Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. `ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್...

`ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ ಕೋರ್ಸ್'ಗೆ ದಾಖಲಾದ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ: ಸಚಿವ ಡಾ. ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ4 Sept 2021 10:43 PM IST
share
`ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ ಕೋರ್ಸ್ಗೆ ದಾಖಲಾದ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ: ಸಚಿವ ಡಾ. ಅಶ್ವತ್ಥನಾರಾಯಣ

ಬೆಂಗಳೂರು, ಸೆ. 4: `ಪ್ರತಿಭೆಯಿಂದಲೇ ತನ್ನ ಮನೆ ಬಾಗಿಲಲ್ಲೇ `ಪಾಲಿಟೆಕ್ನಿಕ್'ಗೆ ಪ್ರವೇಶ ಪಡೆದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಎಂ.ಮೌನೇಶ್‍ಗೆ ಡಿಪ್ಲೊಮಾ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ. 

ಶನಿವಾರದಂದು ಸಚಿವರು ಮೌನೇಶ್ ಮತ್ತವರ ಪೋಷಕರಿಗೆ ಕರೆ ಮಾಡಿ ಮಾತನಾಡಿದರಲ್ಲದೆ, ಹತ್ತನೆ ತರಗತಿಯಲ್ಲಿ ಶೇ.90ರಷ್ಟು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಯನ್ನು ಶ್ಲಾಘಿಸಿದರು. ಅಲ್ಲದೆ, ಮುಂದಿನ ಮೂರು ವರ್ಷಗಳ ವಿದ್ಯಾಭ್ಯಾಸವನ್ನು ರಾಜ್ಯ ಸರಕಾರ ಸಂಪೂರ್ಣ ಉಚಿತವಾಗಿ ನೀಡಲಿದೆ ಎಂದು ತಿಳಿಸಿದರು. 

ಇದೇ ವೇಳೆ ಮೌನೇಶ್ ಪೋಷಕರ ಜತೆಯೂ ಮಾತನಾಡಿದ ಸಚಿವರು, `ನಿಮ್ಮ ಪುತ್ರನಿಗೆ ಉಚಿತ ಶಿಕ್ಷಣ ನೀಡಲಾಗುವುದು. ಯಾವುದೇ ಚಿಂತೆ ನಿಮಗೆ ಬೇಡ. ಎಲ್ಲವನ್ನೂ ಸರಕಾರವೇ ನೋಡಿಕೊಳ್ಳಲಿದೆ. ತದ ನಂತರ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಬೇಕಾದರೂ ಸರಕಾರ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು. ವಿದ್ಯಾರ್ಥಿ ಮೌನೇಶ್ ಹಾಗೂ ಅವರ ಪೆÇೀಷಕರು ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. 

ಪ್ರಾಂಶುಪಾಲರ ಕಾರ್ಯಕ್ಕೆ ಮೆಚ್ಚುಗೆ: ವಿದ್ಯಾರ್ಥಿಯ ಮನೆ ಬಾಗಿಲಿಗೇ ತೆರಳಿ ಪ್ರವೇಶಾತಿ ನೀಡಿದ ಕೂಡ್ಲಿಗಿಯ ಸರಕಾರಿ ಪಾಲಿಟೆಕ್ನಿಕ್'ನ ಪ್ರಾಂಶುಪಾಲರು, ಬೋಧಕ ಸಿಬ್ಬಂದಿಯನ್ನು ಇದೇ ವೇಳೆ ಸಚಿವ ಅಶ್ವತ್ಥನಾರಾಯಣ ಶ್ಲಾಘಿಸಿದರು. ಪ್ರಾಂಶುಪಾಲ ಎಸ್.ಮಲ್ಲಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ ಸಚಿವರು, `ನೀವು ಬಹಳ ಒಳ್ಳೆಯ ಕೆಲಸ ಮಾಡಿದ್ದೀರಿ. ಆ ವಿದ್ಯಾರ್ಥಿಗೆ ತಗುಲುವ ಎಲ್ಲ ವೆಚ್ಚವನ್ನೂ ಸರಕಾರವೇ ಭರಿಸಲಿದೆ. ನಿಮ್ಮದೇ ವೆಚ್ಚದಲ್ಲಿ ಬಡ ವಿದ್ಯಾರ್ಥಿಯೊಬ್ಬರನ್ನು ದತ್ತು ಪಡೆದು, ಅವರ ಮನೆ ಬಾಗಿಲಿಗೇ ಹೋಗಿ ದಾಖಲು ಮಾಡಿಕೊಂಡಿರುವ ಕ್ರಮ ಮಾದರಿಯಾದದ್ದು' ಎಂದು ಹೇಳಿದರು. 

