Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿತ್ಯನಾಥ್‌, ಮೋದಿ ವಿರುದ್ಧ...

ಆದಿತ್ಯನಾಥ್‌, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ, ಪ್ರಚೋದನಕಾರಿ ಭಾಷಣ ಆರೋಪ: ಉವೈಸಿ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ10 Sept 2021 11:54 AM IST
share
ಆದಿತ್ಯನಾಥ್‌, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ, ಪ್ರಚೋದನಕಾರಿ ಭಾಷಣ ಆರೋಪ: ಉವೈಸಿ ವಿರುದ್ಧ ಪ್ರಕರಣ ದಾಖಲು

ಕೋಮು ಸೌಹಾರ್ದತೆಯನ್ನು ಹಾಳು ಮಾಡಿದ, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ "ಅವಹೇಳನಕಾರಿ" ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಅಖಿಲ ಭಾರತ ಮಜ್ಲಿಸ್-ಇ-ಇತ್ತಿಹಾದ್-ಉಲ್-ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥರ ವಿರುದ್ಧ ಎಫ್ಐಆರ್ ಅನ್ನು ಗುರುವಾರ ರಾತ್ರಿ ಅವರ ಪಕ್ಷದ ರ್ಯಾಲಿಯ ನಂತರ ಬಾರಾಬಂಕಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ ಇತ್ಯಾದಿಗಳ ಮೇಲೆ ದ್ವೇಷವನ್ನು ಉತ್ತೇಜಿಸುವುದು), 188 (ಸಾರ್ವಜನಿಕ ಸೇವಕರ ಆದೇಶವನ್ನು ನಿರ್ಲಕ್ಷಿಸುವುದು), 269 (ಅಪಾಯಕಾರಿ ರೋಗವನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ), 270 (ರೋಗದ ಸೋಂಕು ಹರಡುವ ಸಾಧ್ಯತೆ)ಗಳ ಅನ್ವಯ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಹೇಳಿದರು.

"ತನ್ನ ಭಾಷಣದಲ್ಲಿ, AIMIM ಮುಖ್ಯಸ್ಥರು ಕೋಮು ಸೌಹಾರ್ದತೆಯನ್ನು ಹಾಳುಮಾಡುವ ಹೇಳಿಕೆಗಳನ್ನು ನೀಡಿದರು ಮತ್ತು 100 ವರ್ಷಗಳಷ್ಟು ಹಳೆಯದಾದ ರಾಮ ಸನೇಹಿ ಘಾಟ್ ಮಸೀದಿಯನ್ನು ಆಡಳಿತವು ಧ್ವಂಸಗೊಳಿಸಿತು ಮತ್ತು ಅದರ ಅವಶೇಷಗಳನ್ನು ಸಹ ತೆಗೆದುಹಾಕಲಾಗಿದೆ ಎಂದು ಹೇಳಿದರು. ಇದು ವಾಸ್ತವಕ್ಕೆ ವಿರುದ್ಧವಾಗಿದೆ" ಎಂದು ಎಸ್ಪಿ ಹೇಳಿದರು.

"ಈ ಹೇಳಿಕೆಯಿಂದ, ಉವೈಸಿ ಕೋಮು ಸೌಹಾರ್ದತೆಯನ್ನು ಹಾಳುಮಾಡಲು ಮತ್ತು ನಿರ್ದಿಷ್ಟ ಸಮುದಾಯದ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸಿದರು. ಅವರು ಪ್ರಧಾನಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ವಿರುದ್ಧ ಅಸಭ್ಯ ಮತ್ತು ಆಧಾರರಹಿತ ಟೀಕೆಗಳನ್ನು ಮಾಡಿದರು" ಎಂದು ಅವರು ಹೇಳಿದರು.

ಉವೈಸಿ ಮೂರು ದಿನಗಳ ಉತ್ತರ ಪ್ರದೇಶ ಪ್ರವಾಸದಲ್ಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು 100 ಸ್ಥಾನಗಳಲ್ಲಿ ಸ್ಪರ್ಧಿಸುವ ನಿರ್ಧಾರ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X