Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಭಾರತ್ ನೆಟ್' ಯೋಜನೆಗೆ ಕರ್ನಾಟಕ...

'ಭಾರತ್ ನೆಟ್' ಯೋಜನೆಗೆ ಕರ್ನಾಟಕ ಸೇರ್ಪಡೆಗೆ ಆಗ್ರಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ7 Sept 2021 9:59 PM IST
share
ಭಾರತ್ ನೆಟ್ ಯೋಜನೆಗೆ ಕರ್ನಾಟಕ ಸೇರ್ಪಡೆಗೆ ಆಗ್ರಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸದಿಲ್ಲಿ, ಸೆ.7: ಗ್ರಾಮೀಣ ಪ್ರದೇಶಕ್ಕೆ ಅಂತರ್ಜಾಲ( ಇಂಟರ್ ನೆಟ್) ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ ಭಾರತ್ ನೆಟ್ ಯೋಜನೆಗೆ ಕರ್ನಾಟಕ ರಾಜ್ಯವನ್ನು ಸೇರ್ಪಡೆ ಮಾಡುವಂತೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.

ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಮತ್ತು ದೂರಸಂಪರ್ಕ ಖಾತೆ ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ರೈಲ್ವೆ ಮತ್ತು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ ಎಂದರು. 

ಕರ್ನಾಟಕ ರಾಜ್ಯ ಆಪ್ಟಿಕಲ್ ಫೈಬರ್ ನೆಟ್‍ವರ್ಕಿಂಗ್ ಬಹಳ ಸೀಮಿತವಾಗಿದ್ದು, ಭಾರತ್ ನೆಟ್ ಗೆ ಕರ್ನಾಟವನ್ನು ಸೇರ್ಪಡೆ ಮಾಡಬೇಕು.  4300 ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿ ಸಂಪೂರ್ಣ ನೆಟ್ ವರ್ಕಿಂಗ್ ಸಾಧ್ಯವಾಗುತ್ತದೆ. ಇದರಿಂದ ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ  ಮಟ್ಟದಲ್ಲಿ ಆಡಳಿತಕ್ಕೆ, ವ್ಯಾಪಾರ ವಹಿವಾಟಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು, ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ರೈಲ್ವೆ ಯೋಜನೆಗೆ ಆದ್ಯತೆ: ಕರ್ನಾಟಕದಲ್ಲಿ ರೈಲ್ವೆ  ಅಭಿವೃದ್ಧಿ ಯೋಜನೆಗಳು, ಅದರಲ್ಲೂ ಪ್ರಮುಖವಾಗಿ ಈಗಾಗಲೇ ಪ್ರಾರಂಭ ಮಾಡಿರುವ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ.  ವಿಶೇಷವಾಗಿ ಕಲಬುರ್ಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಇದರಿಂದ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಹುಬ್ಬಳ್ಳಿ- ಅಂಕೋಲಾ  ರೈಲ್ವೇ ಮಾರ್ಗ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಪ್ರಕರಣ ಹೈಕೋರ್ಟಿನಲ್ಲಿದೆ. ಹೊಸ ಡಿ.ಪಿ.ಆರ್ ಮಾಡಲಾಗಿದ್ದರೂ ಅದನ್ನು ಪ್ರಶ್ನಿಸಲಾಗಿದೆ. ಆದಷ್ಟು ಬೇಗ ಆ ತಡೆಯಾಜ್ಞೆಯನ್ನು ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರು ಸಬ್ ಅರ್ಬನ್ ರೈಲ್ವೆ ಆದಷ್ಟು ಬೇಗನೆ ಜಾರಿಗೆ ತರಬೇಕು. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.  ಕೆ-ರೈಡ್ ಮತ್ತು ಕರ್ನಾಟಕದ ನಡುವೆ ರಿಯಾಯಿತಿ ಒಪ್ಪಂದ ಆಗಬೇಕು. ಸಂಪೂರ್ಣವಾಗಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ತ್ವರಿತಗತಿಯಲ್ಲಿ ಮುಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X