ಒಳ್ಳೆಯ ಉಪ ಕ್ರಮ: ನಂತರ ಈ ಬಗ್ಗೆ ಮಾತನಾಡಿದ ಸಚಿವರು, `ಇದೊಂದು ಅತ್ಯುತ್ತಮ ಪ್ರಯತ್ನ. ಆ `ಪಾಲಿಟೆಕ್ನಿಕ್'ನ ಪ್ರಾಚಾರ್ಯರು, ಬೋಧಕರ ಬದ್ಧತೆ ನನ್ನ ಹೃದಯ ಗೆದ್ದಿದೆ. ತಾಂತ್ರಿಕ ಮತ್ತು ಉನ್ನತ ಶಿಕ್ಷಣವನ್ನು ವಿದ್ಯಾರ್ಥಿಗಳ ಮನೆ ಬಾಗಿಲಿಗೇ ತಲುಪಿಸಬೇಕು ಎಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯವನ್ನು ಹಾಗೂ ಶೈಕ್ಷಣಿಕ ಸಮಾನತೆಯನ್ನೂ ಇವರು ಆರಂಭದಲ್ಲೇ ಸಾಕಾರ ಮಾಡಿದ್ದಾರೆ' ಎಂದು ಸಂತಸ ವ್ಯಕ್ತಪಡಿಸಿದರು. 

ಈ ವರ್ಷದಿಂದ ಹೊಸದಾಗಿ ಆರಂಭ ಮಾಡಲಾದ ಡಿಪ್ಲೊಮಾ ಕೋರ್ಸಗಳಲ್ಲಿ ಒಂದಾದ `ಸೈಬರ್ ಫಿಸಿಕಲ್ ಸಿಸ್ಟಮ್ಸ್ ಅಂಡ್ ಸೆಕ್ಯೂರಿಟಿ' ವಿಭಾಗದ ಕೊನೆಯ ಒಂದು ಸೀಟು ಉಳಿದಿತ್ತು. ಆ ಸೀಟಿಗೆ ಬಹಳ ಬೇಡಿಕೆ ಇದ್ದರೂ ಪಾಲಿಟೆಕ್ನಿಕ್ ಪ್ರಾಚಾರ್ಯ ಎಸ್.ಮಲ್ಲಪ್ಪ, ಇತರೆ ಬೋಧಕರು ಹಾಗೂ ಸಿಬ್ಬಂದಿ ತಾಲೂಕಿನ ಕುಡಿತಿನಿ ಗ್ರಾಮದ ಗುಡಿಸಲಿನಲ್ಲಿ ವಾಸಿಸುವ ಅಲೆಮಾರಿ ಜನಾಂಗದ ಬಡ ಪ್ರತಿಭಾವಂತ ವಿದ್ಯಾರ್ಥಿ ಎಂ.ಮೌನೇಶ್'ಗೆ ನೀಡಿದ್ದಾರೆ. ಇದು ಒಳ್ಳೆಯ ಕ್ರಮ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದರು. 

