ಹುಣಸೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸೆರೆ

ಮೈಸೂರು,ಸೆ.11: ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಚಿರತೆ ಸೆರೆಸಿಕ್ಕ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಹಗರನಹಳ್ಳಿ ಮಂಟಿಕೊಪ್ಪಲು ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ.
ಹಲವು ದಿನಗಳಿಂದ ಚಿರತೆ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿತ್ತು. ರೈತ ಸೋಮಯ್ಯ ಗೆ ಸೇರಿದ ಮೂರು ಮೇಕೆಗಳನ್ನು ಚಿರತೆ ಕೊಂದು ಹಾಕಿದ್ದು, ಈ ಹಿನ್ನೆಲಯಲ್ಲಿ ಅರಣ್ಯ ಇಲಾಖೆಗೆ ಸ್ಥಳೀಯರು ದೂರನ್ನು ನೀಡಿದ್ದರು. ಚಿರತೆ ಸೆರೆಗೆ ಗ್ರಾಮದ ಹೊರಗಿರುವ ಜಮೀನಿನಲ್ಲಿ ಬೋನನ್ನು ಇರಿಸಿದ್ದರು.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸಿಕ್ಕಿ ಬಿದ್ದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಗ್ರಾಮಸ್ಥರಿಗೆ ಬಹಳಷ್ಟು ಉಪಟಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಚಿರತೆ ಸೆರೆಯಾಗಿದ್ದಕ್ಕೆ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
Next Story





