Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶ ಅಭಿವೃದ್ಧಿಯು ನೈಸರ್ಗಿಕ ಸಂಪನ್ಮೂಲಗಳ...

ದೇಶ ಅಭಿವೃದ್ಧಿಯು ನೈಸರ್ಗಿಕ ಸಂಪನ್ಮೂಲಗಳ ಮೇಲೆ ಅವಲಂಬಿತವಾಗಿದೆ: ನ್ಯಾ.ಉಮೇಶ್ ಅಡಿಗ

ವಾರ್ತಾಭಾರತಿವಾರ್ತಾಭಾರತಿ11 Sept 2021 9:52 PM IST
share

ಧಾರವಾಡ, ಸೆ.11: ಒಂದು ದೇಶ ಶ್ರೀಮಂತಿಕೆ ಆ ದೇಶದ ನೈಸರ್ಗಿಕ ಸಂಪತ್ತನ್ನು ಅವಲಂಬಿಸಿರುತ್ತದೆ. ನೈಸರ್ಗಿಕ ಸಂಪತ್ತಿನ ಸಂರಕ್ಷಣೆಗಾಗಿ ಹಲವಾರು ಅರಣ್ಯ ಸಿಬ್ಬಂದಿ ತಮ್ಮ ಪ್ರಾಣತ್ಯಾಗ ಮಾಡಿದ್ದು, ಅವರ ಸ್ಮರಣೆಯು ನಮ್ಮ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ್ ಅಡಿಗ ಹೇಳಿದರು.

ಶನಿವಾರ ನಗರದ ಕೆ.ಸಿ.ಪಾರ್ಕ್ ಹತ್ತಿರದ ಅರಣ್ಯ ಸಂಕೀರ್ಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು  ಮಾತನಾಡಿದರು.

ದೇಶ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಆ ದೇಶದ ಶ್ರೀಮಂತಿಕೆ, ಅಭಿವೃದ್ಧಿ ಅವಲಂಬಿತವಾಗಿರುತ್ತದೆ. ಅರಣ್ಯ ರಕ್ಷಕ ಸಿಬ್ಬಂದಿಗೆ ಹೆಚ್ಚಿನ ಸವಲತ್ತುಗಳನ್ನು ನೀಡುವ ಮೂಲಕ ಅವರಿಗೆ ಧೈರ್ಯ ತುಂಬಬೇಕು. ಆ ಮೂಲಕ ನಮ್ಮ ದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಣೆ ಮಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಮಹಾಮಾರಿಯಿಂದ ಉಂಟಾದ ಆಮ್ಲಜನಕ ಕೋರತೆಯು ಪ್ರಾಣವಾಯು ನೀಡುವ ಪರಿಸರದ ಮಹತ್ವವನ್ನು ನಮಗೆ ತೋರಿಸಿ ಕೊಟ್ಟಿದೆ. ಆದುದರಿಂದ, ಪರಿಸರ ರಕ್ಷಣೆ ಮತ್ತು ವನ್ಯಜೀವಿಗಳ ರಕ್ಷಣೆಯು ಬರಿ ಅರಣ್ಯ ಇಲಾಖೆಯಿಂದ ಮಾತ್ರವಲ್ಲದೆ. ಇಡೀ ದೇಶದ ಜನರು ತಮ್ಮ ಕರ್ತವ್ಯವೆಂದು ಅರಿತು ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು.

ನಮ್ಮ ಬದುಕಿಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರಿಗಾಗಿ, ನಮ್ಮ ಕೊನೆ ಉಸಿರು ಇರುವ ತನಕ ಅವರ ತ್ಯಾಗ, ಬಲಿದಾನವನ್ನು ಸ್ಮರಿಸಿಕೊಳ್ಳಬೇಕು ಎಂದು ಉಮೇಶ್ ಅಡಿಗ ತಿಳಿಸಿದರು.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಚೌವ್ಹಾಣ್ ಮಾತನಾಡಿ, ಪ್ರತಿ ವರ್ಷ ಸೆ.11ರಂದು ಇಡೀ ದೇಶದಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ದೇಶ ಪ್ರತಿಯೊಬ್ಬರು ಕೈ ಜೋಡಿಸಿ ನಮ್ಮ ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕಾರ್ಯವಾಗಬೇಕು. ದೇಶದ ಅಭಿವೃದ್ಧಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಸಮತೋಲನದಲ್ಲಿ ಇರಬೇಕು. ಅಭಿವೃದ್ಧಿಯನ್ನು ಪರಿಸರ ರಕ್ಷಣೆಯ ಜೊತೆಗೆ ಕಾರ್ಯಕೈಗೊಳ್ಳಬೇಕು ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 55 ವರ್ಷಗಳಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತ 53 ಹುತಾತ್ಮರರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಉಪ ಪೊಲೀಸ್ ಆಯುಕ್ತ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ಗೋಪಾಲಕೃಷ್ಣ, ಪ್ರೊಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಕೆ.ಟಿ.ಹನುಮಂತಪ್ಪ, ಅರಣ್ಯ ವ್ಯವಸ್ಥಾಪನಾ ಅಧಿಕಾರಿ ಎ.ಎ.ಇಳಕಲ್, ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿವೇಕ ಕವರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಕೆಂಚಪ್ಪನವರ, ಹನುಮಂತರಾಜು ಗುತ್ತೆಪ್ಪ, ನಿವೃತ್ತ ಉಪ ಅರಣ್ಯ ಸಂರಕ್ಷಾಧಿಕಾರಿ ಡಿ.ಆರ್.ನಾಯಕ, ಎಸ್.ಎನ್.ಕುಲಕರ್ಣಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X