Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕು ವಾರಗಳ ಬಳಿಕ ಕೋವಿಶೀಲ್ಡ್ ಎರಡನೇ...

ನಾಲ್ಕು ವಾರಗಳ ಬಳಿಕ ಕೋವಿಶೀಲ್ಡ್ ಎರಡನೇ ಡೋಸ್ ಗೆ ಅನುಮತಿ ನೀಡಲು ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ6 Sept 2021 10:39 PM IST
share
ನಾಲ್ಕು ವಾರಗಳ ಬಳಿಕ ಕೋವಿಶೀಲ್ಡ್ ಎರಡನೇ ಡೋಸ್ ಗೆ ಅನುಮತಿ ನೀಡಲು ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶ

ಕೊಚ್ಚಿ,ಸೆ.6: ಜನರು ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದ ನಾಲ್ಕು ವಾರಗಳ ಬಳಿಕ ಎರಡನೇ ಡೋಸ್ಗಾಗಿ ಸ್ಲಾಟ್ ಬುಕ್ ಮಾಡಲು ಅವಕಾಶ ನೀಡುವಂತೆ ಕೇರಳ ಉಚ್ಚ ನ್ಯಾಯಾಲಯವು ಸೋಮವಾರ ಕೇಂದ್ರ ಸರಕಾರಕ್ಕೆ ನಿರ್ದೇಶವನ್ನು ಹೊರಡಿಸಿದೆ. ಪ್ರಸ್ತುತ ಕೋವಿಶೀಲ್ಡ್ನ ಮೊದಲ ಡೋಸ್ ನ ಕನಿಷ್ಠ 84 ದಿನಗಳ ನಂತರವೇ ಎರಡನೇ ಡೋಸ್ ನ್ನು ನೀಡಲಾಗುತ್ತಿದೆ.

ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ ಗಳ ನಡುವಿನ ಆರರಿಂದ ಎಂಟು ವಾರಗಳ ಅಂತರವನ್ನು ಕೇಂದ್ರ ಆರೋಗ್ಯ ಸಚಿವಾಲಯವು ಮೇ 13ರಂದು 12ರಿಂದ 12 ವಾರಗಳಿಗೆ ಹೆಚ್ಚಿಸಿತ್ತು.
ಜನರು ಕೋವಿಶೀಲ್ಡ್ ಲಸಿಕೆಯ ತಮ್ಮ ಮೊದಲ ಡೋಸ್ ಪಡೆದ ನಾಲ್ಕು ವಾರಗಳ ಬಳಿಕ ಎರಡನೇ ಡೋಸ್ ಗಾಗಿ ಸ್ಲಾಟ್ ಬುಕ್ ಮಾಡಲು ಕೋವಿನ್ ಪೋರ್ಟಲ್ ನಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆಯೂ ಸೋಮವಾರ ಉಚ್ಚ ನ್ಯಾಯಾಲಯವು ಕೇಂದ್ರಕ್ಕೆ ಸೂಚಿಸಿದೆ.

ತನ್ನ ಉದ್ಯೋಗಿಗಳಿಗೆ 84 ದಿನಗಳ ಅಂತರದ ಮೊದಲೇ ಎರಡನೇ ಡೋಸ್ ನ್ನು ನೀಡಲು ಅವಕಾಶವನ್ನು ಕೋರಿ ಕಿಟೆಕ್ಸ್ ಗಾರ್ಮೆಂಟ್ಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. ಎರಡನೇ ಡೋಸ್ ಗಾಗಿ ತಾನು ಲಸಿಕೆಯನ್ನು ವ್ಯವಸ್ಥೆಗೊಳಿಸಿದ್ದೇನಾದರೂ ನಿಗದಿತ ಅವಧಿಗೆ ಮುನ್ನ ಅದನ್ನು ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಕಂಪನಿಯು ಅರ್ಜಿಯಲ್ಲಿ ತಿಳಿಸಿತ್ತು.

ಕಿಟೆಕ್ಸ್ ನ ಅರ್ಜಿಯನ್ನು ವಿರೋಧಿಸಿದ್ದ ಕೇಂದ್ರವು ಲಸಿಕೆಯ ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಎರಡು ಡೋಸ್ ಗಳ ನಡುವೆ 84 ದಿನಗಳ ಅಂತರವನ್ನು ನಿಗದಿಗೊಳಿಸಿದ್ದಾಗಿ ತಿಳಿಸಿತ್ತು. ತನ್ನ ನಿರ್ಧಾರವು ರಾಷ್ಟ್ರೀಯ ಪ್ರತಿರಕ್ಷಣಾ ತಾಂತ್ರಿಕ ಸಲಹಾ ಸಮಿತಿಯ ಸಲಹೆಯನ್ನು ಆಧರಿಸಿದೆ ಎಂದೂ ಅದು ಹೇಳಿತ್ತು.

