Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ:...

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಅವಳಿ ನಗರದ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡಿದ್ದಾರೆ; ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 Sept 2021 7:36 PM IST
share
ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಅವಳಿ ನಗರದ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡಿದ್ದಾರೆ; ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ, ಸೆ. 12: `ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇಲ್ಲಿನ ಮತದಾರರು ಆಡಳಿತಾರೂಢ ಬಿಜೆಪಿಗೆ ತಕ್ಕ ಉತ್ತರ ಪತ್ರವನ್ನು ನೀಡಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಪಾಲಿಕೆ ಚುನಾವಣಾ ಫಲಿತಾಂಶ ತಮಗೆ ಸಮಾಧಾನ ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಲಿ. ಸ್ಥಳೀಯವಾಗಿ ಮತದಾನದ ಹಕ್ಕು ಹಾಗೂ ಘಟಾನುಘಟಿ ನಾಯಕರಿದ್ದರೂ, ಬಹುಮತ ಪಡೆಯಲು ಬಿಜೆಪಿಗೆ ಸಾಧ್ಯವಾಗಿಲ್ಲ. ತಮಗೆ ಬೇಕಾದ ಹಾಗೇ ವಾರ್ಡ್ ವಿಂಗಡಣೆ ಮಾಡಿ, ಮೀಸಲಾತಿ ಘೋಷಿಸಿಕೊಂಡು, ಚುನಾವಣೆ ನಡೆಸಿದರು. ಆದರೂ ಅವರಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ' ಎಂದು ಟೀಕಿಸಿದರು. 

ತಪ್ಪಾಗಿದೆ: `ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಜ್ಯದ ನಾಯಕರು ಟಿಕೆಟ್ ಹಂಚಿಕೆಯಲ್ಲಿ ಎಡವಿದ್ದರಿಂದ ನಿರೀಕ್ಷಿತ ಸ್ಥಾನದಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಗೆಲ್ಲಬಹುದಾದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ, ಒತ್ತಡಕ್ಕೆ ಮಣಿದು ಬೇರೆಯವರಿಗೆ ನೀಡಿದರು. ಇದರಿಂದಾಗಿ ಕೆಲವರು ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದಾರೆ. ಅವರು ನಮ್ಮ ಸಂಪರ್ಕದಲ್ಲಿದ್ದು, ಪಕ್ಷದ ತತ್ವ ಸಿದ್ಧಾಂತದಲ್ಲಿಯೇ ಮುಂದುವರಿಯುವುದಾಗಿ ತಿಳಿಸಿದ್ದಾರೆ' ಎಂದು ಶಿವಕುಮಾರ್ ಹೇಳಿದರು.

`ಮಹದಾಯಿ ಮತ್ತು ಮೇಕೆದಾಟು ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರೇ ಮಾತನಾಡುತ್ತಿದ್ದರು. ಇದೀಗ ಅವರದ್ದೇ ಸರಕಾರವಿದೆ. ಏನು ಮಾಡುತ್ತಾರೆಂದು ನೋಡೋಣ' ಎಂದು ಶಿವಕುಮಾರ್, `ಕೋವಿಡ್ ಸೋಂಕಿಗೆ ಅನೇಕರು ಮೃತಪಟ್ಟಿದ್ದಾರೆ. ಬಹುತೇಕರು ಆಸ್ಪತ್ರೆಯ ಹಣ ಪಾವತಿಸಲಾಗದೆ ಕಂಗಾಲಾಗಿದ್ದಾರೆ. ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆಲ್ಲ ಮೊದಲು ಸರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಅಧಿವೇಶನದಲ್ಲಿ ಚರ್ಚಿಸಲಾಗುವುದು' ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X