Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಫ್ಘಾನ್ ಬಿಕ್ಕಟ್ಟು ಪ್ರಾದೇಶಿಕ...

ಅಫ್ಘಾನ್ ಬಿಕ್ಕಟ್ಟು ಪ್ರಾದೇಶಿಕ ಸ್ಥಿರತೆಯ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರಬಲ್ಲದು: ವಿದೇಶಾಂಗ ಸಚಿವ ಎಸ್.ಜೈಶಂಕರ್

ವಾರ್ತಾಭಾರತಿವಾರ್ತಾಭಾರತಿ13 Sept 2021 11:08 PM IST
share
ಅಫ್ಘಾನ್ ಬಿಕ್ಕಟ್ಟು ಪ್ರಾದೇಶಿಕ ಸ್ಥಿರತೆಯ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರಬಲ್ಲದು: ವಿದೇಶಾಂಗ ಸಚಿವ ಎಸ್.ಜೈಶಂಕರ್

ಹೊಸದಿಲ್ಲಿ,ಸೆ.13: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಭಾರತವು ಅಲ್ಲಿಯ ಬೆಳವಣಿಗೆಗಳನ್ನು ‘ಅರ್ಥೈಸಿಕೊಳ್ಳಬಲ್ಲ ಕಳವಳ’ದೊಂದಿಗೆ ಗಮನಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ ಅವರು ಸೋಮವಾರ ಹೇಳಿದರು. ಯುದ್ಧಸಂತ್ರಸ್ತ ಅಫ್ಘಾನಿಸ್ತಾನವೀಗ ನಿರ್ಣಾಯಕವಾದ ಮತ್ತು ಸವಾಲಿನ ಹಂತದಲ್ಲಿ ಸಾಗುತ್ತಿದೆ ಎಂದ ಅವರು,ಅಲ್ಲಿ ಬಡತನ ಮಟ್ಟವು ಸದ್ಯವೇ ಹೆಚ್ಚುವ ಭೀತಿಯಿದೆ ಮತ್ತು ಇದು ಪ್ರಾದೇಶಿಕ ಸ್ಥಿರತೆಯ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರಬಲ್ಲದು ಎಂದರು.

ಅಫ್ಘಾನಿಸ್ತಾನದಲ್ಲಿಯ ಮಾನವೀಯ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆಯ ಉನ್ನತಮಟ್ಟದ ಸಭೆಯಲ್ಲಿ ಮಾತನಾಡುತ್ತಿದ್ದ ಅವರು,ಆ ದೇಶದ ರಾಜಕೀಯ,ಆರ್ಥಿಕ,ಸಾಮಾಜಿಕ ಮತ್ತು ಭದ್ರತಾ ಸ್ಥಿತಿಗಳಲ್ಲಿ ಸಾಗರದೋಪಾದಿ ಬದಲಾವಣೆಯಾಗಿದೆ ಮತ್ತು ಪರಿಣಾಮವಾಗಿ ಅದರ ಮಾನವಿಯ ಅಗತ್ಯಗಳೂ ಬದಲಾಗಿವೆ ಎಂದು ಹೇಳಿದರು.
 
ಅಫ್ಘಾನಿಸ್ತಾನದಲ್ಲಿ ಬಡತನ ಮಟ್ಟ ಶೇ.72ರಿಂದ ಶೇ.97ಕ್ಕೆ ಹೆಚ್ಚುವ ಭೀತಿ ಸನ್ನಿಹಿತವಾಗಿದೆ ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಇತ್ತೀಚಿಗೆ ಆತಂಕ ವ್ಯಕ್ತಪಡಿಸಿದೆ ಎಂದರು.

ಅಫ್ಘಾನಿಸ್ತಾನದೊಂದಿಗೆ ಐತಿಹಾಸಿಕ ಸಂಬಂಧಗಳನ್ನು ಹೊಂದಿರುವ ಭಾರತವು ಹಿಂದೆ ಮಾಡಿರುವಂತೆ ಈಗಲೂ ಅಫ್ಘಾನ್ ಜನರ ಬೆಂಬಲಕ್ಕೆ ನಿಲ್ಲಲು ಸಿದ್ಧವಾಗಿದೆ ಎಂದು ಹೇಳಿದ ಜೈಶಂಕರ್,ಆ ದೇಶದಲ್ಲಿ ಸಾಧ್ಯವಿರುವ ಅತ್ಯುತ್ತಮ ಪೂರಕ ವಾತಾವರಣವನ್ನು ಸೃಷ್ಟಿಸಲು ನೆರವಾಗುವಂತೆ ಜಾಗತಿಕ ಸಮುದಾಯಕ್ಕೆ ಕರೆ ನೀಡಿದರು.
ಈ ವಾರಾಂತ್ಯದಲ್ಲಿ ತಝಿಕಿಸ್ತಾನದಲ್ಲಿ ಅಫ್ಘಾನಿಸ್ತಾನ ಕುರಿತು ಮಹತ್ವದ ಸಭೆಯಲ್ಲಿ ಭಾಗವಹಿಸಲಿರುವ ಜೈಶಂಕರ,ಯುದ್ಧಸಂತ್ರಸ್ತ ದೇಶದಲ್ಲಿಯ ಸ್ಥಿತಿಯ ಕುರಿತು ಇರಾನ ಸೇರಿದಂತೆ ಹಲವಾರು ದೇಶಗಳ ವಿದೇಶಾಂಗ ಸಚಿವರ ಜೊತೆ ಮಾತುಕತೆಗಳನ್ನು ನಡೆಸಲಿದ್ದಾರೆ.

ವಿಶ್ವಸಂಸ್ಥೆಯಿಂದ 20 ಕೋ.ಡಾ.ನೆರವಿನ ಘೋಷಣೆ

 ಅಫ್ಘಾನಿಸ್ತಾನದಲ್ಲಿ ಮಾನವೀಯ ಕಾರ್ಯಾಚರಣೆಗೆ ನೆರವಾಗಲು 20 ಕೋ.ಡಾ.ಗಳನ್ನು ಮೀಸಲಿಡುವುದಾಗಿ ಸೋಮವಾರ ಘೋಷಿಸಿದ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಅವರು,ಆ ದೇಶದಲ್ಲಿಯ ‘ವಸ್ತುತ’ಅಧಿಕಾರಿಗಳು ಜನತೆಗೆ ನೆರವು ತಲುಪುವಂತಾಗುವಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಜಿನಿವಾದಲ್ಲಿ ಅಫ್ಘಾನಿಸ್ತಾನದಲ್ಲಿಯ ಮಾನವೀಯ ಸ್ಥಿತಿ ಕುರಿತು ಸಭೆಯಲ್ಲಿ ಮಾತನಾಡಿದ ಅವರು,ಅಫ್ಘಾನಿಸ್ತಾನದ ಜನತೆಗೆ ಜೀವಾಧಾರದ ಅಗತ್ಯವಿದೆ. ದಶಕಗಳ ಯುದ್ಧ,ಸಂಕಷ್ಟ ಮತ್ತು ಅಭದ್ರತೆಯ ಬಳಿಕ ಅವರು ಬಹುಶಃ ಅತ್ಯಂತ ಅಪಾಯಕಾರಿ ಕ್ಷಣಗಳನ್ನು ಎದುರಿಸುತ್ತಿದ್ದಾರೆ. ಇದು ಜಾಗತಿಕ ಸಮುದಾಯವು ಅವರ ಬೆಂಬಲಕ್ಕೆ ನಿಲ್ಲಬೇಕಾದ ಸಮಯವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X