Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಅಕ್ಷರ, ಆರೋಗ್ಯ ಖಾಸಗಿಯವರ...

ರಾಜ್ಯದಲ್ಲಿ ಅಕ್ಷರ, ಆರೋಗ್ಯ ಖಾಸಗಿಯವರ ಪಾಲಾಗಿದೆ: ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ8 Sept 2021 9:08 PM IST
share
ರಾಜ್ಯದಲ್ಲಿ ಅಕ್ಷರ, ಆರೋಗ್ಯ ಖಾಸಗಿಯವರ ಪಾಲಾಗಿದೆ: ಎಚ್.ವಿಶ್ವನಾಥ್

ಬೆಂಗಳೂರು, ಸೆ.8: ರಾಜ್ಯದಲ್ಲಿ ಇವತ್ತು ಅಕ್ಷರ ಮತ್ತು ಆರೋಗ್ಯ ಇವೆರಡು ಖಾಸಗಿಯವರ ಪಾಲಾಗಿದೆ. 2000 ಇಸವಿಯಲ್ಲಿ ಕೇವಲ 6 ಸಾವಿರ ಖಾಸಗಿ ಶಾಲೆಗಳಿದ್ದವು. ಈಗ 25 ಸಾವಿರ ಖಾಸಗಿ ಶಾಲೆಗಳಿವೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿಷಾದಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಗಳ ಸಹಯೋಗದಲ್ಲಿ ವಿಕಾಸಸೌಧದ ಸಭಾಂಗಣದಲ್ಲಿ `ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಕನ್ನಡ' ಎಂಬ ವಿಷಯದ ಮೇಲೆ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಗತ್ತಿನ ಎಲ್ಲ ದೇಶಗಳು ಮಾತೃಭಾಷೆಯಲ್ಲಿ ಶಿಕ್ಷಣ ನೀಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಇಂಗ್ಲಿಷ್ ಭಾಷೆಯಲ್ಲಿ ಶಿಕ್ಷಣ ನೀಡಲು ಹೆಚ್ಚಿನ ಒತ್ತು ನೀಡುತ್ತಿರುವುದು ವಿಪರ್ಯಾಸ. ಖಾಸಗಿ ಶಾಲೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇವುಗಳ ನಿಯಂತ್ರಣ ಅಸಾಧ್ಯವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಸೇರಿಸಿಕೊಂಡು ಇಂತಹ ವಿಚಾರ ಸಂಕಿರಣ ಆಯೋಜಿಸಿದರೆ ಶಿಕ್ಷಣದಲ್ಲಿ ಕನ್ನಡದ ಅನುಷ್ಠಾನ ಸಾಧ್ಯವಾಗಲಿದೆ. ಇವರನ್ನು ಒಳಗೊಂಡ ಚರ್ಚೆಯಲ್ಲಿ ಶಿಕ್ಷಣದಲ್ಲಿ ಕನ್ನಡ ಬಳಕೆಯ ಕುರಿತು ಯಾವ ನಿಯಮಗಳು ರೂಪುಗೊಳ್ಳಬೇಕೆಂದು ಅವರಿಗೆ ಮನವರಿಕೆ ಮಾಡಿಕೊಡಬೇಕೆಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಮಾತನಾಡಿ, ಭಾಷೆ ಮತ್ತು ಸಂಸ್ಕøತಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಮಕ್ಕಳ ಚಿಂತನೆ, ಕ್ರಿಯಾಶೀಲತೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಮಾತೃಭಾಷೆಯೇ ಅತ್ಯುತ್ತಮ ಸಾಧನವಾಗಿದೆ. ಮಕ್ಕಳು ಮಾತೃಭಾಷೆಯಲ್ಲಿ ಸ್ವಂತಿಕೆಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮಂಡಿಸಬಹುದು. ಮಾತೃಭಾಷೆಯಲ್ಲಿ ಪ್ರಭುತ್ವ ಸಾಧಿಸಿದರೆ ಮಾತ್ರ ಅನ್ಯಭಾಷೆಗಳನ್ನು ಕಲಿಸುವುದು ಮತ್ತು ಕಲಿಯುವುದು ಸುಲಭ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಪ್ರತಿಯೊಂದು ಶಾಲೆಯಲ್ಲಿ ಕನ್ನಡ ಕಲಿಕೆ ಹೇಗೆ ಇರಬೇಕು ಎಂಬುದನ್ನು ತಿಳಿಸಬೇಕು. 0-6 ವರ್ಷಗಳ ಮಕ್ಕಳಿಗೆ ಯಾವ ರೀತಿ ಶಾಲೆಗಳು ಇರಬೇಕೆಂದು ನಿಯಮ ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಶಾಲೆಯ ಸ್ವರೂಪ ಹೇಗಿರಬೇಕೆಂಬುದನ್ನು ಅದರಲ್ಲಿ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಮಾತನಾಡಿ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಆಧರಿಸಿ ಖಾಸಗಿ, ಅನುದಾನಿತ ಮತ್ತು ಸರಕಾರಿ ಶಾಲೆಗಳನ್ನಾಗಿ ವಿಭಾಗಿಸಿರುವ ವ್ಯವಸ್ಥೆ ಇದಾಗಿದೆ. ಶಿಕ್ಷಣ ವ್ಯವಸ್ಥೆ ಈ ರೀತಿಯಾಗಿ ಮುಂದುವರೆದರೆ ಬಡವ, ಮಧ್ಯಮ ವರ್ಗ ಹಾಗೂ ಶ್ರೀಮಂತ ಎಂಬ ಮೂರು ವರ್ಗಗಳು ರೂಪುಗೊಂಡು ಸಮಾಜದಲ್ಲಿ ಪುನಃ ಅಸಮಾನತೆ ರೂಪುಗೊಳ್ಳಲಿದೆ, ಆದ್ದರಿಂದ ನಾವು ಸಮಾನ ಶಿಕ್ಷಣದ ಕಡೆಗೆ ಹೊರಳಬೇಕಿದೆ ಎಂದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ ಮಾತನಾಡಿ, 3 ರಿಂದ 18 ವರ್ಷದ ಮಕ್ಕಳಿಗೆ ಸರಕಾರವೇ ಉಚಿತವಾಗಿ ಶಿಕ್ಷಣ ನೀಡಬೇಕು. ಇದಕ್ಕೆ ಖಾಸಗಿಯವರು ಹಸ್ತಕ್ಷೇಪ ಮಾಡಬಾರದು. ಸಮಾನ ಶಿಕ್ಷಣ ನೀಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸಬೇಕು. ಈ ವರ್ಷವಿಡೀ ಇದರ ಬಗ್ಗೆ ಚರ್ಚೆ ಮಾಡಬೇಕೆಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್ ಮಾತನಾಡಿ, ಕನ್ನಡ ಒಂದು ಭಾಷೆಯಲ್ಲ. ಅದು ಧರ್ಮ, ಸ್ವಭಾವ, ತನ, ಗುಣ. ಕನ್ನಡ ಕಟ್ಟುವುದು ಎಂದರೆ ಕನ್ನಡದ ಬೀಜಗಳನ್ನು ಮಕ್ಕಳ ಎದೆಯಲ್ಲಿ, ಭೂಮಿಯಲ್ಲಿ ಬಿತ್ತಬೇಕು. ಭಾರತೀಯತೆಗೆ ಭಂಗಬಾರದಂತೆ, ಸಿದ್ಧಾಂತ ಮತ್ತು ರಾಜಕೀಯ ಪಕ್ಷಗಳನ್ನು ಮೀರಿ ಶಿಕ್ಷಣದಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಕೆಲಸವಾಗಬೇಕೆಂದು ಆಶಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಉಪಸ್ಥಿತರಿದ್ದರು.

