Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 1,666 ದೈಹಿಕ ಶಿಕ್ಷಕರಿಗೆ ಕ್ರೀಡಾ...

1,666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ: ಸಚಿವ ಡಾ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ8 Sept 2021 11:28 PM IST
share
1,666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ: ಸಚಿವ ಡಾ.ನಾರಾಯಣಗೌಡ

ಬೆಂಗಳೂರು, ಸೆ.8: ತಳಮಟ್ಟದಿಂದಲೆ ಕ್ರೀಡಾಪಟುಗಳನ್ನು ತಯಾರು ಮಾಡಲು ಸರಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 1666 ದೈಹಿಕ ಶಿಕ್ಷಕರಿಗೆ ಗುಣಮಟ್ಟದ ವೈಜ್ಞಾನಿಕ ತರಬೇತಿ ನೀಡಲು ಯೋಜನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ತರಬೇತಿ ಆರಂಭಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ನೇತೃತ್ವದಲ್ಲಿ ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರಕಾರ ಈಗಾಗಲೆ ವಿವಿಧ ಯೋಜನೆ ಜಾರಿಗೆ ತಂದಿದೆ. ಅದಕ್ಕಿಂತ ಮುಖ್ಯವಾಗಿ ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಲು ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡಲು ತೀರ್ಮಾನಿಸಲಾಗಿದೆ.

ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ ಗ್ರಾಮೀಣ ಮಟ್ಟದ ಕ್ರೀಡಾಪ್ರತಿಭೆಗಳನ್ನು ಗುರುತಿಸಲಾಗುತ್ತಿದ್ದು, ಅಂತವರಿಗೆ ತರಬೇತಿ ಪಡೆದ 1666 ಪರಿಣಿತ ದೈಹಿಕ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಶಿಕ್ಷಣ ಇಲಾಖೆಯಿಂದ ಈಗಾಗಲೆ 1666 ದೈಹಿಕ ಶಿಕ್ಷಕರ ಪಟ್ಟಿ ಪಡೆಯಲಾಗಿದ್ದು, ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲು ಆರಂಭಿಸಲಾಗುವುದು.

ಆರಂಭವಾಗದ ‘ಖೇಲೊ ಇಂಡಿಯಾ ಕೇಂದ್ರ’: ಇದೇ ವೇಳೆ ಖೇಲೊ ಇಂಡಿಯಾ ಕೇಂದ್ರದ ಬಗ್ಗೆ ಚರ್ಚಿಸಿದ ಸಚಿವ ನಾರಾಯಣಗೌಡ, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 31 ಕೇಂದ್ರಗಳ ಸ್ಥಾಪನೆಗೆ ಕೇಂದ್ರ ಸರಕಾರ ಈಗಾಗಲೆ ಅನುದಾನ ನೀಡಿದೆ. ಪ್ರತಿ ಕೇಂದ್ರದ ಮೂಲಕ ಸೌಕರ್ಯಕ್ಕೆ 5 ಲಕ್ಷ ರೂ.ಹಾಗೂ ತರಬೇತಿಗೆ 5 ಲಕ್ಷ ರೂ.ನೀಡಿದೆ. ಆದರೆ ಈವರೆಗೆ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ. ಕೇವಲ ಘೋಷಣೆಗೆ ಯೋಜನೆ ಸೀಮಿತವಾದರೆ ಹೇಗೆ. ತಕ್ಷಣ ಕೆಲಸ ಆರಂಭಿಸದಿದ್ದರೆ ಸುಮ್ಮನಿರಲ್ಲ. ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು. ವಾರದೊಳಗೆ ಕೆಲಸ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದರು.

ಸೆ.24 ರಂದು ವೈಮಾನಿಕ ತರಬೇತಿ ಶಾಲೆ ಪುನಾರಂಭ: ಸರಕಾರಿ ವೈಮಾನಿಕ ತರಬೇತಿ ಶಾಲೆ ಆರಂಭ ಆಗಲೇಬೇಕು. ಇನ್ನಷ್ಟು ಸಮಯ ನೀಡಲು ಸಾಧ್ಯವಿಲ್ಲ. ಅಧಿವೇಶನ ಮುಗಿದ ಮಾರನೆ ದಿನ ವೈಮಾನಿಕ ತರಬೇತಿ ಶಾಲೆ ಪುನಾರಂಭ ಆಗಬೇಕು. ಮುಖ್ಯಮಂತ್ರಿಯನ್ನು ಆಹ್ವಾನಿಸಿ, ಉದ್ಘಾಟಿಸಲಾಗುವುದು ಎಂದು ನಾರಾಯಣಗೌಡ ತಿಳಿಸಿದರು.

45 ಹಳೆ ವಿದ್ಯಾರ್ಥಿಗಳಿದ್ದು, ಈಗಾಗಲೆ 35 ವಿದ್ಯಾರ್ಥಿಗಳು ತರಬೇತಿ ಪಡೆಯಲು ಬರುವುದಾಗಿ ತಿಳಿಸಿದ್ದಾರೆ. ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡಲಾಗುವುದು. ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ನಿಗದಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಂದಿನ ಮಾ.5 ರಿಂದ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಕ್ರೀಡೆಯ ಆಯೋಜನೆಗೆ 25 ಕೋಟಿ ರೂ.ಅನುದಾನ ನೀಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೂಲ ಸೌಕರ್ಯಕ್ಕಾಗಿ 18 ಕೋಟಿ ರೂ.ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರಕ್ಕೂ 22 ಕೋಟಿ ರೂ.ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅಲ್ಲದೆ ಅತಿ ಶೀಘ್ರದಲ್ಲಿ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್‍ನ ಲೋಗೋ, ಥೀಮ್ ಸಾಂಗ್, ಜೆರ್ಸಿ ಲಾಂಚ್ ಆಗಬೇಕು ಎಂದು ನಾರಾಯಣಗೌಡ ತಿಳಿಸಿದರು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X