Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಮಾಧುಸ್ವಾಮಿ-ಡಾ.ಜಿ.ಪರಮೇಶ್ವರ್...

ಸಚಿವ ಮಾಧುಸ್ವಾಮಿ-ಡಾ.ಜಿ.ಪರಮೇಶ್ವರ್ ಜಟಾಪಟಿ: ಎತ್ತಿನಹೊಳೆ ಯೋಜನೆ ಭೂಸ್ವಾಧೀನಕ್ಕೆ ಹಣ ನೀಡಲು ಒತ್ತಾಯ

ವಿಧಾನಸಭೆ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ14 Sept 2021 6:03 PM IST
share
ಸಚಿವ ಮಾಧುಸ್ವಾಮಿ-ಡಾ.ಜಿ.ಪರಮೇಶ್ವರ್ ಜಟಾಪಟಿ: ಎತ್ತಿನಹೊಳೆ ಯೋಜನೆ ಭೂಸ್ವಾಧೀನಕ್ಕೆ ಹಣ ನೀಡಲು ಒತ್ತಾಯ

ಬೆಂಗಳೂರು, ಸೆ. 14: ಎತ್ತಿನಹೊಳೆ ಯೋಜನೆ ಭೂಸ್ವಾಧೀನಕ್ಕೆ ಪರಿಹಾರದ ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ಡಾ.ಜಿ. ಪರಮೇಶ್ವರ್ ಹಾಗೂ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ನಡೆಯಿತು.

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ವಿಚಾರವನ್ನು ಪ್ರಸ್ತಾಪಿಸಿದ ಜಿ.ಪರಮೇಶ್ವರ್, `ಉದ್ದೇಶಿತ ಯೋಜನೆಗೆ ಕೊರಟಗೆರೆ ತಾಲೂಕಿನ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ರೈತರಿಗೆ ಏಕರೂಪದ ಪರಿಹಾರ ನೀಡಬೇಕು. ಆ ಉದ್ದೇಶಕ್ಕೆ ಸರಕಾರ 319 ಕೋಟಿ ರೂ.ಹಣ ನೀಡದಿರುವ ಕಾರಣಕ್ಕೆ ಯೋಜನೆ ವಿಳಂಬವಾಗುತ್ತಿದೆ’ ಎಂದು ದೂರಿದರು.

`ಯೋಜನೆಯನ್ನೇ ತಿರಸ್ಕಾರ ಮಾಡ್ತೇವೆ ಎಂದರೆ ಹೇಗೆ? 12,900 ಕೋಟಿ ರೂ. ಮೊತ್ತದ ಈ ಯೋಜನೆ 23,251 ಕೋಟಿ ರೂ.ಮೊತ್ತದ ಪುನರ್ ಪರಿಷ್ಕøತ ಯೋಜನಾ ವರದಿ ಏಕೆ? ಇಚ್ಛಾಶಕ್ತಿಯಿದ್ದರೆ ಹಿಂದೆ ನಿಗದಿಪಡಿಸಿದ ಮೊತ್ತದಲ್ಲೇ ಯೋಜನೆ ಪೂರ್ಣಗೊಳಿಸಬಹುದು’ ಎಂದು ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.

`ಯೋಜನೆ ಅನುಷ್ಠಾನಕ್ಕೆ ನಾವು ಪ್ರಯತ್ನ ನಡೆಸಿದ್ದೇವೆ. ಹಣವಿಲ್ಲದಿದ್ದರೂ ರೈತರನ್ನು  ಒಪ್ಪಿಸಿದ್ದೇವೆ. ಯೋಜನೆ ಕಾಮಗಾರಿಗೆ ಅನುವು ಮಾಡಿದ್ದೇವೆ. ಆದರೆ, ಕೊರಟಗೆರೆ ಕ್ಷೇತ್ರದಲ್ಲಿ ಸಮಸ್ಯೆ ಆರಂಭವಾಗಿದೆ. ಹಾಗಾಗಿ ಯೋಜನೆಗೆ ತೊಡಕಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು. ಇದಕ್ಕೆ ಆಕ್ರೋಶಿತರಾದ ಸಚಿವ ಮಾಧುಸ್ವಾಮಿ `ನಿಮ್ಮ ಅವಧಿಯಲ್ಲಿ ಈ ಸಮಸ್ಯೆ ಆಗಿದೆ. ನೀವೇ ಇದಕ್ಕೆ ಜವಾಬ್ದಾರಿ' ಎಂದು ಪ್ರತಿಕ್ರಿಯಿಸಿದರು.

