Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಅಧ್ಯಯನ ತಂಡ ಭೇಟಿ: ಮಾರ್ಗಸೂಚಿ...

ಕೇಂದ್ರ ಅಧ್ಯಯನ ತಂಡ ಭೇಟಿ: ಮಾರ್ಗಸೂಚಿ ಬದಲಿಸಿ ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿ ಮನವಿ

ವಾರ್ತಾಭಾರತಿವಾರ್ತಾಭಾರತಿ4 Sept 2021 11:12 PM IST
share
ಕೇಂದ್ರ ಅಧ್ಯಯನ ತಂಡ ಭೇಟಿ: ಮಾರ್ಗಸೂಚಿ ಬದಲಿಸಿ ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿ ಮನವಿ

ಬೆಂಗಳೂರು, ಸೆ. 4: ನಾಲ್ಕು ವರ್ಷದಿಂದ ಪ್ರವಾಹ, ಭೂಕುಸಿತದ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಎನ್.ಡಿ.ಆರ್.ಎಫ್. ಪರಿಹಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ, ಹೆಚ್ಚುವರಿ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ತಂಡಕ್ಕೆ ಸಲಹೆ ಮಾಡಿದರು.

ಕೇಂದ್ರ ಗೃಹ ಸಚಿವಾಲಯದ ಸುಶೀಲ್ ಪಾಲ್ ನೇತೃತ್ವದ ಕೇಂದ್ರ ಅಧ್ಯಯನ ತಂಡ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಪ್ರವಾಹದಿಂದ ಸಂಭವಿಸಿದ ಹಾನಿಯ ಕುರಿತು ಚರ್ಚೆ ನಡೆಸಿತು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಮಿತ್ ಶಾ ಅವರಿಗೆ ಕೇಂದ್ರ ತಂಡ ಕಳುಹಿಸಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು 'ರಕ್ಷಣೆ ಮತ್ತು ತುರ್ತು ಪರಿಹಾರ ಒದಗಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಆದರೆ ಜನರ ಪುನರ್ವಸತಿಗೆ ಹೆಚ್ಚಿನ ನೆರವಿನ ಅಗತ್ಯವಿದೆ' ಎಂದು ನುಡಿದರು.

ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ ಕೂಡಲೇ ನೂರು ಕೋಟಿ ರೂ. ಬಿಡುಗಡೆ ಮಾಡಿದ್ದು, ಮೂರು ದಿನಗಳೊಳಗೆ ಬೆಳಗಾವಿ ಉತ್ತರ ಕನ್ನಡ ಜಿಲ್ಲೆಗಳಿಗೆ 500 ಕೋಟಿ ರೂ. ಒದಗಿಸಲಾಗಿದೆ ಎಂದರು.

ರಾಜ್ಯದ ವಾಸ್ತವಾಂಶಗಳನ್ನು ವಸ್ತುನಿಷ್ಠವಾಗಿ ಕೇಂದ್ರ ತಂಡದ ಮುಂದಿಡಲಾಗಿದೆ. ಇಂದು ಕ್ಷಣ ಕ್ಷಣದ ಮಾಹಿತಿ ಲಭ್ಯವಾಗುವ ಕಾರಣ, ಕೇಂದ್ರಕ್ಕೂ ಮಾಹಿತಿ ಲಭ್ಯವಿದೆ. ಕಳೆದ ನಾಲ್ಕು ವರ್ಷಗಳಿಂದ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಪ್ರತಿವರ್ಷ ಕುಟುಂಬಗಳ ಸ್ಥಳಾಂತರ, ಮನೆ ಕಳೆದುಕೊಳ್ಳುವ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ರಸ್ತೆ ಮತ್ತಿತರ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ. ಕಳೆದ 15 ವರ್ಷಗಳಲ್ಲಿ ರಸ್ತೆ, ವಿದ್ಯುತ್ ಮತ್ತಿತರ ಸಾರ್ವಜನಿಕ ಸೌಲಭ್ಯಗಳಿಗೆ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಅವುಗಳನ್ನು ಮರು ಸ್ಥಾಪಿಸುವುದು ಸವಾಲಿನ ಕೆಲಸವಾಗಿದೆ ಎಂದರು.

ರಾಜ್ಯ ಪ್ರಗತಿಪರ ಕೃಷಿ ರಾಜ್ಯವಾಗಿದ್ದು, ಈ ಬಾರಿ ಬಿತ್ತನೆ ಹೆಚ್ಚಾಗಿದ್ದು, ರೈತರೂ ಉತ್ಸಾಹದಿಂದ ಕೃಷಿ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಿದ್ದರು. ಆದರೆ ಪ್ರವಾಹದಿಂದ ಬೆಳೆ ನಷ್ಟವಾಗಿ ತೊಂದರೆ ಅನುಭವಿಸಿದ್ದಾರೆ ಎಂದರು.

ಆದ್ದರಿಂದ ರಾಜ್ಯಕ್ಕೆ ಗರಿಷ್ಠ ಪ್ರಮಾಣದ ನೆರವು ನೀಡುವಂತೆ ಮನವಿ ಮಾಡಿದರು. ರಾಜ್ಯವು ವಸ್ತುನಿಷ್ಠ ವರದಿ ಸಲ್ಲಿಸಿರುವುದಲ್ಲದೆ, ಅತ್ಯಂತ ಕ್ರಿಯಾಶೀಲವಾಗಿ ನಷ್ಟದ ವಿವರ ನೀಡಿದೆ ಎಂದು ಕೇಂದ್ರ ತಂಡದ ಮುಖ್ಯಸ್ಥ ಸುಶೀಲ್ ಪಾಲ್ ಮೆಚ್ಚುಗೆ ವ್ಯಕ್ತ ಪಡಿಸಿದರು.

ಕಂದಾಯ ಸಚಿವ ಆರ್. ಅಶೋಕ, ವಸತಿ ಸಚಿವ ವಿ.ಸೋಮಣ್ಣ, ಕೃಷಿ ಸಚಿವ ಬಿ.ಸಿ.. ಪಾಟೀಲ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X