6ರಿಂದ 8ರವರೆಗೆ ಭೌತಿಕ ತರಗತಿ ಆರಂಭ: ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್
ವಿದ್ಯಾರ್ಥಿಗಳ ಜೊತೆ ಸಚಿವ ಬಿ.ಸಿ ನಾಗೇಶ್
ಬೆಂಗಳುರು: ರಾಜ್ಯಾದ್ಯಂತ 6, 7 ಮತ್ತು 8ನೇ ಭೌತಿಕ ತರಗತಿ ಆರಂಭವಾಗಿದ್ದು, ಇಲ್ಲಿನ ಜೆ.ಬಿ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಚಾಕೊಲೇಟ್ ಹಂಚುವ ಮೂಲಕ ಶಾಲೆಗೆ ಸ್ವಾಗತಿಸಿದ್ದಾರೆ.
ಈಗಾಗಲೇ ಕೋವಿಡ್ ನಿಯಮಗಳನ್ನು ಪಾಲಿಸಿ ತರಗತಿಗಳನ್ನು ಆರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ಇಂದು ಶಾಲೆಗಳಿಗೆ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿದ್ದಾರೆ.
ನಂತರ ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳ ಜೊತೆ ಮಾತನಾಡಿದರು. ತರಗತಿಗಳನ್ನು ಮುಂದುವರಿಸುವ ಬಗ್ಗೆ ಪೋಷಕರ ಜತೆ ರ್ಚಿಸಿ, ಅಭಿಪ್ರಾಯ ಪಡೆದ ಬಳಿಕ ಮುಂದಿನ ದಿನಗಳಲ್ಲಿ ನಿರ್ಧಾರ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.
Next Story