Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನೆ, ಬೆಳೆ ಹಾಗೂ ಮೂಲಸೌಕರ್ಯ ಹಾನಿ...

ಮನೆ, ಬೆಳೆ ಹಾಗೂ ಮೂಲಸೌಕರ್ಯ ಹಾನಿ ಪರಿಶೀಲನೆ: ಕೇಂದ್ರ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಕೆ: ಸುಶಿಲ್ ಪಾಲ್

ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ

ವಾರ್ತಾಭಾರತಿವಾರ್ತಾಭಾರತಿ6 Sept 2021 10:46 PM IST
share
ಮನೆ, ಬೆಳೆ ಹಾಗೂ ಮೂಲಸೌಕರ್ಯ ಹಾನಿ ಪರಿಶೀಲನೆ: ಕೇಂದ್ರ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಕೆ: ಸುಶಿಲ್ ಪಾಲ್

ಬೆಳಗಾವಿ, ಸೆ.6: ಇತ್ತೀಚಿನ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಪರಿಶೀಲನೆಗಾಗಿ ಜಿಲ್ಲೆಗೆ ಭೇಟಿ ನೀಡಿರುವ ಕೇಂದ್ರ ಅಧ್ಯಯನ ತಂಡವು ರವಿವಾರ (ಸೆ.5) ವಿವಿಧ ತಾಲೂಕುಗಳಲ್ಲಿ ಸಂಚರಿಸಿ ನೆರೆಹಾನಿಯನ್ನು ಪರಿಶೀಲಿಸಿತು.

ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಂಚರಿಸಲಿರುವ ತಂಡವು ಮೊದಲ ದಿನ ಖಾನಾಪುರ, ಹುಕ್ಕೇರಿ ಹಾಗೂ ಗೋಕಾಕ್ ತಾಲ್ಲೂಕುಗಳಿಗೆ ಭೇಟಿ ನೀಡಿತು. ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿರುವ ಕೇಂದ್ರ ಗೃಹ ಇಲಾಖೆಯ ಲೆಕ್ಕ ವಿಭಾಗದ ಮುಖ್ಯ ನಿಯಂತ್ರಣಾಧಿಕಾರಿ ಸುಶೀಲ್ ಪಾಲ್ ನೇತೃತ್ವದ ನೆರೆ ಅಧ್ಯಯನ ತಂಡವು ಮೊದಲಿಗೆ ನಗರದ ಪ್ರವಾಸಿಮಂದಿರದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಜಿಲ್ಲೆಯಲ್ಲಿ ಇತ್ತೀಚಿಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಕುರಿತು ಚರ್ಚೆ ನಡೆಸಿತು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲೆಯಲ್ಲಿ ಉಂಟಾಗಿರುವ ಮನೆ, ಬೆಳೆ ಹಾನಿಯ ಬಗ್ಗೆ ಹಾಗೂ ರಸ್ತೆ, ಸೇತುವೆ, ಶಾಲಾ ಕಟ್ಟಡಗಳು ಸೇರಿದಂತೆ ಇತರೆ ಮೂಲಸೌಕರ್ಯಗಳ ಹಾನಿಯ ಕುರಿತು ಛಾಯಾಚಿತ್ರಗಳ ಸಮೇತ ಪ್ರಾತ್ಯಕ್ಷಿಕೆಯನ್ನು ನೀಡಿದರು.
ಕೇಂದ್ರ ಅಧ್ಯಯನ ತಂಡದ ಸದಸ್ಯರಾದ ಕೇಂದ್ರ ಕೃಷಿ ಸಚಿವಾಲಯದ ನಿರ್ದೇಶಕ ಡಾ.ಕೆ.ಮನೋಹರನ್, ಇಂಧನ ಇಲಾಖೆಯ ಶುಭಂ ಗರ್ಗ್, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಂಜನ್ ಮತ್ತಿತರರು ಉಪಸ್ಥಿತರಿದ್ದರು.

ಖಾನಾಪುರ ತಾಲೂಕಿಗೆ ಭೇಟಿ: ಸಭೆಯ ಬಳಿಕ ಖಾನಾಪುರ ತಾಲೂಕಿಗೆ ಭೇಟಿ ನೀಡಿದ ಕೇಂದ್ರ ಅಧ್ಯಯನ ತಂಡವು, ಅತಿವೃಷ್ಟಿಯಿಂದ ತೀವ್ರ ಹಾನಿಗೊಳಗಾದ ಮಾರುತಿನಗರದ ಬಳಿ ಮಲಪ್ರಭಾ ನದಿಯ ಬ್ರಿಡ್ಜ್ ಕಮ್ ಬ್ಯಾರೇಜ್ ವೀಕ್ಷಿಸಿದರು. ಇದಾದ ಬಳಿಕ ಪೌಲ್ಟ್ರಿ ಫಾರ್ಮ್ ಹಾಗೂ ಪೊಲೀಸ್ ತರಬೇತಿ ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿದರು.

