ ನಿರಾಣಿ, ನೀವು ಸುಲಲಿತವಾಗಿ ಉದ್ಯಮ ನಡೆಸಲು ಯಾವೆಲ್ಲ ಸೌಲಭ್ಯಗಳು ಬೇಕೋ ಅವೆಲ್ಲವನ್ನೂ ಕಾಲಮಿತಿಯೊಳಗೆ ಒದಗಿಸಿಕೊಡುತ್ತೇವೆ. ನೀವು ಮುಕ್ತ ಮನಸ್ಸಿನಿಂದ ರಾಜ್ಯದಲ್ಲಿ ಬಂಡವಾಳ ಹೂಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರಕಾರ 2020-25ನೆ ಸಾಲಿನ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದೆ. ಇದು ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿದೆ. ಇಡೀ ದೇಶಕ್ಕೆ ಮಾದರಿಯಾಗುವಂತಹ ನೀತಿ ಇದಾಗಿದೆ. ಕರ್ನಾಟಕ ಇಂದು ದೇಶದಲ್ಲೇ ಅತಿ ಹೆಚ್ಚು ವಿದೇಶಿ ಬಂಡವಾಳ ಆಕರ್ಷಿಸುತ್ತಿರುವ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ನಾವು ಉದ್ಯಮಿಗಳಿಗೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿದ್ದೇವೆ. ಮುಂಚೂಣಿಯಲ್ಲಿರುವ ಅನೇಕ ಜಾಗತಿಕ ಕಂಪೆನಿಗಳು ಇಂದು ಬಂಡವಾಳ ಹೂಡಿಕೆ ಮಾಡಿವೆ ಎಂದು ಅವರು ಹೇಳಿದರು.

2020-21ರಲ್ಲಿ ಕರ್ನಾಟಕವು ವಿದೇಶಿ ಬಂಡವಾಳ ಆಕರ್ಷಣೆ ಮಾಡಿರುವ ಅತಿ ಹೆಚ್ಚು ರಾಜ್ಯಗಳಲ್ಲಿ ಮೂರನೆ ರಾಜ್ಯವಾಗಿದೆ. ಸುಮಾರು 7.6 ಬಿಲಿಯನ್ ಡಾಲರ್ ಬಂಡವಾಳ ರಾಜ್ಯಕ್ಕೆ ಹರಿದು ಬಂದಿದೆ. ಇದು ದೇಶದ ಒಟ್ಟು ಶೇ.16ರಷ್ಟು. ಬೆಂಗಳೂರಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶ್ವದ ಯಾವುದೇ ಭಾಗಕ್ಕೂ ತಲುಪುವ ಸೌಲಭ್ಯವಿದೆ. ವಿಶ್ವದ ಮುಂಚೂಣಿಯಲ್ಲಿರುವ ಸಿಪಿ ಗ್ರೂಪ್, ಅಲೈಡ್ ಮೆಟಲ್ಸ್, ಪ್ರಕ್ಷ ರಿಯಲ್ ಎಸ್ಟೇಟ್ ಸೇರಿದಂತೆ ಅನೇಕ ಕಂಪೆನಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಮುರುಗೇಶ್ ನಿರಾಣಿ ಮನವರಿಕೆ ಮಾಡಿದರು.

ಕರ್ನಾಟಕವು ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ. ನವೀಕರಿಸಬಹುದಾದ ಇಂಧನ, ಆಟೋಮೊಬೈಲ್, ಜವಳಿ, ರೇμÉ್ಮ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾವು ಇತರೆ ರಾಜ್ಯಗಳಿಗಿಂತ ಮುಂದಿದ್ದೇವೆ. ಬೆಂಗಳೂರು ವಿಶ್ವದ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಲಸ್ಟರ್ ಆಗಿದೆ. ಸಾಂಕ್ರಾಮಿಕ ಪರಿಸ್ಥಿತಿಯ ಹೊರತಾಗಿಯೂ ಕರ್ನಾಟಕವು ಕೈಗಾರಿಕೆಗಳನ್ನು ಬೆಂಬಲಿಸಲು ಮತ್ತು ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ಸಾಧ್ಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರ್ಚ್ 2020ರಲ್ಲಿ ಆರಂಭದಿಂದ ಕರ್ನಾಟಕವು ಯಶಸ್ವಿಯಾಗಿ 1 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಿನ ಹೂಡಿಕೆಗಳನ್ನು ಗಳಿಸಿದೆ. ಕೋವಿಡ್‍ನ ಮೊದಲ ಅಲೆಯ ಸಮಯದಲ್ಲಿ, ಲಾಕ್‍ಡೌನ್ ಅನ್ನು ತೆಗೆದುಹಾಕಿದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಇದು ಪ್ರಮುಖ ಉದ್ಯಮಗಳಾದ ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಮತ್ತು ರಕ್ಷಣೆಗೆ ಸಹಾಯ ಮಾಡಿತು. ಕೋವಿಡ್‍ನ ಎರಡನೇ ಅಲೆ ಸಮಯದಲ್ಲಿ, ಲಾಕ್‍ಡೌನ್ ಸಮಯದಲ್ಲಿ ಅಗತ್ಯ ಕೈಗಾರಿಕೆಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಯಿತು ಎಂದು ಮುರುಗೇಶ್ ನಿರಾಣಿ ತಿಳಿಸಿದರು.

