Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ,...

ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ, ಅಡಿಕೆ, ಕಾಳುಮೆಣಸು, ಭತ್ತದ ಕೃಷಿಕರಲ್ಲಿ ಬೆಳೆ ನಷ್ಟದ ಭೀತಿ

ವಾರ್ತಾಭಾರತಿವಾರ್ತಾಭಾರತಿ12 Sept 2021 11:11 PM IST
share
ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ, ಅಡಿಕೆ, ಕಾಳುಮೆಣಸು, ಭತ್ತದ ಕೃಷಿಕರಲ್ಲಿ ಬೆಳೆ ನಷ್ಟದ ಭೀತಿ

ಚಿಕ್ಕಮಗಳೂರು, ಸೆ.12: ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಆಗಾಗ್ಗೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲೆನಾಡು ಭಾಗದ ನದಿಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಸದ್ಯ ಸುರಿಯುತ್ತಿರುವ ಮಳೆ ರೈತರ ಮುಖದಲ್ಲಿ ಆತಂಕದ ಛಾಯೆಗೆ ಕಾರಣವಾಗಿದ್ದು, ಕಾಫಿ, ಅಡಿಕೆ, ಕಾಳು ಮೆಣಸು ಬೆಳೆಗಾರರು ಬೆಳೆ ನಷ್ಟದ ಭೀತಿಗೊಳಗಾಗಿದ್ದಾರೆ.

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಭಾರೀ ವರ್ಷಧಾರೆಯಾಗಿದೆ. ಕಳೆದ ಎರಡು ವರ್ಷಗಳ ಕಾಲ ಅತಿವೃಷ್ಟಿಯಾದ ಪರಿಣಾಮ ರೈತರು, ಸಾರ್ವಜನಿಕರು ಕೃಷಿ ಜಮೀನು, ಮನೆ ಹಾಗೂ ಬೆಳೆ ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದಾರೆ.

ಈ ಬಾರಿ ಬೇಸಿಗೆಯಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಕಾಫಿ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಸದ್ಯ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸೈಕ್ಲೋನ್ ಪರಿಣಾಮ ಉತ್ತಮ ಮಳೆಯಾಗುತ್ತಿದ್ದು, ಕಳೆದ ಬುಧವಾರದಿಂದ ಮಲೆನಾಡು ಭಾಗದಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರವಿವಾರ ಬೆಳಗ್ಗೆಯಿಂದ ಸಂಜೆವರೆಗೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜಿಲ್ಲೆಯ ಬಯಲು ಭಾಗದ ಚಿಕ್ಕಮಗಳೂರು ತಾಲೂಕು ಸೇರಿದಂತೆ ಕಡೂರು, ತರೀಕೆರೆ ತಾಲೂಕು ವ್ಯಾಪ್ತಿಯಲ್ಲಿ ಮೋಡಕವಿದ ವಾತಾವರಣದೊಂದಿಗೆ ಆಗಾಗ್ಗೆ ಸಾಧಾರಣ ಮಳೆಯಾಗುತ್ತಿದೆ.

ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚ ಮಳೆಯಾಗುತ್ತಿದ್ದು, ಉತ್ತಮ ಮಳೆ ಪರಿಣಾಮ ಇಲ್ಲಿನ ಭದ್ರಾ, ತುಂಗಾ, ಹೇಮಾವತಿ ಸೇರಿದಂತೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆಯಾದರೂ ಅಪಾಯದ ಮಟ್ಟ ತಲುಪದಿರುವುದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಧಾರಾಕಾರ ಮಳೆ ಮುಂದುವರಿದಲ್ಲಿ ನದಿ ಪಾತ್ರದಲ್ಲಿ ನೆರೆ, ಪ್ರವಾಹ ಸಂಭವಿಸಲಿದೆ ಎಂಬುದು ಜನರ ಭೀತಿಯಾಗಿದೆ.

