ಕಬಕದಲ್ಲಿ ರಥಕ್ಕೆ ಅಡ್ಡಿ ಪ್ರಕರಣ :ಮತ್ತೆ ನಾಲ್ವರು ಆರೋಪಿಗಳ ಬಂಧನ
ಪುತ್ತೂರು : ಸ್ವಾತಂತ್ರ್ಯೋತ್ಸವದ ಸಂದರ್ಭ ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೆ ನಾಲ್ವರು ಆರೋಪಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಬಕ ನಿವಾಸಿಗಳಾದ ನೌಶಾದ್, ಮಹಮ್ಮದ್ ಹಾರಿಸ್, ಮಹಮ್ಮದ್ ತೌಸೀಪ್, ಸಂಶುದ್ದೀನ್ ಅವರು ಬಂಧಿತ ಆರೋಪಿಗಳು. ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿಯನ್ನು 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು. ಇದೀಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ ಮತ್ತು ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಗರ ಠಾಣಾ ಪೊಲೀಸ್ ಇನ್‍ಸ್ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತು ಎಸ್.ಐ ಸುತೇಶ್ ಅವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
Next Story