ವಿಶ್ವದ ಅತಿದೊಡ್ಡ ಕೃಷಿ ಸಮೂಹಗಳಲ್ಲಿ ಒಂದಾದ 1997ರಲ್ಲಿ ಸಿಪಿ ಗ್ರೂಪ್-ರಾಜ್ಯಕ್ಕೆ ಬಂದಿತು. 2004 ರಿಂದ, ಥಾಯ್ ಏರ್‍ವೇಸ್ ಅಂತರ್‍ರಾಷ್ಟ್ರೀಯ ಸ್ಥಳಗಳಿಗೆ ಬೆಂಗಳೂರನ್ನು ನೇರವಾಗಿ ಸಂಪರ್ಕಿಸುವ ಮೊದಲ ವಿಮಾನಯಾನ ಸಂಸ್ಥೆಯಾಗಿದೆ ಎಂದು ಅವರು ಹೇಳಿದರು.
ಸರಕಾರ ರಾಜ್ಯದಲ್ಲಿ ಹೂಡಿಕೆದಾರರ ಸ್ನೇಹಪರತೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ನಾವು ಈಗಾಗಲೇ ಸಿಪಿ ಗ್ರೂಪ್, ಅಲೈಡ್ ಮೆಟಲ್ಸ್, ಪ್ರುಕ್ಸಾ ರಿಯಲ್ ಎಸ್ಟೇಟ್ ಮೊದಲಾದ ಬಹು ಥಾಯ್ ಕಂಪನಿಗಳಿಗೆ ನೆಲೆಯಾಗಿದ್ದು ಕರ್ನಾಟಕದಲ್ಲಿ ಉದ್ಯಮ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಅವರು ತಿಳಿಸಿದರು.

ಕರ್ನಾಟಕ ಮತ್ತು ಥೈಲ್ಯಾಂಡ್‍ನೊಂದಿಗೆ ಅಸ್ತಿತ್ವದಲ್ಲಿರುವ ಸಹಕಾರವನ್ನು ಹೆಚ್ಚಿಸುವ ಮೂಲಕ ಈ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ತುಂಬಾ ಉತ್ಸುಕರಾಗಿದ್ದೇವೆ. ಆಟೋ ಮತ್ತು ಆಟೋ ಎಲೆಕ್ಟ್ರಾನಿಕ್ಸ್, ಆಹಾರ ಸಂಸ್ಕರಣೆ ಜವಳಿಯಂತಹ ಪ್ರಮುಖ ಉದ್ಯಮಗಳಲ್ಲಿ ಸಾಮ್ಯತೆಗಳು ಇವೆ. ಎಲೆಕ್ಟ್ರಾನಿಕ್ಸ್ ವಿನ್ಯಾಸ, ಭಾರತದಲ್ಲಿ ರೇಷ್ಮೆ, ಕಾಫಿ ಉತ್ಪಾದನೆ, ನವೀಕರಿಸಬಹುದಾದ ಇಂಧನ, ಮೆಷಿನ್ ಟೂಲ್ಸ್ ತಯಾರಿಕೆ, ಭಾರತದ ಯಂತ್ರೋಪಕರಣಗಳ ಉತ್ಪಾದನೆಯಲ್ಲಿ ಶೇ.52ರಷ್ಟು ಪಾಲು ಕರ್ನಾಟಕದ್ದಾಗಿದೆ ಎಂದು ಅವರು ಅಂಕಿ ಅಂಶಗಳ ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X