ದ.ಕ. ಜಿಲ್ಲೆ : ಕೋವಿಡ್ಗೆ ಓರ್ವ ಬಲಿ; 183 ಮಂದಿಗೆ ಸೋಂಕು
![ದ.ಕ. ಜಿಲ್ಲೆ : ಕೋವಿಡ್ಗೆ ಓರ್ವ ಬಲಿ; 183 ಮಂದಿಗೆ ಸೋಂಕು ದ.ಕ. ಜಿಲ್ಲೆ : ಕೋವಿಡ್ಗೆ ಓರ್ವ ಬಲಿ; 183 ಮಂದಿಗೆ ಸೋಂಕು](https://www.varthabharati.in/sites/default/files/images/articles/2021/09/5/305442-1630855366.jpg)
ಮಂಗಳೂರು, ಸೆ.5: ದ.ಕ. ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಓರ್ವ ಮೃತಪಟ್ಟಿದ್ದು, 183 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ 221 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.1.70ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿನ 1,11,058 ಸೋಂಕಿತರ ಪೈಕಿ 1,07,357 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ಗೆ ಇಲ್ಲಿಯವರೆಗೆ 1,594 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ 2107 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story