Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯ ಅಲಿಗಢ ಭೇಟಿ ಸಂದರ್ಭದಲ್ಲಿ...

ಪ್ರಧಾನಿಯ ಅಲಿಗಢ ಭೇಟಿ ಸಂದರ್ಭದಲ್ಲಿ ಮರೆತಿರುವ ಭರವಸೆ ನೆನಪಿಸಲಿರುವ ರೈತರು

ವಾರ್ತಾಭಾರತಿವಾರ್ತಾಭಾರತಿ13 Sept 2021 10:43 PM IST
share
ಪ್ರಧಾನಿಯ ಅಲಿಗಢ ಭೇಟಿ ಸಂದರ್ಭದಲ್ಲಿ ಮರೆತಿರುವ ಭರವಸೆ ನೆನಪಿಸಲಿರುವ ರೈತರು

ಅಲಿಗಢ (ಉ.ಪ್ರ),ಸೆ.13: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜಾ ಮಹೇಂದ್ರ ಪ್ರತಾಪ ಸಿಂಗ್ ವಿವಿಯ ಶಿಲಾನ್ಯಾಸವನ್ನು ನೆರವೇರಿಸಲು ಅಲಿಗಢಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಆಗ್ರಾ ಜಿಲ್ಲೆಯಲ್ಲಿ ಬಟಾಟೆ ಸಂಸ್ಕರಣ ಘಟಕವನ್ನು ಸ್ಥಾಪಿಸುವುದಾಗಿ ನೀಡಿದ್ದ ಭರವಸೆ ಇನ್ನೂ ಬಾಕಿಯಿದ್ದು, ಅದನ್ನು ಪ್ರಧಾನಿಯವರಿಗೆ ನೆನಪಿಸಲು ಜಿಲ್ಲೆಯಾದ್ಯಂತದಿಂದ 5,000ಕ್ಕೂ ಅಧಿಕ ರೈತರು ಅವರ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ಭಾರತೀಯ ಕಿಸಾನ ಯೂನಿಯನ್ (ಬಿಕೆಯು) ಸೋಮವಾರ ತಿಳಿಸಿದೆ.

ಮಂಗಳವಾರ ಬೆಳಗಿನ ಜಾವ ಖಾಸಗಿ ವಾಹನಗಳು ಮತ್ತು ಸರಕಾರಿ ಬಸ್ಗಳಲ್ಲಿ ತಾವು ಅಲಿಗಢಕ್ಕೆ ಪ್ರಯಾಣಿಸಲಿದ್ದೇವೆ. ಪ್ರಧಾನಿಯವರ ಕಾರ್ಯಕ್ರಮದಲ್ಲಿ ಯಾವುದೇ ಪ್ರತಿಭಟನೆಯನ್ನು ನಡೆಸುವುದಿಲ್ಲ,ಆದರೆ ಪೋಸ್ಟರ್ ಗಳ ಮೂಲಕ ತಮ್ಮ ಬೇಡಿಕೆಗಳನ್ನು ಪ್ರಮುಖವಾಗಿ ಬಿಂಬಿಸುತ್ತೇವೆ ಎಂದು ರೈತರು ಹೇಳಿದ್ದಾರೆ.

ಮೋದಿ ಸರಕಾರವು ಏಳು ವರ್ಷಗಳ ಅಧಿಕಾರವನ್ನು ಪೂರೈಸಿದೆ,ಆದರೆ 2014ರ ಲೋಕಸಭಾ ಚುನಾವಣೆಗಳ ಸಂದರ್ಭ ಭರವಸೆ ನೀಡಿದ್ದ ಬಟಾಟೆ ಸಂಸ್ಕರಣೆ ಘಟಕ ಈಗಲೂ ಕನಸಾಗಿಯೇ ಉಳಿದಿದೆ ಎಂದು ಬಿಕೆಯು ಜಿಲ್ಲಾಧ್ಯಕ್ಷ ರಾಜವೀರ ಲವಾನಿಯಾ ಹೇಳಿದರು.

‘ನಾವು ಪ್ರಧಾನಿಯವರನ್ನು ನಂಬಿದ್ದೆವು ಮತ್ತು ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ರೈತರು ಬಿಜೆಪಿಗೆ ಮತಗಳನ್ನು ನೀಡಿದ್ದರು. ಪ್ರತಿಫಲವಾಗಿ ನಮಗೇನೂ ಸಿಕ್ಕಿಲ್ಲ ’ಎಂದು ಬಿಕೆಯು ಮಹಿಳಾ ಘಟಕದ ನಾಯಕಿ ಸಾವಿತ್ರಿ ಚಹಾರ್ ತಿಳಿಸಿದರು.


ಆಗ್ರಾದಲ್ಲಿ ಬಟಾಟೆ ಸಂಸ್ಕರಣ ಘಟಕ ಸ್ಥಾಪನೆಯು ರೈತರ ಆದಾಯಕ್ಕೆ ಪೂರಕವಾಗುತ್ತದೆ ಮತ್ತು ಸ್ಥಳೀಯ ಮಟ್ಟದಲ್ಲಿ ವಿವಿಧ ಬಟಾಟೆ ಉತ್ಪನ್ನಗಳ ತಯಾರಿಕೆ ಸಾಧ್ಯವಾಗುತ್ತದೆ. ರೈತರು ತಾವು ಬೆಳೆದ ಬಟಾಟೆಗಳನ್ನು ದೀರ್ಘಾವಧಿಗೆ ಶೈತ್ಯಾಗಾರಗಳಲ್ಲಿ ಸಂರಕ್ಷಿಸಬೇಕಿಲ್ಲ. ಘಟಕವು ಉದ್ಯೋಗಾವಕಾಶಗಳನ್ನೂ ಹೆಚ್ಚಿಸುತ್ತದೆ ಎನ್ನುವುದು ರೈತ ಸಮುದಾಯದ ಅಭಿಪ್ರಾಯವಾಗಿದೆ.

ಆಗ್ರಾ ಉತ್ತರ ಭಾರತದಲ್ಲಿಯೇ ಅತ್ಯಂತ ಹೆಚ್ಚು ಬಟಾಟೆ ಬೆಳೆಯುವ ಜಿಲ್ಲೆಯಾಗಿದೆ.


 ಸಂಸ್ಕರಣ ಘಟಕದ ಜೊತೆಗೆ ಶೈತ್ಯಾಗಾರ ಶುಲ್ಕಗಳ ಮೇಲೆ ಸಬ್ಸಿಡಿಗಾಗಿಯೂ ರೈತರು ಅಲಿಗಢ ರ್ಯಾಲಿಯಲ್ಲಿ ಬೇಡಿಕೆಯನ್ನು ಮಂಡಿಸಲಿದ್ದಾರೆ. ಪ್ರಸ್ತುತ ಆಗ್ರಾ ಜಿಲ್ಲೆಯಲ್ಲಿ ಒಟ್ಟು 25 ಲ.ಮೆ.ಟ.ಗೂ ಹೆಚ್ಚಿನ ಸಾಮರ್ಥ್ಯದ 270 ಶೈತ್ಯಾಗಾರಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X