150 ಸ್ಥಾನಗಳೊಂದಿಗೆ ಪಕ್ಷ ಮತ್ತೆ ಅಧಿಕಾರಕ್ಕೆ: ನಳಿನ್ ಕುಮಾರ್ ಕಟೀಲು

ಬಂಟ್ವಾಳ, ಸೆ.8: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅನಂತಾಡಿ ಗ್ರಾಪಂ ವ್ಯಾಪ್ತಿಯ 3 ಬೂತ್ ಹಾಗೂ ನೆಟ್ಲಮುಡ್ನೂರು ಗ್ರಾಪಂ ವ್ಯಾಪ್ತಿಯ 2 ಬೂತ್ ಹಾಗೂ ವೀರಕಂಭ 4 ಬೂತ್ ಗಳ ಅಧ್ಯಕ್ಷರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಹಾಗೂ ಬಂಟ್ವಾಳ ಬಿಜೆಪಿ ಮಂಡಲ ಸಮಿತಿಯ ನಾಯಕರು ಭೇಟಿ ನೀಡಿ ನಾಮಫಲಕ ಅನಾವರಣ ಗೊಳಿಸುವ 6ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಮಾರ್ಗದರ್ಶನ ದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ರವರು ರಾಜ್ಯಕ್ಕೆ ಮಾದರಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದರು.
ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ನಡುವೆ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕ ಅನಾವರಣ ಮಾಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕರ್ತರ ಅಪೇಕ್ಷಗಳಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶವನ್ನು ಕಾರ್ಯಕ್ರಮ ಹೊಂದಿದೆ. ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷವಾಗಿದ್ಧು ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.
ಬಿಜೆಪಿಯಲ್ಲಿ ಕಾರ್ಯಕರ್ತರು ಪರಿಶ್ರಮದ ಆಧಾರದ ಮೇಲೆ ನಾಯಕರಾದರೆ ಉಳಿದ ರಾಜಕೀಯ ಪಕ್ಷಗಳಲ್ಲಿ ಜಾತಿ, ಹಣ, ಒತ್ತಡ, ಪ್ರಭಾವದ ಮೇಲೆ ನಾಯಕರಾಗುತ್ತಾರೆ. ಹಾಗಾಗಿ ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ರಾಷ್ಟ್ರೀಯ ವಿಚಾರದ ಆಧಾರದಲ್ಲಿ ಆಡಳಿತ ಮಾಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಮಾತನಾಡಿದರು. ಅನಂತಾಡಿ ಗ್ರಾಪಂ ವ್ಯಾಪ್ತಿಯ ಬೂತ್ ಸಂಖ್ಯೆ 208 ನಾಗೇಶ್ ಭಂಡಾರಿ, ಬೂತ್ ಸಂಖ್ಯೆ 209ರ ಅಧ್ಯಕ್ಷ ಕುಂಜ್ಞಪ್ಪ ಗೌಡ, ಬೂತ್ ಸಂಖ್ಯೆ 210ರ ಅಧ್ಯಕ್ಷ ತಿಮ್ಮಪ್ಪ ಗೌಡ ಅವರ ಮನೆಗೆ ನಾಮಫಲಕ ಅನಾವರಣ ಮಾಡಿದರು.
ನೆಟ್ಲ ಗ್ರಾಪಂ ಅಧ್ಯಕ್ಷ ಸತೀಶ್ ಪೂಜಾರಿ, ಅನಂತಾಡಿ ಗ್ರಾಪಂ ಅಧ್ಯಕ್ಷೆ ಗಣೇಶ್ ಪೂಜಾರಿ ಅನಂತಾಡಿ, ಉಪಾಧ್ಯಕ್ಷ ಕುಸುಮಾಧರ ಗೌಡ, ಬಿಜೆಪಿ ಮಂಡಲ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ಸಂತೋಷ್ ಕುಮಾರ್ ಬೋಳಿಯಾರ್, ಸುಲೋಚನ ಜಿ.ಕೆ.ಭಟ್, ರಮನಾಥ ರಾಯಿ, ಸನತ್ ಕುಮಾರ್ ರೈ, ಪುಷ್ಪರಾಜ್ ಚೌಟ, ಗೀತಾಚಂದ್ರಶೇಖರ್, ದಿನೇಶ್ ಅಮ್ಟೂರು, ಮಾದವ ಮಾವೆ, ಪ್ರಕಾಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರ ದ ಅಧ್ಯಕ್ಷ ಕುಮಾರ್ ರೈ ಧನ್ಯವಾದ ನೀಡಿದರು.







.jpeg)