ಇನ್ನು ಸದ್ಯ ಜಿಲ್ಲೆ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆ ರೈತರು, ಬೆಳೆಗಾರರಲ್ಲಿ ಮಂದಾಹಾಸ ಮೂಡಿಸುವ ಬದಲಿಗೆ ಆತಂಕದ ಛಾಯೆಗೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಳೆದ ಜೂನ್, ಜುಲೈ ತಿಂಗಳಲ್ಲಿ ಧಾರಾಕಾರವಾಗಿ ಸುರಿದ ಮಳೆ ಮಲೆನಾಡಿನ ಕೃಷಿಕರಲ್ಲಿ ಮತ್ತೆ ಅತಿವೃಷ್ಟಿಯಾಗುವ ಆತಂಕ ಮೂಡಿಸಿತ್ತು. ಆದರೆ ಆಗಸ್ಟ್ ತಿಂಗಳಲ್ಲಿ ಮಳೆಯ ಆರ್ಭಟ ಕಡಿಮೆಯಾದ ಪರಿಣಾಮ ಹೊಲ ಗದ್ದೆ ಕೃಷಿಕರು ಹಾಗೂ ಕಾಫಿ, ಅಡಿಕೆ ಬೆಳೆಗಾರರು ನಿಟ್ಟುಸಿರು ಬಿಟ್ಟಿದ್ದರು. ಮಳೆ ಕ್ಷೀಣಿಸಿದಂತೆ ಜಿಲ್ಲಾದ್ಯಂತ ಕೃಷಿ ಚಟುವಚಟಿಕೆಗಳು ಗರಿಗೆದರಿಕೊಂಡಿದ್ದವು, ಭತ್ತ ಗದ್ದೆಗಳು ಸೇರಿದಂತೆ ಕಾಫಿ, ಅಡಿಕೆ ತೋಟಗಳಲ್ಲಿ ಕೃಷಿ ಚಟುವಟಿಕೆ ಬಿರುಸಿನಿಂದ ನಡೆದಿತ್ತು. 

ಸದ್ಯ ಭತ್ತದ ಗದ್ದೆಗಳ ನಾಟಿ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಕಾಫಿ, ಅಡಿಕೆ ತೋಟಗಳಲ್ಲಿ ಕಳೆ, ಚಿಗುರು ತೆಗೆಯುವ ಕೆಲಸ ಪೂರ್ಣಗೊಂಡಿದ್ದು, ಗೊಬ್ಬರ, ಔಷಧ ಸಿಂಪಡಣೆಯ ಕೆಲಸ ನಡೆಯುತ್ತಿದೆ. ಆದರೆ ಸದ್ಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಈ ಕೃಷಿ ಚಟುವಟಿಕೆಗಳ ಪೂರ್ಣಕ್ಕೆ ಅಡ್ಡಗಾಲು ಹಾಕಿದಂತಾಗಿದೆ. ಮಲೆನಾಡಿನಾದ್ಯಂತ ಸದ್ಯ ಭತ್ತದ ಗದ್ದೆಗಳ ನಾಟಿ ಕೆಲಸ ಪೂರ್ಣಗೊಂಡಿದ್ದು, ಫೈರು ತೆನೆ ಕಟ್ಟುತ್ತಿದೆ. ಆದರೆ ಧಾರಾಕಾರ ಮಳೆಯಿಂದಾಗಿ ಭತ್ತದ ಗದ್ದೆಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದು ಹಾಗೂ ಭತ್ತದ ತೆನೆ ಉದುರುತ್ತಿರುವುದರಿಂದ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಕೃಷಿಕರು ಆತಂಕಕ್ಕೊಳಗಾಗುವಂತೆ ಮಾಡಿದೆ.

