ಸೋಲಿನ ಭಯದಿಂದ ಚುನಾವಣೆ ಮುಂದೂಡಲು ಹೊರಟಿದ್ದಾರೆ: ಸಿದ್ದರಾಮಯ್ಯ ಟೀಕೆ

ಬೆಂಗಳೂರು, ಸೆ. 6: `ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಆಯೋಗ ರಚನೆಯ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ. ಇದೆಲ್ಲ ಕಾಲಹರಣ ಮಾಡಲು ನೆಪಗಳು ಅಷ್ಟೆ. ಈಗಲೇ ಚುನಾವಣೆ ನಡೆಸಲು ರಾಜ್ಯ ಸರಕಾರಕ್ಕೆ ಧೈರ್ಯವಿಲ್ಲ. ಸೋಲಿನ ಭಯದಿಂದ ಚುನಾವಣೆ ಮುಂದೂಡಲು ಹೊರಟಿದ್ದಾರೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಗರದಲ್ಲಿ ಮಾತನಾಡಿದ ಅವರು, `ಇದೇ ಕಾರಣಕ್ಕೆ ಯಾರಾದರೂ ನ್ಯಾಯಾಲಯದ ಮೊರೆ ಹೋಗಿ, ಇನ್ನಷ್ಟು ವಿಳಂಬವಾಗಲಿ ಎಂದು ಕಾನೂನು ಬಾಹಿರವಾಗಿ ನೋಟಿಫಿಕೇಷನ್ ಹೊರಡಿಸಿದ್ದಾರೆ. ಮೀಸಲಾತಿ ನಿಯಮಕ್ಕೆ ಸಂಬಂಧಿಸಿದ 2 ಸಾವಿರಕ್ಕೂ ಹೆಚ್ಚು ಮನವಿಗಳು ಈಗಾಗಲೇ ನ್ಯಾಯಾಲಯದ ಮುಂದಿದೆ. ಚುನಾವಣೆಯಲ್ಲಿ ಸಾಧ್ಯವಾದಷ್ಟು ಮುಂದಕ್ಕೆ ತಳ್ಳುವುದೇ ಬಿಜೆಪಿಯವರ ಉದ್ದೇಶ' ಎಂದು ದೂರಿದರು.
Next Story





