Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ನಿಯಂತ್ರಣಕ್ಕೆ ಉಡುಪಿ...

ಕೋವಿಡ್ ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯಾದ್ಯಂತ ಜ್ವರದ ಸರ್ವೆ: ಜಿಲ್ಲಾಧಿಕಾರಿ ಕೂರ್ಮಾ ರಾವ್

ವಾರ್ತಾಭಾರತಿವಾರ್ತಾಭಾರತಿ13 Sept 2021 8:03 PM IST
share
ಕೋವಿಡ್ ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯಾದ್ಯಂತ ಜ್ವರದ ಸರ್ವೆ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ, ಸೆ.13: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ನಿಯಂತ್ರಿಸಲು ಶೀಘ್ರದಲ್ಲಿ ಕೋವಿಡ್ ಪೀಡಿತರನ್ನು ಪತ್ತೆ ಹಚ್ಚಿ, ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು ಅಗತ್ಯವಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಜ್ವರದ ಸಮೀಕ್ಷೆ (ಫೀವರ್ ಸರ್ವೆ) ಕಾರ್ಯಕ್ರಮ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸೆ.20ರಿಂದ 22ರವರೆಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕ ಮನೆಮನೆಗೆ ಭೇಟಿ ನೀಡಿ, ಜ್ವರ ಇರುವ ಮಕ್ಕಳು, ವೃದ್ದರು ಮತ್ತು ಎಲ್ಲಾ ಸಾರ್ವಜನಿಕರ ಕುರಿತು ಮಾಹಿತಿ ಸಂಗ್ರಹಿಸಿ. ಜ್ವರ ಇದ್ದವರನ್ನು ಕೋವಿಡ್‌ಪರೀಕ್ಷೆಗೆ ಒಳಪಡಿಸಿ. ಸೋಂಕು ಕಂಡು ಬಂದವರನ್ನು ಆರೋಗ್ಯವಂತ ರಿಂದ ಪ್ರತ್ಯೇಕಿಸುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಸಾದ್ಯವಿದೆ. ಸಾರ್ವಜನಿಕರು ಸರ್ವೆ ಸಮಯದಲ್ಲಿ ತಮ್ಮ ಆರೋಗ್ಯ ಕುರಿತು ಅಗತ್ಯ ಮಾಹಿತಿ ನೀಡುವಂತೆ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡುವಂತೆ ತಿಳಿಸಿದ ಅವರು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು, ರೋಗ ಲಕ್ಷಣ ಗಳಿರುವವರು ಮತ್ತು ಪ್ರಯಾಣದ ಇತಿಹಾಸ ಇರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿ. ಹೋಂ ಐಸೋಲೇಶನ್‌ನಲ್ಲಿ ಇರುವವರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರು ಕಂಟೈನ್‌ಮೆಂಟ್ ಝೋನ್ ಹೊರಗೆ ತಿರುಗಾಡ ದಂತೆ ಎಚ್ಚರಿಕೆ ವಹಿಸಿ ಎಂದರು.

ಪಾಸಿಟಿವ್ ಬಂದ ವ್ಯಕ್ತಿಯ ಸಂಪೂರ್ಣ ವಿವರದ ದಾಖಲೆಗಳನ್ನು ಆತ ವಾಸಿಸುವ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಗ್ರಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಆತನನ್ನು ಪರೀಕ್ಷಿಸಿದ ದಿನಾಂಕ, ರೋಗ ಲಕ್ಷಣ ಗಳು, ಆರೋಗ್ಯ ಸ್ಥಿತಿಗತಿ, ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಗೆ ದಾಖಲಿಸಿದ ಕುರಿತ ವಿವರಗಳು, ಗುಣಮುಖನಾದ ದಿನಾಂಕ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಸಂಗ್ರಹಿಸಿಡುವಂತೆ ಸೂಚಿಸಿದರು.

ಲಸಿಕೆ ನೀಡುವ ಸಮಯದಲ್ಲಿ ಪ್ರತಿಯೊಂದು ಗ್ರಾಮ ಮತ್ತು ವಾರ್ಡ್‌ಗಳಲ್ಲಿ ಲಸಿಕೆ ಪಡೆಯಲು ಬಾಕಿ ಇರುವವರ ಮಾಹಿತಿಗಳನ್ನು ಸಂಗ್ರಹಿಸಿ. ಬಾಕಿ ಇರುವ ಎಲ್ಲರಿಗೂ ಏಕಕಾಲದಲ್ಲಿ ಲಸಿಕೆ ನೀಡಲು ಯೋಜನೆ ರೂಪಿಸಿ ಅದರಂತೆ ಕಾರ್ಯ ನಿರ್ವಹಿಸಿ.ಲಸಿಕಾ ಅಭಿಯಾನ ಏರ್ಪಡಿಸುವಾಗ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸ್ವ-ಸಹಾಯ ಸಂಘಗಳ ನೆರವು ಪಡೆಯುವುದರಿಂದ ಅತ್ಯಂತ ಯಶಸ್ವಿಯಾಗಿ ಲಸಿಕೆಯ ಸಂಪೂರ್ಣ ಗುರಿ ಸಾಧನೆ ಸಾಧ್ಯ ಎಂದರು.

ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿದಿನ ವರದಿಯಾಗುವ ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಕುರಿತು ಮಾಹಿತಿ ಸಂಗ್ರಹಿಸಿ ಅವರನ್ನು ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಅಲ್ಲದೇ ಔಷಧ ಅಂಗಡಿಗಳಿಂದ ಕೋವಿಡ್ ರೋಗ ಲಕ್ಷಣಗಳಿಗೆ ಔಷಧ ಖರೀದಿ ಸುವವರ ಕುರಿತ ಸಹ ಮಾಹಿತಿ ಸಂಗ್ರಹಿಸಿ ಅವರನ್ನೂ ಪರೀಕ್ಷೆಗೆ ಒಳಪಡಿಸು ವಂತೆ ಸೂಚನೆ ನೀಡಿದರು.

ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ ಮಾತನಾಡಿ, ಕೋವಿಡ್ ಪೀಡಿತರು ಮನೆಯಿಂದ ಹೊರಗೆ ತಿರುಗಾ ಡುವುದು, ಕೋವಿಡ್ ಕೇರ್ ಸೆಂಟರ್‌ಗಳ ಕುರಿತು ಮಾಹಿತಿ, ಕೋವಿಡ್ ಕುರಿತು ಯಾವುದೇ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ನೀಡಲು ಹಾಗೂ ಅಗತ್ಯ ಮಾಹಿತಿಗಾಗಿ ಹೆಲ್ಪ್‌ಲೈನ್‌ನ್ನು ಸಂಪರ್ಕಿಸಲು ಸಾಧ್ಯವಾಗು ವಂತೆ ಹೆಲ್ಪ್‌ಲೈನ್ ಸಂಖ್ಯೆ ನೀಡುವಂತೆ ಹಾಗೂ ಲಸಿಕಾ ಅಭಿಯಾನ ಮತ್ತು ಹೋಂ ಐಸೋಲೇಶನ್ ದಾಖಲು, ಕಂಟೈನ್‌ಮೆಂಟ್ ಝೋನ್ ರಚಿಸುವ ಸಂದರ್ಭದಲ್ಲಿ ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್‌ಗಳ ನೆರವು ಪಡೆಯುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X