ಹಿಂದಿ ಹೇರಿಕೆ ಯಾಕೆ?

ಹಿಂದಿ ರಾಷ್ಟ್ರ ಭಾಷೆ ಎಂಬುದು ಸಂವಿಧಾನದಲ್ಲಿ ಎಲ್ಲೂ ವ್ಯಕ್ತವಾಗಿಲ್ಲ. ಆದರೆ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಅವ್ಯಕ್ತ ವಾತಾವರಣ ಬಹಳ ಅಪಾಯಕಾರಿಯಾದುದು. ಕೇಂದ್ರ ಲೋಕಾಸೇವಾ ಆಯೋಗ ನಡೆಸುವ ಪೂರ್ವಭಾವಿ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿವೆ. ಆದರೆ ಅವು ಸ್ಥಳೀಯ ಭಾಷೆಯಲ್ಲಿರಬೇಕು. ಬ್ಯಾಂಕಿಂಗ್ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸ್ಥಳೀಯ ಭಾಷೆಯಲ್ಲಿರಬೇಕು. ಇಂಗ್ಲಿಷ್ ಸಂವಹನ ಭಾಷೆ ಅದರಲ್ಲಿ ಪ್ರಶ್ನೆಪತ್ರಿಕೆ ರೂಪಿಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಹಿಂದಿ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಯಾಕೆ ರೂಪಿಸಬೇಕು?

-ಎನ್.ಮಹೇಶ್, ಕೊಳ್ಳೇಗಾಲ ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X