ಇನ್ನು ಧಾರಾಕಾರ ಮಳೆ ಕಾಫಿ, ಕಾಳುಮೆಣಸು, ಅಡಿಕೆ ಬೆಳೆಗಾರರಲ್ಲೂ ಆತಂಕಕ್ಕೆ ಕಾರಣವಾಗಿದೆ. ಸತತ ಅತಿವೃಷ್ಟಿ, ಅಕಾಲಿಕ ಮಳೆ ಪರಿಣಾಮ ಕಳೆದ ಕೆಲ ವರ್ಷಗಳಿಂದ ಬೆಳೆ ನಷ್ಟ ಅನುಭವಿಸಿರುವ ಬೆಳೆಗಾರರು ಈ ಬಾರಿಯೂ ಬೆಳೆ ನಷ್ಟದ ಭೀತಿಯಲ್ಲಿದ್ದಾರೆ. ಈಗಾಗಲೇ ಅಡಿಕೆ, ಕಾಫಿ, ಕಾಳು ಮೆಣಸು ತೋಟಗಳಲ್ಲಿ ಉತ್ತಮ ಫಸಲು ಬಂದಿದ್ದು, ಸತತ ಮಳೆಯಿಂದಾಗಿ ಬೆಳೆಗಳಿಗೆ ಕೊಳೆ ರೋಗ ನಿಧಾನವಾಗಿ ಆವರಿಸುತ್ತಿದ್ದು, ಬೆಳೆ ಉಳಿಸಿಕೊಳ್ಳಲು ಪಡಿಪಾಟಲು ಅನುಭವಿಸುತ್ತಿದ್ದಾರೆ. ಕೊಳೆ ರೋಗಕ್ಕೆ ಔಷಧ ಸಿಂಪಡಣೆಗೆ ಮಳೆ ಅಡ್ಡಿಯಾಗಿರುವುದು ಒಂದೆಡೆಯಾದರೇ, ಮತ್ತೊಂದೆಡೆ ಮಳೆಯಿಂದಾಗಿ ಭೂಮಿಯಲ್ಲಿ ತೇವಾಂಶದ ಹೆಚ್ಚಳದಿಂದಾಗಿ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಳು ಉದುರಲಾರಂಭಿಸಿರುವುದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ಕಳೆದ ಕೆಲ ವರ್ಷಗಳಿಂದ ಅತಿವೃಷ್ಟಿ, ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರು ಈ ಬಾರಿಯಾದರೂ ಬೆಳೆದ ಬೆಳೆ ಕೈ ಹಿಡಿಯಲಿದೆ ಎಂಬ ಆಶಾ ಭಾವನೆ ಮಧ್ಯೆ ಹವಾಮಾನ ವೈಫರೀತ್ಯದಿಂದಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೇಸತ್ತು ಹೋಗುವಂತಾಗಿದೆ. 

ಸದ್ಯ ಸುರಿಯುತ್ತಿರುವ ಮಳೆ ಕಾಫಿ, ಅಡಿಕೆ, ಕಾಳು ಮೆಣಸಿಗೆ ಭಾರೀ ನಷ್ಟವನ್ನುಂಟು ಮಾಡಲಿದೆ. ಮಲೆನಾಡಿನಲ್ಲಿ ಕಳೆದ ಮೂರು ವರ್ಷಗಳಿಂದ ಭಾರೀ ಮಳೆಯಾಗಿರುವುದರಿಂದ ಕೃಷಿ ಭೂಮಿಯಲ್ಲಿ ನೀರಿನ ತೇವಾಂಶ ಹೆಚ್ಚಳವಾಗಿದೆ. ಭಾರೀ ಮಳೆ ಹಾಗೂ ಭೂಮಿಯ ತೇವಾಂಶ ಹೆಚ್ಚಳದಿಂದ ಭತ್ತದ ಫೈರು ಹಸನಾಗಿ ಬೆಳೆಯಲು ಸಾಧ್ಯವಾಗಲ್ಲ. ಕಾಳು ಮೆಣಸು ಬಳ್ಳಿ, ಕಾಫಿ ಗಿಡ, ಅಡಿಕೆ ಮರಗಳಲ್ಲಿ ಬೆಳೆ ಉದುರಲು ಹಾಗೂ ಕೊಳೆ ರೋಗ ಹರಡಲು ಕಾರಣವಾಗುತ್ತದೆ. ಈ ಬಾರಿ ಉತ್ತಮ ಮಳೆಯಾಗಿದೆ, ಇನ್ನೂ ಮಳೆಯಾದಲ್ಲಿ ಬೆಳೆಗಾರರು ಹಿಂದಿನ ವರ್ಷಗಳಂತೆ ಈ ಬಾರಿಯೂ ಬೆಳೆ ನಷ್ಟ ಅನುಭವಿಸಬೇಕಾಗುತ್ತದೆ.

- ಅಶೋಕ್ ಸೂರಪ್ಪನಹಳ್ಳಿ, ಕಾಫಿ, ಅಡಿಕೆ ಬೆಳೆಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X