ಪ್ರಾಂಶುಪಾಲರು ಏನಂದರು?: ವಿದ್ಯಾರ್ಥಿ ಎಂ.ಮೌನೇಶ್'ಗೆ ಮೂರು ವರ್ಷದಲ್ಲಿ ಆಗುವ ಎಲ್ಲ ಖರ್ಚು-ವೆಚ್ಚವನ್ನು ನಾನೇ ಭರಿಸುವುದಾಗಿ ಹೇಳಿದ್ದೆ. ಬಳಿಕ ಸಚಿವರು ಸರಕಾರವೇ ಎಲ್ಲ ವೆಚ್ಚ ಭರಿಸಲಿದೆ ಎಂದು ಘೋಷಣೆ ಮಾಡಿದರು. ಹಾಗೆಯೇ, ಡಿಪೆÇ್ಲಮಾದಲ್ಲಿ ಈಗಾಗಲೇ ಅಳವಡಿಸಿಕೊಂಡಿರುವ ಜಾಗತಿಕ ಮಟ್ಟಕ್ಕೆ ಸಮನಾದ ಪಠ್ಯಕ್ರಮ, ಡಿಜಿಟಲ್ ಶಿಕ್ಷಣ, ಕಲಿಕಾ ನಿರ್ವಹಣಾ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ರೂಂ ಹಾಗೂ ಉಚಿತ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಈ ವಿದ್ಯಾರ್ಥಿಗೆ ಒದಗಿಸಲಾಗುವುದು ಎಂದು ಪ್ರಾಂಶುಪಾಲ ಎಸ್.ಮಲ್ಲಪ್ಪ ತಿಳಿಸಿದರು. 

ಮೌನೇಶ್ ಬಹಳ ಬಡತನದಲ್ಲಿದ್ದಾನೆ. ಅವರು ಒಂದು ಕೊಳಗೇರಿಯಲ್ಲಿ ವಾಸ ಮಾಡುತ್ತಿದ್ದು, ಅಲ್ಲಿ ಸುಮಾರು 150 ಮನೆಗಳಿವೆ. ನಾನು, ನಮ್ಮ ಬೋಧಕರು ಮತ್ತು ಸಿಬ್ಬಂದಿ ಜತೆ ತೆರಳಿ ಅಲ್ಲಿನ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ. ನಮಗೆ ಸರಕಾರದಿಂದಲೂ ಉತ್ತಮ ಪ್ರೋತ್ಸಾಹವಿದೆ. ಪಾಲಿಟೆಕ್ನಿಕ್'ನಲ್ಲಿ ಕಲಿಯಲು ಸಾಕಷ್ಟು ಸೌಲಭ್ಯಗಳಿವೆ. ಇದೆಲ್ಲವನ್ನೂ ನಾನು ಜನರಿಗೆ ವಿವರಿಸಿ ಹೇಳಿದ್ದೇನೆ. ಎಲ್ಲರಿಗೂ ಮೌನೇಶ್ ದಾಖಲಾತಿ ಮತ್ತು ದತ್ತು ಸ್ವೀಕಾರ ವಿಷಯ ಪ್ರೇರಣೆ ನೀಡಿದೆ ಎಂದು ಮಲ್ಲಪ್ಪ ಹೇಳಿದರು. 

ಮುಖ್ಯವಾಗಿ ನಮ್ಮ `ಪಾಲಿಟೆಕ್ನಿಕ್'ನ ಸಹೋದ್ಯೋಗಿಗಳು ಮುಂದಿನ ವರ್ಷದಿಂದ ತಲಾ ಒಬ್ಬೊಬ್ಬ ಬಡ ವಿದ್ಯಾರ್ಥಿಯನ್ನು ದತ್ತು ತೆಗೆದುಕೊಂಡು ಓದಿಸುವ ಸಂಕಲ್ಪ ಮಾಡಿದ್ದಾರೆ. ಇದು ನನಗೆ ತುಂಬಾ ಸಂತೋಷ ಉಂಟು ಮಾಡಿದೆ. ಪಾಲಿಟೆಕ್ನಿಕ್'ನಲ್ಲಿ ಮೂರು ವರ್ಷ ವ್ಯಾಸಂಗ ಮುಗಿದ ಮೇಲೆ ಅವರು ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ ಅವಖಾಶವೂ ಇದೆ. ಅಗತ್ಯಬಿದ್ದರೆ ಉನ್ನತ ಓದಿಗೂ ಹೋಗಬಹುದು. ಸರಕಾರದ ಸೌಲಭ್ಯಗಳ ಬಗ್ಗೆ ನಾವು ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X