ಬೆಳಗಾವಿ ಮಹಾನಗರ ಪಾಲಿಕೆ: ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲು

ಬೆಳಗಾವಿ ಮಹಾನಗರ ಪಾಲಿಕೆ
ಬೆಳಗಾವಿ, ಸೆ. 6: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಸಂಬಂಧಿಸಿದಂತೆ ಮೀಸಲಾತಿ ಪ್ರಕಟಿಸಲಾಗಿದ್ದು, ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
23 ನೆ ಅವಧಿಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿಪಡಿಸಿ ಫೆಬ್ರವರಿ 11, 2021 ರ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ.
ಈ ಮೀಸಲಾತಿಗೆ ಅನುಗುಣವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸದರಿ ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿಗದಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ತಿಳಿಸಿದ್ದಾರೆ.
Next Story





