ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ, ಸೆ.11: ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೊಯ್ಸಳ‘ ಹಾಗೂ ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ‘ ಜಿಲ್ಲಾಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಪ್ರತಿ ಮಕ್ಕಳಿಗೆ ತಲಾ 10,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಮಕ್ಕಳ ಸಾಧನೆ ಕುರಿತು ಪೂರಕ ದಾಖಲೆಗಳನ್ನು ಅ.5ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ:0820-2574978/2574972 ನ್ನು ಸಂಪರ್ಕಿಸುವಂತೆ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
Next Story





