Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಸರ ನಷ್ಟವನ್ನು ತುಂಬಲು ಪ್ರತಿವರ್ಷ...

ಪರಿಸರ ನಷ್ಟವನ್ನು ತುಂಬಲು ಪ್ರತಿವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ11 Sept 2021 4:42 PM IST
share
ಪರಿಸರ ನಷ್ಟವನ್ನು ತುಂಬಲು ಪ್ರತಿವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಬೆಂಗಳೂರು, ಸೆ. 11: `ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಶನಿವಾರ ಇಲ್ಲಿನ ಮಲ್ಲೇಶ್ವರಂ ಅರಣ್ಯ ಭವನದಲ್ಲಿ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದ ಅವರು, `ಪ್ರತಿವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು' ಎಂದು ಹೇಳಿದರು.

`ಅರಣ್ಯ ನಮಗಿಂತ ಮೊದಲು ಅಸ್ತಿತ್ವದಲ್ಲಿದ್ದ ನೈಸರ್ಗಿಕ ಸಂಪತ್ತು. ಅರಣ್ಯ ನಮ್ಮ ಪೂರ್ವಿಕರು ಎಂಬ ಅಭಿಪ್ರಾಯ ನಮ್ಮಲ್ಲಿದೆ. ಪೂರ್ವಿಕರಿಗೆ ಭಕ್ತಿಭಾವದಿಂದ ನಮನ ಸಲ್ಲಿಸುವಂತೆಯೇ ಗಿಡಮರಗಳನ್ನು ಪೂಜ್ಯ ಭಾವನೆಯಿಂದ ಕಾಣಬೇಕು. ಅರಣ್ಯವಿಲ್ಲದೇ ಮನುಷ್ಯನ ಅಸ್ತಿತ್ವವಿರುತ್ತಿರಲಿಲ್ಲ. ಕಾಡಿಗೆ ನಾವು ಸದಾ ಋಣಿಯಾಗಿರಬೇಕು' ಎಂದು ಬಸವರಾಜ ಬೊಮ್ಮಾಯಿ ಸಲಹೆ ಮಾಡಿದರು.

`ಮನುಷ್ಯನ ಮೂಲ ಪ್ರಾರಂಭವಾಗಿದ್ದು ಅರಣ್ಯದಲ್ಲಿ. ಈಗ ನಾಗರಿಕತೆ ಬೆಳೆಸಿಕೊಂಡಿದ್ದೇವೆ. ಅರಣ್ಯ ನಾಶಕ್ಕೆ ನಾವು ಎಡೆ ಮಾಡಿಕೊಟ್ಟಿದ್ದೇವೆ. ನೈಸರ್ಗಿಕ ಸಂಪತ್ತಿನ ವಿಚಾರದಲ್ಲಿ ನಮಗೆ ಇರುವ ಮನೋಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಕಾಡಿಲ್ಲದೆ ಮಳೆ ಇಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಮನುಷ್ಯನ ಅತಿಯಾಸೆಯಿಂದ ನಿಸರ್ಗ ನಾಶವಾಗುತ್ತಿದೆ. 2ಸಾವಿರ ವರ್ಷಗಳಲ್ಲಿ ನಾಶವಾಗುವಷ್ಟು ಅರಣ್ಯವನ್ನು ಕೇವಲ 20 ವರ್ಷಗಳಲ್ಲಿ ನಾಶ ಮಾಡಿದ್ದೇವೆ. ಪರಿಸರ ಹಾನಿಯ ವೇಗ ಅಷ್ಟು ತೀವ್ರಗೊಂಡಿದೆ. ಇದು ನಿಜಕ್ಕೂ ಭಯಾನಕವಾದ ಸಂಗತಿ' ಎಂದು ಅವರು ಆತಂಕ ವ್ಯಕ್ತಪಡಿಸಿದರು. 

`ಮುಂದಿನ ಜನಾಂಗಕ್ಕಾಗಿ ಅರಣ್ಯ ಸಂರಕ್ಷಿಸುವ ಅಗತ್ಯ ಮತ್ತು ಅನಿವಾರ್ಯತೆ ಇದೆ. ಅವಶ್ಯಕತೆಗಿಂತ ಹೆಚ್ಚು ನಿಸರ್ಗವನ್ನು ನಾಶಪಡಿಸಿದರೆ, ಭವಿಷ್ಯದಿಂದ ಕಳ್ಳತನ ಮಾಡಿದಂತೆ. ನಮ್ಮ ಹಿರಿಯರು ಇದನ್ನು ಉಳಿಸಿದ್ದರಿಂದ ಈ ಸಂಪತ್ತನ್ನು ನಾವು ಅನುಭವಿಸುತ್ತಿದ್ದೇವೆ. ಮುಂದಿನ ಜನಾಂಗದ ಪಾಲನ್ನು ನಾವೇ ಬಳಕೆ ಮಾಡಬಾರದು ಎಂಬ ಅರಿವಿನಿಂದ ಇಲಾಖೆ ಕೆಲಸ ಮಾಡಬೇಕು. ಆಗ ಮಾತ್ರ ಹುತಾತ್ಮರ ದಿನಾಚರಣೆಗೆ ಅರ್ಥ ಬರುತ್ತದೆ' ಎಂದು ಅವರು ತಿಳಿಸಿದರು. 

`ಅರಣ್ಯ ಸಂರಕ್ಷಣೆಯ ಸಲುವಾಗಿ ಅನೇಕರು ಹುತಾತ್ಮರಾಗಿದ್ದಾರೆ. ರಾಜ್ಯದ 43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯವಿದೆ. ಪ್ರಸ್ತುತ ಶೇ.21.5 ರಷ್ಟು ಅರಣ್ಯದ ಕೊರತೆ ಇದೆ. ಕಾಡುಗಳ್ಳರನ್ನು ನಿಯಂತ್ರಿಸಿ, ಕಾಡು, ಉಳಿಸಿ ಬೆಳೆಸುವ ಕ್ರಮಗಳನ್ನು ಕೈಗೊಳ್ಳಬೇಕು. ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಘರ್ಷವನ್ನು ಕಡಿಮೆ ಮಾಡಬೇಕು. ಗಡಿಗಳಲ್ಲಿ ನಾಗರಿಕರೂ ಪ್ರಾಣ ತೆತ್ತಿದ್ದಾರೆ. ಅವರ ಪ್ರಾಣ ಉಳಿಸುವುದೂ ಮುಖ್ಯ. ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು. ಇಲಾಖೆಯ ಕಾರ್ಯ ಚಟುವಟಿಕೆ ವಿಸ್ತರಿಸಲಿ. ದಕ್ಷತೆಯಿಂದ ಕಾಡನ್ನು ಉಳಿಸುವ ಕೆಲಸವಾಗಲಿ. ಕರ್ತವ್ಯದಲ್ಲಿರುವವರ ಪ್ರಾಣ ಸಂರಕ್ಷಣೆಗೆ ಅಗತ್ಯ ಪರಿಕರಗಳನ್ನು ಒದಗಿಸಬೇಕು ಎಂದು ಸಿಎಂ ತಿಳಿಸಿದರು. ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X