ಮೈಸೂರಿನಲ್ಲಿ ನಿಫಾ ವೈರಸ್ ಸೋಂಕಿತರು ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

ಮೈಸೂರು,ಸೆ.8: ಮೈಸೂರಿನಲ್ಲಿ ನಿಫಾ ವೈರಸ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯಕ್ಕೆ ಮೈಸೂರಿನಲ್ಲಿ ನಿಫಾ ವೈರಸ್ ಆತಂಕವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.
ನಿಫಾ ವೈರಸ್ ಆತಂಕ ಕುರಿತು ಬುಧವಾರ ಮಾಧ್ಯಮದರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಅಕ್ಟೋಬರ್ ವರೆಗೂ ಕೇರಳ ಪ್ರವಾಸ, ಕೇರಳಿಗರ ಪ್ರವಾಸ ಮಾಡದಿದ್ದರೆ ಸೂಕ್ತ. ಗಡಿ ಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕರ ಪತ್ರದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಗಡಿ ಭಾಗದಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಕೋವಿಡ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯನ್ನ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ ನೀಡಲಾಗಿದೆ ಎಂದು ಡಿಸಿ ಬಗಾದಿ ಗೌತಮ್ ತಿಳಿಸಿದ್ದಾರೆ.
Next Story





