ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ; ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

ಸಾಂದರ್ಭಿಕ ಚಿತ್ರ (source: PTI)
ಯಾದಗಿರಿ, ಸೆ.13: 'ಶಹಾಪುರ ನಗರ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಅಮಾನೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ 8-9 ತಿಂಗಳ ಹಿಂದೆ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ಈ ಕೃತ್ಯದ ವಿಡಿಯೊ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಶಹಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ತನಿಖೆಗೆ ಮೂರು ತಂಡಗಳನ್ನು ರಚಿಸಿರುವುದಾಗಿ ತಿಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ, ಈಗಾಗಲೇ ಶಂಕಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
ವೈರಲ್ ವಿಡಿಯೊದಲ್ಲಿ ಯುವಕರು ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಥಳಿಸುತ್ತಿದ್ದಾರೆ. 'ಕಾಲಿಗೆ ಬೀಳುತ್ತೇನೆ ಅಣ್ಣ ಹೊಡೆಯಬೇಡಿ' ಎಂದು ಮಹಿಳೆ ಅಂಗಲಾಚುತ್ತಿದ್ದಾರೆ. ಇದು ಕಳೆದ 8-9 ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದೆ.
ಈ ನಡುವೆ ಸಂತ್ರಸ್ತ ಮಹಿಳೆ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.





