ಮಂಗಳೂರು: ಕೆಎಸ್ಸಾರ್ಟಿಸಿ ಬಸ್‌ಗೆ ಹಾಲು ಸಾಗಾಟ ವಾಹನ ಢಿಕ್ಕಿ: ಚಾಲಕನಿಗೆ ಗಾಯ

ಮಂಗಳೂರು, ಸೆ.4: ನಗರದ ಕುಂಟಿಕಾನ ಸಮೀಪ ಕೆಎಸ್ಸಾರ್ಟಿಸಿ ಬಸ್‌ಗೆ ಹಾಲು ಸಾಗಾಟ ಮಾಡುತ್ತಿದ್ದ ವಾಹನ ಢಿಕ್ಕಿಯಾಗಿ ಹಾಲಿನ ಟೆಂಪೋ ಚಾಲಕ ಗಾಯಗೊಂಡಿದ್ದಾರೆ.
ಶನಿವಾರ ಸಂಜೆ ವೇಳೆ ಕೆಎಸ್ಸಾರ್ಟಿಸಿ ಬಸ್ ಡಿಪೋಗೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಹಾಲಿನ ವಾಹನ ಢಿಕ್ಕಿಯಾಗಿದೆ. ಇದರಿಂದ ಟೆಂಪೋ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ಇದರಿಂದ ಕೆಲ ಹೊತ್ತು ಈ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಈ ಕುರಿತು ಮಂಗಳೂರು ಪೂರ್ವ (ಕದ್ರಿ) ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story





