Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರಣಕಟ್ಟೆ ಬಳಿ 11ನೇ ಶತಮಾನದ...

ಮಾರಣಕಟ್ಟೆ ಬಳಿ 11ನೇ ಶತಮಾನದ ಉಮಾಮಹೇಶ್ವರ ಶಿಲ್ಪ ಪತ್ತೆ

ವಾರ್ತಾಭಾರತಿವಾರ್ತಾಭಾರತಿ11 Sept 2021 8:28 PM IST
share
ಮಾರಣಕಟ್ಟೆ ಬಳಿ 11ನೇ ಶತಮಾನದ ಉಮಾಮಹೇಶ್ವರ ಶಿಲ್ಪ ಪತ್ತೆ

ಉಡುಪಿ, ಸೆ.11: ಜಿಲ್ಲೆಯ ಬೈಂದೂರು ತಾಲೂಕಿನ ಮಾರಣಕಟ್ಟೆಯ ಸಂನ್ಯಾಸಿಬೆಟ್ಟಿನಲ್ಲಿ ಅತ್ಯಂತ ಕಲಾತ್ಮಕವಾದ ಉಮಾಮಹೇಶ್ವರ ಶಿಲ್ಪ ಪತ್ತೆಯಾಗಿದೆ ಎಂದು ಶಿರ್ವದ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇವಲ 9 ಸೆ.ಮೀ. ಎತ್ತರ, 9 ಸೆ.ಮೀ. ಉದ್ದ ಮತ್ತು 4 ಸೆ.ಮೀ. ಅಗಲ ವಾಗಿರುವ ಈ ಕಿರು ಶಿಲ್ಪ, ತನ್ನ ಕಲಾತ್ಮಕತೆಯಿಂದ ನೋಡುಗರ ಕಣ್ಮನ ಸೆಳೆಯುತ್ತದೆ. ‘ಉಮಯಾ ಸಹ ದೇವೇಶ ನಂದಿವಾಹನ ಮೇವಚ’ ಎಂಬ ಉಕ್ತಿಯಂತೆ, ಉಮೆಯ ಸಂಗಡ ಮಹೇಶ್ವರ ನಂದಿವಾಹನದ ಮೇಲೆ ತನ್ನ ಎಲ್ಲಾ ಗಣಗಳ ಸಹಿತ ಸವಾರಿ ಮಾಡುವಂತೆ ಶಿಲ್ಪದಲ್ಲಿ ಚಿತ್ರಿಸಲಾಗಿದೆ. ಗಣಪತಿ, ವೀರಭದ್ರ, ಭೃಂಗಿ ಶಿಲ್ಪಗಳನ್ನು ಸಹ ಇಲ್ಲಿ ಗುರುತಿಸಬಹುದಾಗಿದೆ. ಉಳಿದ ಶಿಲ್ಪಗಳು ಸವೆದು ಹೋಗಿರುವುದರಿಂ ಗುರುತಿಸಲು ಸಾದ್ಯವಾಗುವುದಿಲ್ಲ.

ನಂದಿವಾಹನ ಶಿವ ತನ್ನ ಮುಂದಿನ ಎರಡೂ ಕೈಗಳಲ್ಲಿ ನಂದಿಯ ಕಿವಿಗಳನ್ನು ಹಿಡಿದಿರುವಂತೆ ಚಿತ್ರಿಸಲಾಗಿದೆ. ಆತನ ಹಿಂಬಂದಿಯ ಬಲಗೈಯಲ್ಲಿ ಮೃಗವನ್ನು ಲಾಂಛನವಾಗಿ ಹಿಡಿದಿದ್ದಾನೆ. ಎಡಗೈ ಮುರಿದು ಹೋಗಿದೆ. ಆತನ ಹಿಂಭಾಗ ದಲ್ಲಿ ಕುಳಿತ ಉಮೆ, ಶಿವನ ಎರಡೂ ಭುಜಗಳನ್ನು ಹಿಡಿದುಕೊಂಡಿರುವಂತೆ ಚಿತ್ರಿಸಲಾಗಿದೆ. ಆದರೆ, ದುರಾದೃಷ್ಟವಶಾತ್ ಉಮೆಯ ಸೊಂಟದ ಮೇಲ್ಭಾಗ ತುಂಡಾಗಿ ಹೋಗಿದೆ.

ಉಮಾಮಹೇಶ್ವರ ಪಂಥವನ್ನು ಸೋಮಪಂಥ ಅಥವಾ ಸೋಮೇಶ್ವರ ಪಂಥವೆಂದು ಕರೆಯಲಾಗುತ್ತದೆ. ಈ ಪಂಥ ಗುಜರಾತಿನಲ್ಲಿ ಸೋಮ ಅಥವಾ ಸೋಮಶರ್ಮ ಎಂಬಾತನಿಂದ ಜನ್ಮತಾಳಿ ದೇಶದಾದ್ಯಂತ ಅತ್ಯಲ್ಪ ಕಾಲದಲ್ಲಿ ಪ್ರಸಿದ್ಧ ಪಂಥವಾಗಿ ಬೆಳವಣಿಗೆ ಹೊಂದಿತು. ತುಳುನಾಡಿನ ಹಲವು ಕಡೆ ಸೋಮನಾಥ ದೇವಾಲಯ/ಉಮಾಮಹೇಶ್ವರ ದೇವಾಲಯಗಳಿವೆ. ಸುಮಾರು 11ನೇ ಶತಮಾನದಲ್ಲಿ ಈ ಪಂಥ ದಕ್ಷಿಣ ಭಾರತದಲ್ಲಿ ಜನಪ್ರಿಯ ಪಂಥವಾಗಿತ್ತು. ಈ ಶಿಲ್ಪವೂ ಸಹ 11ನೇ ಶತಾನದ ಶಿಲ್ಪಶೈಲಿಯಲ್ಲಿ ರಚಿತ ವಾಗಿದೆ.

ಈ ವಿಗ್ರಹದ ಅಧ್ಯಯನದಲ್ಲಿ ಮಾರಣಕಟ್ಟೆಯ ಶಂಕರ ಭಟ್, ಮಂಜುನಾಥ ಭಟ್, ಮುರುಳಿಧರ ಹೆಗಡೆ ಹಾಗೂ ಕಾಲೇಜಿನ ಪುರಾತತ್ವ ವಿಭಾಗದ ವಿದ್ಯಾರ್ಥಿಗಳು ನೆರವು ನೀಡಿದ್ದಾರೆ ಎಂದು ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X