Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈನಲ್ಲಿ ಮತ್ತೊಂದು ಲೈಂಗಿಕ...

ಮುಂಬೈನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯದ ಘಟನೆ

ತಮ್ಮ ವ್ಯಾಪ್ತಿಯಲ್ಲಿ ಅಪರಾಧ ನಡೆಯಲಿಲ್ಲ ಎಂಬ ಕಾರಣಕ್ಕೆ ಕೇಸ್ ದಾಖಲಿಸಿಕೊಳ್ಳದ 2 ಪೊಲೀಸ್ ಠಾಣೆಗಳು

ವಾರ್ತಾಭಾರತಿವಾರ್ತಾಭಾರತಿ12 Sept 2021 9:46 PM IST
share
ಮುಂಬೈನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯದ ಘಟನೆ

ಮುಂಬೈ: ಮುಂಬೈ ಉಪನಗರ ಸಾಕಿನಾಕಾದಲ್ಲಿ 34 ವರ್ಷದ ಮಹಿಳೆ ಕ್ರೂರ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಸಾವನ್ನಪ್ಪಿದ ಒಂದು ದಿನದ ನಂತರ ಮಹಾರಾಷ್ಟ್ರದಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯದ ಘಟನೆ ವರದಿಯಾಗಿದೆ. ಈ ಬಾರಿ ಉಲ್ಲಾಸನಗರದಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ.

ಶುಕ್ರವಾರ ರಾತ್ರಿ ಉಲ್ಲಾಸನಗರ ಸ್ಟೇಶನ್ ಆವರಣದಲ್ಲಿ ರೈಲ್ವೇ ವಸತಿಗೃಹದಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ರೈಲ್ವೇ ಪೊಲೀಸರು ಇಂದು ತಿಳಿಸಿದ್ದಾರೆ. ಐಪಿಸಿ ಹಾಗೂ  ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಹಾಗೂ  ಆರೋಪಿಯನ್ನು ಬಂಧಿಸಲಾಗಿದೆ.

 15 ವರ್ಷದ ಹುಡುಗಿ ಶಿರಡಿಯಿಂದ ಹಿಂದಿರುಗುತ್ತಿದ್ದಳು. ಆಕೆ ಭಿವಂಡಿ ಬೈಪಾಸ್‌ನಲ್ಲಿ ಇಳಿದಿದ್ದು ನಂತರ ಕಲ್ಯಾಣ್‌ಗೆ ಹೋಗಿದ್ದಳು.  ಉಲ್ಲಾಸ್‌ನಗರಕ್ಕೆ ತೆರಳಲು ಸ್ಥಳೀಯ ರೈಲನ್ನು ಹತ್ತಿದ್ದಾಗಿ ರೈಲ್ವೆ ಪೊಲೀಸ್ ಆಯುಕ್ತ ಖೈಸರ್ ಖಾಲಿದ್ ಅವರು ಮಾಧ್ಯಮಗಳಿಗೆ ತಿಳಿಸಿದರು.

ರಾತ್ರಿ 9 ಗಂಟೆಗೆ ಉಲ್ಲಾಸ್ ನಗರದಲ್ಲಿ ಇಳಿದ ನಂತರ ಬಾಲಕಿ  ಇಬ್ಬರು ಸ್ನೇಹಿತರನ್ನು ಭೇಟಿಯಾದಳು ಹಾಗೂ  ಅವರು ಮನೆಯತ್ತ ತೆರಳುತ್ತಿದ್ದರು. ಅವರು ನಿಲ್ದಾಣದ ಸ್ಕೈವಾಕ್‌ನಲ್ಲಿ ನಡೆದು ಹೋಗುತ್ತಿದ್ದಾಗ ಆರೋಪಿ ಅವರನ್ನು ಸುತ್ತುವರಿದಿದ್ದ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಆರೋಪಿ ತನ್ನ ಬಳಿ ಇದ್ದ ಸುತ್ತಿಗೆಯಿಂದ ಹುಡುಗಿಯ ಸ್ನೇಹಿತರನ್ನು ಹೆದರಿಸಿದ್ದಾನೆ. ನಂತರ ಆತ ಬಾಲಕಿಯನ್ನು ಅಪಹರಿಸಿ ಸ್ಕೈವಾಕ್ ನಿಂದ ಸುಮಾರು 50 ಮೀ. ದೂರದಲ್ಲಿರುವ ನಿರ್ಜನ ರೈಲ್ವೆ ವಸತಿಗೃಹಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆರೋಪಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಹಾಗೂ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ರಾತ್ರಿಯಿಡೀ ಹುಡುಗಿ ಅಲ್ಲಿಯೇ ಬಂಧಿಯಾಗಿದ್ದಳು.

ಬೆಳಿಗ್ಗೆ,ಹುಡುಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಳು ಹಾಗೂ  ದಾರಿಹೋಕನ ಫೋನ್ ಅನ್ನು ಪಡೆದು ಅವಳ ಸ್ನೇಹಿತನಿಗೆ ಕರೆ ಮಾಡಿದಳು. ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಹೋಗುವಂತೆ ಸಲಹೆ ನೀಡಿದ್ದರು.

ರೈಲ್ವೆ ಪೊಲೀಸ್ ಆಯುಕ್ತರ ಪ್ರಕಾರ, ಎರಡು ಪೊಲೀಸ್ ಠಾಣೆಗಳು ತಮ್ಮ ವ್ಯಾಪ್ತಿಯಲ್ಲಿ ಅಪರಾಧ ನಡೆಯಲಿಲ್ಲ ಎಂಬ ಕಾರಣಕ್ಕೆ ಹುಡುಗಿಯ ದೂರನ್ನು ದಾಖಲಿಸಲು ನಿರಾಕರಿಸಿದವು. ಆಕೆಯ ದೂರನ್ನು ಏಕೆ ದಾಖಲಿಸಿಲ್ಲ ಎಂಬುದನ್ನು ತನಿಖೆ ಮಾಡಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X