Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11...

ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ6 Sept 2021 10:11 PM IST
share
ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ

ಬೆಂಗಳೂರು, ಸೆ. 6: `ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು' ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, `ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವಿಜಯನಗರ ಜಿಲ್ಲೆಯಲ್ಲಿ ಸರಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಚೇರಿ ಮೂಲಸೌಕರ್ಯಕ್ಕೆ 53 ಕೋಟಿ ರೂ.ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ' ಎಂದರು.

`ಎರಡು ಹಂತಗಳಲ್ಲಿ ಹುದ್ದೆಗಳ ಸೃಜನೆ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯಾಧಿಕಾರಿ, ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ, ನಗರ ಯೋಜನೆ ಹಾಗೂ ಅರಣ್ಯ ಇಲಾಖೆಗಳ ಕಚೇರಿಗಳನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಹಂತ-ಹಂತವಾಗಿ ಎಲ್ಲ ಕಚೇರಿಗಳನ್ನು ಸ್ಥಾಪಿಸಲಾಗುವುದು' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

`ಇದರಲ್ಲಿ ಕೆಲವು ಹುದ್ದೆಗಳನ್ನು ಬಳ್ಳಾರಿಯಿಂದ ಸ್ಥಳಾಂತರ ಮಾಡುವ ಮೂಲಕ ಹಾಗೂ ಕೆಲವು ಹುದ್ದೆಗಳ ಸೃಜನೆಯ ಮೂಲಕ ಜಿಲ್ಲಾ ಮಟ್ಟದ ಕಚೇರಿ ಸ್ಥಾಪಿಸಲಾಗುವುದು. ಜಿಲ್ಲಾ ಕಚೇರಿಗಳ ನಿರ್ಮಾಣಕ್ಕೆ ಕರ್ನಾಟಕ ಗೃಹ ಮಂಡಳಿಯ 83 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು ಅನುದಾನವನ್ನು ಎರಡು ಹಂತದಲ್ಲಿ ವರ್ಗಾಯಿಸಲಾಗುವುದು' ಎಂದು ಅವರು ತಿಳಿಸಿದರು. 

ಅನಗತ್ಯ ಸ್ಥಳ ವ್ಯರ್ಥ ಮಾಡದೆ, ಕಾರ್ಯನಿರ್ವಹಣೆಗೆ ಪೂರಕವಾಗಿ ಸುಸಜ್ಜಿತ ಜಿಲ್ಲಾಡಳಿತ ಭವನದ ನಕ್ಷೆ ರೂಪಿಸಲು ಸೂಚಿಸಿದರು. ಬಳ್ಳಾರಿ ಜಿಲ್ಲೆಯ ಜಿಲ್ಲಾ ಖನಿಜ ನಿಧಿಗೆ ಸಂಬಂಧಿಸಿದಂತೆ ಈಗಾಗಲೇ 2023-24ರವರೆಗೆ ಅನುಮೋದನೆಯಾಗಿರುವ ಕ್ರಿಯಾಯೋಜನೆಯನ್ನು ಜಾರಿಗೊಳಿಸಲಾಗುವುದು. ನಂತರ ಜಿಲ್ಲಾ ಖನಿಜ ನಿಧಿಯನ್ನು ಎರಡೂ ಜಿಲ್ಲೆಗಳ ನಡುವೆ ಹಂಚಿಕೆ ಮಾಡುವ ಕುರಿತು ಒಂದು ಸೂತ್ರ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ವಿಫುಲ ಅವಕಾಶವಿದ್ದು, ಹಂಪಿಯಲ್ಲಿ ಹಾಗೂ ಮತ್ತಿತರ ಪಾರಂಪರಿಕ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಆರ್ಕಿಯಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಲೋಕೋಪಯೋಗಿ ಮತ್ತು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ವಿಜಯನಗರ ಜಿಲ್ಲೆ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಪಿ. ಮತ್ತು ಸರಕಾರದ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X