ಸೆ.10ರಂದು ಉಡುಪಿ ನಗರ ಪ್ರದೇಶದಲ್ಲಿ ಲಸಿಕಾ ಶಿಬಿರವಿಲ್ಲ
ಉಡುಪಿ, ಸೆ.9: ಶುಕ್ರವಾರ ಸೆ.10ರಂದು ಉಡುಪಿ ಜಿಲ್ಲೆಯ ನಗರ ಪ್ರದೇಶದಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ನಡೆಯುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ 18 ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story