Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ತಪಾಸಣೆಯಲ್ಲಿ ನಿರ್ಲಕ್ಷ್ಯ...

ಕೋವಿಡ್ ತಪಾಸಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಕ್ರಮ: ಸಚಿವ ಅಂಗಾರ

ವಾರ್ತಾಭಾರತಿವಾರ್ತಾಭಾರತಿ6 Sept 2021 10:22 PM IST
share
ಕೋವಿಡ್ ತಪಾಸಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಕ್ರಮ: ಸಚಿವ ಅಂಗಾರ

ಮಂಗಳೂರು, ಸೆ.6: ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿ ಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು. ಸೂಚನೆ ತಪ್ಪಿದ್ದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿರ್ಬಂಧಗಳ ಕುರಿತ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೋನ ಸೋಂಕು ನಿಯಂತ್ರಿಸುವಿಕೆಯಲ್ಲಿ ಹೆಚ್ಚಿನ ತಪಾಸಣೆ ಅತಿ ಅಗತ್ಯ. ಈ ದಿಸೆಯಲ್ಲಿ ಜಿಲ್ಲಾ ಹಾಗೂ ತಾಲೂಕುಗಳ ಆರೋಗ್ಯ ಅಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಕೋವಿಡ್ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಯನ್ನು ತುರ್ತಾಗಿ ನಡೆಸಬೇಕು. ಇಲ್ಲಿ ನಿರ್ಲಕ್ಷ್ಯ ಮಾಡಬಾರದು. ಮಾಡಿದ್ದಲ್ಲಿ ಸಂಬಂಧಿಸಿ ತಾಲೂಕುಗಳ ಆರೋಗ್ಯಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಅವರು ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಸಚಿವರ ಸೂಚನೆಯಂತೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು. ಅದನ್ನು ಶೇ.100ರಷ್ಟು ಕಾರ್ಯಗತಗೊಳ್ಳಬೇಕು. ಇದನ್ನು ತಹಶೀಲ್ದಾರ್ ಹಾಗೂ ತಾಪಂ ಇಒಗಳು ಮೇಲುಸ್ತುವಾರಿ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಗ್ರಾಮ ಮಟ್ಟದಲ್ಲಿರುವ ಕೋವಿಡ್ ಪಾಸಿಟಿವಿಟಿ ಸೂಚ್ಯಂಕದ ಬಗ್ಗೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳು ಪಟ್ಟಿ ಒದಗಿಸುವಂತೆ ಅವರು ಸೂಚಿಸಿದರು.

ಸೆ.8ರಂದು ಲಕ್ಷ ಲಸಿಕಾ ಮೇಳ: ಜಿಲ್ಲೆಯಲ್ಲಿ ಸೆ.8ರಂದು ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಯೊಂದಿಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದರು.

ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. 18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರಿಕರು ಇದರ ಸದುಪಯೋಗ ಪಡೆಯುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕರೆ ನೀಡಿದರು.

ಜಿಲ್ಲೆಯಲ್ಲಿ ಪಾಸಿಟಿವಿಟಿ ಸೂಚ್ಯಂಕ ಕಡಿಮೆ ಮಾಡಲು ಸರಕಾರ ಹೊರಡಿಸಿರುವ ಮಾರ್ಗಸೂಚಿಗಳಂತೆ ಈ ಬಾರಿಯೂ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಜಿಲ್ಲೆಯ ಜನತೆ ಆಚರಿಸುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಜಿಲ್ಲೆಯ ಜನತೆಗೆ ಕರೆ ನೀಡಿದರು.

ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಪಂ ಸಿಇಒ ಡಾ.ಕುಮಾರ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉಪ ವಿಭಾಗಾಧಿಕಾರಿ ಮದನ್ ಮೋಹನ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X