ಇದರಿಂದ ಪರಮೇಶ್ವರ್ ಹಾಗೂ ಮಾಧುಸ್ವಾಮಿ ನಡುವೆ ಏರಿದ ಧ್ವನಿಯಲ್ಲಿ ಜಟಾಪಟಿ ನಡೆಯಿತು. ಕೆಲ ಕಾಲ ಇಬ್ಬರು ಸದಸ್ಯರು ಪರಿಸ್ಪರ ಮಾತಿನ ಚಕಮಕಿಯನ್ನು ನಡೆಸಿದರು. ಹೀಗಾಗಿ ಸದನದಲ್ಲಿ ಗದ್ದಲ ಸೃಷ್ಟಿಯಾಯಿತು. ಸದನದಲ್ಲಿ ಕಾವೇರಿದ ವಾತಾವರಣ ಸೃಷ್ಟಿಯಾಯಿತು.

ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, `ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಇಷ್ಟರಲ್ಲಿಯೇ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು’ ಎಂದರು.

`ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ. ಇತ್ತೀಚೆಗೆ ತಾವು ಎತ್ತಿನಹೊಳೆ ಯೋಜನಾ ಪ್ರದೇಶಕ್ಕೆ ಭೇಟಿಕೊಟ್ಟು, ಭೂಸ್ವಾಧೀನವೂ ಸೇರಿದಂತೆ, ಯೋಜನೆಯ ಅಡ್ಡಿ ಆತಂಕಗಳನ್ನು ನಿವಾರಿಸಲು ಅಗತ್ಯ ಕ್ರಮಕೈಗೊಂಡು ಪರಿಹರಿಸಲು ಮಾಡಿದ ಪ್ರಯತ್ನ ಫಲವಾಗಿ ಎರಡು ಬಹುದೊಡ್ಡ ಅಡ್ಡಿ ಅಡೆತಡೆಗಳು ನಿವಾರಣೆಯಾಗಿದ್ದು, ಒಂದೆರಡು ತಿಂಗಳಲ್ಲಿ ಎತ್ತಿನಹೊಳೆಯಿಂದ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಗೋವಿಂದ ಕಾರಜೋಳ ತಿಳಿಸಿದರು.

ಎತ್ತಿನಹೊಳೆಯಂತಹ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಗೆ ಇರುವ ಅಡ್ಡಿ ಆತಂಕ ಪರಿಹರಿಸಿ ತಕ್ಷಣ ಕ್ರಮಕೈಗೊಳ್ಳಲು ಕಾರ್ಯಪ್ರವೃತ್ತವಾಗಿದ್ದು, ಆದಷ್ಟು ಬೇಗ ಫಲಿತಾಂಶ ನಿಮ್ಮ ಕಣ್ಣಿಗೆ ಕಾಣಿಸಲಿದೆ. ಭೂಸ್ವಾಧೀನ ಪ್ರಕ್ರಿಯೆಗೆ 195 ಕೋಟಿ ರೂ.ಹಣ ಒದಗಿಸಲಾಗಿದ್ದರೂ, ಕೆಲ ಅಧಿಕಾರಿಗಳು ರೈತರಿಗೆ ಹಣವಿಲ್ಲವೆಂದು ಹೇಳುತ್ತಿದ್ದರು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಪ್ರಕರಣಗಳಲ್ಲಿ ರೈತರಿಗೆ ಹಣಪಾವತಿ ಮಾಡುವುದು ವಿಳಂಬವಾದಲ್ಲಿ ಭೂಸ್ವಾಧೀನ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ವಿವರಿಸಿದರು.

ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ರೈತರ 5078 ಎಕರೆ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಏಕರೂಪದ ದರ ನಿಗದಿಪಡಿಸುವಲ್ಲಿ ಸಮಸ್ಯೆಗಳಿದ್ದು, ಈ ಸಮಸ್ಯೆ ಪರಿಹಾರಕ್ಕೆ 2018ರಲ್ಲಿ ಅಂದಿನ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ನೇತೃತ್ವದ ಸಂಪುಟ ಉಪಸಮಿತಿ ಸಭೆ ನಡೆದಿದ್ದರೂ ಯಾವುದೇ ಅಂತಿಮ ನಿರ್ಣಯ ಕೈಗೊಳ್ಳಲಾಗಲಿಲ್ಲ. ಈಗ ನಮ್ಮ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ಎತ್ತಿನಹೊಳೆ ಯೋಜನೆಯ ಅನುಷ್ಠಾ ನದಲ್ಲಿ ಸಣ್ಣ-ಪುಟ್ಟ ಅಡ್ಡಿಗಳನ್ನು ನಿವಾರಿಸಿಕೊಂಡು ಮುಂದಿನ ಹೆಜ್ಜೆ ಇರಿಸುವುದಾಗಿ, ಆದಷ್ಟು ಬೇಗ ಯೋಜನೆ ಸಾಕಾರಗೊಳಿಸಲು ಪ್ರಯತ್ನ ಮಾಡಲಾಗುವುದು. ಉದ್ದೇಶಿತ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾರೊಬ್ಬರಿಗೂ ಆತಂಕ ಬೇಡ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X