84 ದಿನಗಳ ಮಧ್ಯಂತರಕ್ಕೆ ಪರಿಣಾಮಕಾರಿತ್ವ ಕಾರಣವಾಗಿದ್ದರೆ ಅದು ಮೊದಲ ಡೋಸ್ ನ ನಾಲ್ಕರಿಂದ ಆರು ವಾರಗಳಲ್ಲಿ ಎರಡನೇ ಡೋಸ್ ಪಡೆದಿದ್ದ ತನಗೆ ಚಿಂತೆಯ ವಿಷಯವಾಗಿದೆ ಎಂದು ಹೇಳಿದ ನ್ಯಾ.ಪಿ.ಬಿ.ಸುರೇಶಕುಮಾರ್ ಅವರು,ಹೆಚ್ಚಿನ ಪರಿಣಾಮಕಾರಿತ್ವ ಕುರಿತು ತನ್ನ ವಾದವನ್ನು ಸಮರ್ಥಿಸಿಕೊಳ್ಳಲು ಸರಕಾರವು ವೈಜ್ಞಾನಿಕ ದತ್ತಾಂಶಗಳನ್ನು ಒದಗಿಸಬೇಕು ಎಂದು ಹೇಳಿದರು.

 ಸರಕಾರವು ವಿದೇಶಗಳಿಗೆ ಪ್ರಯಾಣಿಸುವವರಿಗೆ ನಾಲ್ಕು ವಾರಗಳ ಅಂತರದ ಬಳಿಕ ಎರಡನೇ ಡೋಸ್ ಪಡೆದುಕೊಳ್ಳಲು ಅನುಮತಿ ನೀಡಿದೆ,ಹೀಗಿರುವಾಗ 84 ದಿನಗಳ ಅಂತರವು ತಾರತಮ್ಯದಿಂದ ಕೂಡಿದೆ ಎಂದೂ ನ್ಯಾಯಾಧೀಶರು ಬೆಟ್ಟು ಮಾಡಿದರು. ತಮ್ಮ ಉದ್ಯೋಗ,ಶಿಕ್ಷಣ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಮುಂಚಿತವಾಗಿಯೇ ರಕ್ಷಣೆಯನ್ನು ಪಡೆಯಲು ಬಯಸುವ ಜನರಿಗೆ ಇದೇ ಸೌಲಭ್ಯವನ್ನು ಏಕೆ ಒದಗಿಸಬಾರದು ಎನ್ನುವುದಕ್ಕೆ ಯಾವದೇ ಕಾರಣಗಳೇ ಇಲ್ಲ ಎಂದು ಅವರು ಹೇಳಿದರು.
ಬೇಗ ಲಸಿಕೆಯನ್ನು ಪಡೆದುಕೊಳ್ಳುವ ಆಯ್ಕೆಯನ್ನು ಜನರಿಗೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯದ ನೀತಿಯನ್ನೂ ತನ್ನ ಆದೇಶದಲ್ಲಿ ಉಲ್ಲೇಖಿಸಿರುವ ಉಚ್ಚ ನ್ಯಾಯಾಲಯವು, ತಮ್ಮ ಲಸಿಕೆ ಡೋಸ್ ನ್ನು ಬೇಗ ಪಡೆದುಕೊಳ್ಳಲು ಸಿದ್ಧವಿರುವ ಜನರಿಗಾಗಿ ಖಾಸಗಿ ಆಸ್ಪತ್ರೆಗಳ ಹೆಚ್ಚಿನ ಲಸಿಕೆಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿತು.

 ಲಸಿಕೆ ಪಡೆಯುವುದು ಸ್ವಯಂಪ್ರೇರಿತವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ವೆಬ್ ಸೈಟ್ ನಲ್ಲಿ ಹೇಳಿರುವುದನ್ನು ಬೆಟ್ಟು ಮಾಡಿದ ನ್ಯಾಯಾಲಯವು,ಹಾಗಿದ್ದರೆ ಲಸಿಕೆಯ ಎರಡು ಡೋಸ್ ಗಳನ್ನು ಪಡೆಯುವ ಅಗತ್ಯ ಮತ್ತು ಸೋಂಕಿನಿಂದ ಉತ್ತಮ ರಕ್ಷಣೆಗಾಗಿ ಎರಡು ಡೋಸ್ ಗಳ ನಡುವಿನ ಅಂತರವು ಕೇವಲ ಸಲಹೆ ಎಂದಷ್ಟೇ ಪರಿಗಣಿಸಬಹುದಾಗಿದೆ ಎಂದು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X