Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಬ್ಬರು ನಾಯಕರ ಸ್ವಾರ್ಥಕ್ಕೆ ಧರ್ಮಸಿಂಗ್...

ಇಬ್ಬರು ನಾಯಕರ ಸ್ವಾರ್ಥಕ್ಕೆ ಧರ್ಮಸಿಂಗ್ ಸರಕಾರ ಉರುಳಿತು : ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ10 Sept 2021 10:45 AM IST
share
ಇಬ್ಬರು ನಾಯಕರ ಸ್ವಾರ್ಥಕ್ಕೆ ಧರ್ಮಸಿಂಗ್ ಸರಕಾರ ಉರುಳಿತು : ವಾಟಾಳ್ ನಾಗರಾಜ್

ಬೆಂಗಳೂರು : 'ಇಬ್ಬರು ನಾಯಕರು ತಮ್ಮ ಸ್ವಾರ್ಥಕ್ಕಾಗಿ ಪಿತೂರಿ ಮಾಡಿ ಧರ್ಮಸಿಂಗ್ ಸರಕಾರವನ್ನು ಉರುಳಿಸಿ, ಕರ್ನಾಟಕದ ರಾಜಕಾರಣಕ್ಕೆ ಬರಬಾರದ ರೋಗ ತಂದಿಟ್ಟರು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಟೀಕಿಸಿದ್ದಾರೆ.

ಶುಕ್ರವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಹಿರಿಯ ಪತ್ರಕರ್ತ ಆರ್.ಟಿ. ವಿಠ್ಠಲಮೂರ್ತಿ ಅವರ ರಾಜ್ಯ ರಾಜಕೀಯ ಬಗ್ಗೆ ಬರೆದ 'ರಾಜಚರಿತೆ' ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.

'ಒಂದು ವೇಳೆ ಧರ್ಮಸಿಂಗ್ ಅವರು ಪ್ರಬಲ ಸಮುದಾಯಕ್ಕೆ ಸೇರಿದವರಾಗಿದ್ದರೆ, ಅವರ ಸರಕಾರವನ್ನು ಕೆಡವಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದ ವಾಟಾಳ್, ಧರ್ಮಸಿಂಗ್ ಅವರು ದುರ್ಬಲ ವರ್ಗಕ್ಕೆ ಸೇರಿದ ಕಾರಣ ಅವರ ನೇತೃತ್ವದ ಸರಕಾರ ಉರುಳಿಸಿದರು ಎಂದರು.

ರಾಜ್ಯ ರಾಜಕಾರಣದ ವಿಷಯದಲ್ಲಿ ರಾಜ ಚರಿತ್ರೆ ಕೃತಿ ಬಹಳ ಮಹತ್ವದ್ದು. ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರಿಂದ ಹಿಡಿದು ಇಲ್ಲಿಯವರ ತನಕ ಒಂದೊಂದು ವಿಷಯಗಳು ವಿಠ್ಠಲ ಮೂರ್ತಿಯವರಿಗೆ ಕಂಠಪಾಠ. ನಿನ್ನೆ- ಮೊನ್ನೆ ನೋಡಿದ್ದೇನೋ ಎಂಬಂತೆ ಅವರು ಹೇಳುತ್ತಾರೆ.   ರಾಜಚರಿತೆ ಕೃತಿಯನ್ನು ಬಿಡುಗಡೆ ಮಾಡಿದ್ದು ಖುಷಿ ತಂದಿದೆ.

ಕೆಂಗಲ್ ಹನುಮಂತಯ್ಯ ಅವರ ಸಂಪುಟ ಸತ್ಯ ಹರಿಶ್ಚಂದ್ರನ ಸಂಪುಟ ಎಂದರು. ಕೆಂಗಲ್ ಅವರ ಸಚಿವ ಸಂಪುಟದಲ್ಲಿ ಸಿದ್ದಲಿಂಗಯ್ಯ ಅವರ ಕುಟುಂಬದ ವಿರುದ್ಧ ಆರೋಪ ಬಂದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೆ, ಇಂದು ದೊಡ್ಡ ಹಡಗನ್ನು ನುಂಗಿ ಜೀರ್ಣಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಒಂದು ಕಾಲದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಬೆಲೆ ಒಂದು ರೂಪಾಯಿ ಹೆಚ್ಚಾದರೆ ಜನ ಬೀದಿಗೆ ಬರುತ್ತಿದ್ದರು. ಆದರೆ ಇಂದು ಇಪ್ಪತ್ತೈದು, ಐವತ್ತು ರೂ. ಏರಿಕೆಯಾದರೂ ಜನ ಮಾತನಾಡುತ್ತಿಲ್ಲ ಎಂದು ವಾಟಾಳ್ ನಾಗರಾಜ್ ಬೇಸರ ವ್ಯಕ್ತಪಡಿಸಿದರು.

ಹಿರಿಯ ಪತ್ರಕರ್ತ ಬೆಲಗೂರು ಸಮೀವುಲ್ಲಾ, ಪ್ರಕಾಶಕ ರವಿಚಂದ್ರ ಹಾಗೂ ಕೃತಿಯ ಲೇಖಕರೂ ಆಗಿರುವ ಪತ್ರಕರ್ತ ವಿಠ್ಠಲ ಮೂರ್ತಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X