Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: 75 ಕೋಟಿ ಮೌಲ್ಯದ ಬಿಡಿಎ...

ಬೆಂಗಳೂರು: 75 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

ವಾರ್ತಾಭಾರತಿವಾರ್ತಾಭಾರತಿ8 Sept 2021 11:38 PM IST
share
ಬೆಂಗಳೂರು: 75 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು, ಸೆ. 8: `ಒತ್ತುವರಿದಾರರು ಮತ್ತು ಭೂಕಬಳಿಕೆದಾರರಿಂದ ತನ್ನ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬುಧವಾರ ಎರಡು ಸ್ಥಳಗಳಲ್ಲಿ 75 ಕೋಟಿ ರೂ.ಗೂ ಅಧಿಕ ಬೆಲೆ ಬಾಳುವ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

ಬನಶಂಕರಿ ಮೂರನೆ ಹಂತದಲ್ಲಿರುವ ಆವಲಹಳ್ಳಿಯಲ್ಲಿ 1 ಎಕರೆ 6 ಗುಂಟೆ ಮತ್ತು ಎಚ್‍ಆರ್‍ಬಿಆರ್ ಬಡಾವಣೆಯಲ್ಲಿ 6000 ಚದರಡಿಯ ನಿವೇಶನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬನಶಂಕರಿಯ 3ನೆ ಹಂತದಲ್ಲಿರುವ ಆವಲಹಳ್ಳಿಯಲ್ಲಿ ಬಿಡಿಎಗೆ ಸೇರಿದ 1 ಎಕರೆ 6 ಗುಂಟೆ ಜಾಗದಲ್ಲಿ 6 ತಾತ್ಕಾಲಿಕ ಶೆಡ್‍ಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗಿತ್ತು. ಈ ಜಾಗದ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿ ವಿಚಾರಣೆ ನಡೆದ ನಂತರ ಬಿಡಿಎ ಪರವಾಗಿ ತೀರ್ಪು ಬಂದಿತ್ತು.

ಇದರನ್ವಯ ಬಿಡಿಎಎಸ್‍ಟಿಎಫ್ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮತ್ತು ಇನ್‍ಸ್ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಸ್ಥಳೀಯ ಪೆÇಲೀಸರ ಸಹಕಾರದಿಂದ 6 ತಾತ್ಕಾಲಿಕ ಶೆಡ್‍ಗಳನ್ನು ನೆಲಸಮ ಮಾಡಿ ಸ್ವತ್ತನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಇದರ ಪ್ರಸ್ತುತದ ಮಾರುಕಟ್ಟೆ ದರ ಸುಮಾರು 65 ಕೋಟಿ ರೂ.ಗಳು. 

6ಸಾವಿರ ಚದರಡಿ ವಶಕ್ಕೆ: ಮತ್ತೊಂದೆಡೆ, ಎಚ್‍ಆರ್‍ಬಿಆರ್ 3ನೆ ಹಂತದಲ್ಲಿರುವ ಕಾಚರಕನಹಳ್ಳಿಯ ಸರ್ವೇ ನಂಬರ್ 60/1 ರಲ್ಲಿನ 6 ಸಾವಿರ ಚದರಡಿ ವಿಸ್ತೀರ್ಣದ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣಕ್ಕೆ ಭೂಕಬಳಿಕೆದಾರರು ಯತ್ನಿಸಿದ್ದರು. ಇದನ್ನು ತಡೆದ ಕಾರ್ಯಪಾಲಕ ಎಂಜಿನಿಯರ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ನಿವೇಶನವನ್ನು ಬಿಡಿಎ ಸ್ವಾಧೀನಕ್ಕೆ ಪಡೆದುಕೊಂಡಿತು. ಈ ನಿವೇಶನದ ಮಾರುಕಟ್ಟೆ ದರ ಸುಮಾರು 10 ಕೋಟಿ ರೂ.ಗಳು. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, `ನಗರದ ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸ್ವತ್ತುಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 1ಸಾವಿರ ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಸ್ವತ್ತುಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ' ಎಂದರು.

`ಯಾವುದೇ ಕಾರಣಕ್ಕೂ ಬಿಡಿಎ ಆಸ್ತಿ ಭೂಕಬಳಿಕೆದಾರರ ವಶವಾಗುವುದಕ್ಕೆ ಅವಕಾಶ ನೀಡುವುದಿಲ್ಲ. ಸ್ವತ್ತುಗಳನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ಸಾಗುತ್ತದೆ. ಭೂಕಬಳಿಕೆದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ಮುಲಾಜಿಲ್ಲದೇ ನಮ್ಮ ಸ್ವತ್ತುಗಳನ್ನು ವಶಕ್ಕೆ ಪಡೆದು, ತಪ್ಪಿತಸ್ಥರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತದೆ' ಎಂದು ಅವರು ಎಚ್ಚರಿಕೆ ನೀಡಿದರು.

ಹಂತ ಹಂತವಾಗಿ ಇನ್ನೂ 400 ಎಕರೆ ಸ್ವಾಧೀನ: `ಭೂಕಬಳಿಕೆದಾರರು ಸುಮಾರು 350 ರಿಂದ 400 ಎಕರೆಯಷ್ಟು ಬಿಡಿಎ ಜಾಗವನ್ನು ಅತಿಕ್ರಮಿಸಿಕೊಂಡಿರುವುದು ಸಮೀಕ್ಷೆಯಿಂದ ತಿಳಿದು ಬಂದಿರುತ್ತದೆ. ಈ ಸ್ವತ್ತುಗಳ ಬೆಲೆ ಸುಮಾರು 25 ಸಾವಿರ ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. ಈ ಜಾಗಗಳನ್ನು ಹಂತ ಹಂತವಾಗಿ ಬಿಡಿಎ ತನ್ನ ವಶಕ್ಕೆ ತೆಗೆದುಕೊಳ್ಳಲಿದೆ' ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X