Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಣ್ಣ ವೈವಾಹಿಕ ಸಮಸ್ಯೆಗೆ ಲವ್ ಜಿಹಾದ್...

ಸಣ್ಣ ವೈವಾಹಿಕ ಸಮಸ್ಯೆಗೆ ಲವ್ ಜಿಹಾದ್ ಬಣ್ಣ ನೀಡಿದ ಸಂಘಟನೆಗಳು: ಮಹಿಳೆಯಿಂದ ನ್ಯಾಯಾಲಯಕ್ಕೆ ಮೊರೆ

ವಾರ್ತಾಭಾರತಿವಾರ್ತಾಭಾರತಿ10 Sept 2021 4:03 PM IST
share
ಸಣ್ಣ ವೈವಾಹಿಕ ಸಮಸ್ಯೆಗೆ ಲವ್ ಜಿಹಾದ್ ಬಣ್ಣ ನೀಡಿದ ಸಂಘಟನೆಗಳು: ಮಹಿಳೆಯಿಂದ ನ್ಯಾಯಾಲಯಕ್ಕೆ ಮೊರೆ

ಹೊಸದಿಲ್ಲಿ: ಗುಜರಾತ್ ಸರಕಾರ ಜಾರಿಗೊಳಿಸಿರುವ, ಲವ್ ಜಿಹಾದ್ ಕಾನೂನು ಎಂದೇ ಸಾಮಾನ್ಯವಾಗಿ ಕರೆಯಲಾಗುವ ಮತಾಂತರ ತಡೆ ಕಾಯಿದೆಯನ್ನು ಸ್ವಇಚ್ಛೆಯಿಂದ ಅಂತರ-ಧರ್ಮೀಯ ವಿವಾಹವಾದ ದಂಪತಿಗಳನ್ನೇ ಟಾರ್ಗೆಟ್ ಮಾಡಲು  ಪೊಲೀಸರು ಹಾಗೂ ಕೆಲ ಸಂಘಟನೆಗಳು  ಬಳಸಿಕೊಂಡಿವೆ ಎಂಬುದನ್ನು ಮುಸ್ಲಿಂ ವ್ಯಕ್ತಿಯನ್ನು ವಿವಾಹವಾದ ಹಿಂದು ಮಹಿಳೆಯೊಬ್ಬಳು ನೀಡಿದ ಸಾಕ್ಷ್ಯ ಪುಷ್ಠೀಕರಿಸುತ್ತಿದೆ. ಈ ಮಹಿಳೆಯ ಪತಿ ಜೈಲಿನಲ್ಲಿದ್ದಾರೆ.

ಈ ಮಹಿಳೆಯ ದೂರಿನ ಆಧಾರದಲ್ಲಿಯೇ ಬಿಹಾರದ ಧಾರ್ಮಿಕ ಸ್ವಾತಂತ್ರ್ಯ(ತಿದ್ದುಪಡಿ( ಕಾಯಿದೆ 2021) ಅನ್ವಯ ಈ ವರ್ಷದ ಜೂನ್ ತಿಂಗಳಲ್ಲಿ ದಾಖಲಾದ ಮೊದಲ ಪ್ರಕರಣ ದಾಖಲಾಗಿತ್ತು. ವಡೋದರ ಪೊಲೀಸರು ದಾಖಲಿಸಿರುವ ಎಫ್‍ಐಆರ್‍ನಲ್ಲಿನ ವಿಚಾರಗಳು ನಿಜವಲ್ಲ ಎಂದು ಈ ಮಹಿಳೆ ನ್ಯಾಯಾಲಯಕ್ಕೆ ಹೇಳಿದ್ದಾಳೆ.

ಎಫ್‍ಐಆರ್‍ನಲ್ಲಿ ಲೈಂಗಿಕ ಹಲ್ಲೆ, ಬಲವಂತದ ಗರ್ಭಪಾತ, ಕೌಟುಂಬಿಕ ಹಿಂಸೆ ಹಾಗು ಜಾತಿ ನಿಂದನೆ ಸಹಿತ ಹಲವು ಆರೋಪಗಳನ್ನು ಉಲ್ಲೇಖಿಸಲಾಗಿದೆಯಾದರೂ ತಾನು ಇಂತಹ ಆರೋಪಗಳನ್ನು ಮಾಡಿಲ್ಲ ಎಂದು ಮಹಿಳೆ ನ್ಯಾಯಾಲಯಕ್ಕೆ ತಿಳಿಸಿದ್ದಾಳೆ.

ಒಂದು ಕ್ಷುಲ್ಲಕ ವೈವಾಹಿಕ ಸಮಸ್ಯೆಯನ್ನು ಮುಂದಿಟ್ಟುಕೊಂಡು ತಾನು ವಡೋದರಾದ ಗೋತ್ರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾಗಿ ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 498ಎ ಅನ್ವಯ  ದಾಖಲಿಸಬಹುದಾಗಿತ್ತು, ಆದರೆ ಕೆಲ ಸಂಘಟನೆಗಳು ಮಧ್ಯ ಪ್ರವೇಶಿಸಿ ಇದಕ್ಕೆ ಮತೀಯ ಹಾಗೂ ಲವ್ ಜಿಹಾದ್ ಬಣ್ಣ ದೊರೆಯುಂತಾಯಿತು ಎಂದು  ಮಹಿಳೆ ಮತ್ತಾಕೆಯ ಪತಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

ಆದರೆ ಎಫ್‍ಐಆರ್ ನಲ್ಲಿ ಅತ್ಯಾಚಾರ ಆರೋಪ ಕೂಡ ಉಲ್ಲೇಖಿಸಿರುವುದ ಆಘಾತ ಮೂಡಿಸಿದೆ, ತಾನು ಬಲವಂತದ ಮತಾಂತರವಾಗಿಲ್ಲ ಎಂದು ಮಹಿಳೆ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ತಾವಿಬ್ಬರೂ ಪ್ರೀತಿಸಿ ನಂತರ ಇಸ್ಲಾಮಿಕ್ ಧರ್ಮಾನುಸಾರ ಫೆಬ್ರವರಿ 16, 2021ರಂದು ವಿವಾಹವಾಗಿದ್ದಾಗಿಯೂ ದಂಪತಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಮಹಿಳೆಯ ಪತಿ, ಆತನ ಮನೆಯವರು, ಮದುವೆ ನಡೆಸಿಕೊಟ್ಟ ಖಾಝಿ ಸಹಿತ ಏಳು ಮಂದಿ ಜೈಲಿನಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X