ಹುಕ್ಕೇರಿ ತಾಲೂಕಿನಲ್ಲಿ ಸಂಚಾರ: ನಂತರ ಅತಿವೃಷ್ಟಿಯಿಂದ ತೀವ್ರ ಹಾನಿ ಸಂಭವಿಸಿರುವ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ತಂಡವು ತೋಟಗಾರಿಕೆ ಬೆಳೆಹಾನಿ, ಮನೆ ಹಾಗೂ ಮೂಲಸೌಕರ್ಯ ಹಾನಿಯನ್ನು ಪರಿಶೀಲಿಸಿತು. ಜಿನರಾಳ ಕ್ರಾಸ್ ನಲ್ಲಿ ತೋಟಗಾರಿಕೆ ಬೆಳೆಹಾನಿ, ಬಡಕುಂದ್ರಿ ಹೊಳೆಮ್ಮ ದೇವಸ್ಥಾನದ ಬಳಿ ಹಿರಣ್ಯಕೇಶಿ ನದಿಪಾತ್ರದ ಮನೆಗಳು ಹಾಗೂ ಮೂಲಸೌಕರ್ಯ ಹಾನಿಯನ್ನು ವೀಕ್ಷಿಸಿದ ತಂಡವು ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿತು.

ಜೂನ್ ಎರಡನೇ ವಾರದಲ್ಲಿ ಬಿತ್ತನೆ ಮಾಡಲಾದ ಕ್ಯಾಬೇಜ್ ಬೆಳೆ ಜುಲೈನಲ್ಲಿ ಸುರಿದ ಮಳೆಗೆ ಸಂಪೂರ್ಣ ಹಾಳಾಗಿದೆ. ಅದೇ ರೀತಿ ಟೊಮ್ಯಾಟೊ ಬೆಳೆ ಕೂಡ ಹಾನಿಯಾಗಿರುವುದಾಗಿ ರೈತರು ವಿವರಿಸಿದರು.

20 ಗುಂಟೆ ಜಮೀನಿನಲ್ಲಿ ಹನ್ನೆರಡು ಟನ್ ಇಳುವರಿ ಬರಬೇಕಿತ್ತು. ಮಳೆಯಿಂದಾಗಿ ಕೇವಲ ಎರಡು ಟನ್ ಕೂಡ ಬಂದಿಲ್ಲ. ಮೂವತ್ತು ಸಾವಿರ ಖರ್ಚು ಮಾಡಲಾಗಿದೆ ಎಂದು ರೈತರು ಹೇಳಿದರು. ಇದೇ ರೀತಿ ನೂರಾರು ಎಕರೆಯಲ್ಲಿರುವ ಟೊಮ್ಯಾಟೋ ಬೆಳೆ ಹಾನಿಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಂಜನ್ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವಿವರಿಸಿದರು.
ಹುಕ್ಕೇರಿ ತಾಲೂಕಿನ ಯರನಾಳ, ಇಸ್ಲಾಂಪುರ, ಸುಲ್ತಾನಪುರ, ಹರಗಾಪುರ, ಗುಡಸ-ಹುಲ್ಲೊಳಿ ರಸ್ತೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ವಿವಿಧ ಹಾನಿಗೆ ಸಂಬಂಧಿಸಿದ ಛಾಯಾಚಿತ್ರಗಳನ್ನು ತಂಡದ ಸದಸ್ಯರು ವೀಕ್ಷಿಸಿದರು.

ಹಾನಿ ಕುರಿತು 15 ದಿನದೊಳಗೆ ಕೇಂದ್ರಕ್ಕೆ ಸಮಗ್ರ ವರದಿ-ಸುಶಿಲ್ ಪಾಲ್: ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ನೆರೆ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಸುಶೀಲ್ ಪಾಲ್, ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಸರಕಾರದ ಮಾರ್ಗಸೂಚಿ ಪ್ರಕಾರ ನೆರವು ಬಿಡುಗಡೆಗೆ ವರದಿಯನ್ನು ಸಲ್ಲಿಸಲಾಗುವುದು. ನೆರೆ ಅಧ್ಯಯನದ ಬಳಿಕ ಸಾಮಾನ್ಯವಾಗಿ ಹದಿನೈದು ದಿನದೊಳಗೆ ಕೇಂದ್ರ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಶಶಿಧರ್ ಬಗಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಅಶೋಕ ಕೊಳ್ಳಾ, ಖಾನಾಪುರ ಹಾಗೂ ಹುಕ್ಕೇರಿ ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X