ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ರವಾನೆ: ದೂರು ದಾಖಲು

ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ. 12: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ(ಕೆಎಸ್ಒಯು) ಕುಲಪತಿಗೆ ನಕಲಿ ಇ-ಮೇಲ್ ರವಾನಿಸಿ ಸಹಾಯ ಕೇಳಿದ ಆರೋಪ ಕೇಳಿಬಂದಿದೆ.
ಕುಲಪತಿ ಶೆಲ್ವ ಪಿಳ್ಳೆ ಅಯ್ಯಂಗಾರ್ ಸೇರಿದಂತೆ ಅನೇಕರಿಗೆ ದುಷ್ಕರ್ಮಿಗಳು ಇ-ಮೇಲ್ ಕಳಿಸಿದ್ದು, ಹಣದ ನೆರವು ಒದಗಿಸುವಂತೆ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಇದರಿಂದ ಎಚ್ಚೆತ್ತ ಅಧಿಕಾರಿಗಳು ಇಮೇಲ್ ಪರಿಶೀಲಿಸುವಂತೆ ಸೂಚಿಸಿದ್ದು, ಈ ಸಂಬಂಧ ಸೈಬರ್ ಕ್ರೈಂ ಠಾಣಾ ಪೊಲೀಸರು ದೂರು ದಾಖಲಿಸಿದ್ದಾರೆ.
Next Story





