Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘30 ಲಕ್ಷ ಲಸಿಕೆ ನೀಡುವ ಗುರಿ’: ಸೆ.17...

‘30 ಲಕ್ಷ ಲಸಿಕೆ ನೀಡುವ ಗುರಿ’: ಸೆ.17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ; ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ14 Sept 2021 8:31 PM IST
share
‘30 ಲಕ್ಷ ಲಸಿಕೆ ನೀಡುವ ಗುರಿ’: ಸೆ.17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ; ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಸೆ.14: ರಾಜ್ಯದಲ್ಲಿ ಸೆ.17ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು, ಅಂದರೆ 1.10 ಕೋಟಿ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಬೇಕು ಎಂಬ ಚಿಂತನೆ ಇದೆ ಎಂದು ತಿಳಿಸಿದರು.

ವಾರದಲ್ಲಿ ಬುಧವಾರ 15 ಲಕ್ಷ ಲಸಿಕೆ ಹಾಕುವ ಗುರಿ ಇದೆ. ದಿನಕ್ಕೆ 5 ಲಕ್ಷ ಲಸಿಕೆಯ ಗುರಿ ಹೊಂದಲಾಗಿದೆ. ಬೃಹತ್ ಲಸಿಕೆ ಕಾರ್ಯಕ್ರಮದಂದು ಕೇಂದ್ರ ಸರಕಾರ ಒಂದೇ ದಿನ 2 ರಿಂದ 3 ಕೋಟಿ ಲಸಿಕೆ ನೀಡುವ ಉದ್ದೇಶವಿದ್ದು, ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇದೆ. ಲಸಿಕೆ ಪೂರೈಕೆಗೆ ಕೇಂದ್ರ ಸರಕಾರಕ್ಕೆ ವಿಶೇಷ ಬೇಡಿಕೆ ಸಲ್ಲಿಸಲಾಗಿದ್ದು, ಕೇಂದ್ರ ಸರಕಾರ ಒದಗಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಬಡತನ ರೇಖೆಗಿಂತ ಕೆಳಗಿರುವ ದುರ್ಬಲ ವರ್ಗದವರಿಗೆ ಹಾಗೂ ದುಡಿಯುವ ವರ್ಗಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ನಗರ ಪ್ರದೇಶಗಳಲ್ಲಿ, ಬೆಂಗಳೂರಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನಸಿರ್ಂಗ್ ಕಾಲೇಜುಗಳ ಸಹಯೋಗ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಜಿಲ್ಲೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ, ಸೂಕ್ತ ಸಂಖ್ಯೆಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲು ತಿಳಿಸಿದರು.

ಮುಂಚಿತವಾಗಿಯೇ ಲಸಿಕೆ ದಾಸ್ತಾನು ಪಡೆದು, ಲಸಿಕಾ ಕೇಂದ್ರಗಳಿಗೆ ತಲುಪಿಸಿ, ವಿಶೇಷ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಲಾಯಿತು. ಮುಖ್ಯಮಂತ್ರಿ ಈ ಬೃಹತ್ ಲಸಿಕೆ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ.

ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಲಸಿಕೆ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ರಾಜ್ಯದಲ್ಲಿ ಸರಾಸರಿ ಶೇ.71 ಜನರಿಗೆ ಮೊದಲ ಡೋಸ್ ಹಾಕಲಾಗಿದೆ. ರಾಜ್ಯ ಸರಾಸರಿಗಿಂತ ಹೆಚ್ಚಿನ ಸಾಧನೆ ಮಾಡಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. ಇತರ ಜಿಲ್ಲೆಗಳಲ್ಲಿಯೂ ರಾಜ್ಯದ ಸರಾಸರಿ ಪ್ರಮಾಣದ ಸಾಧನೆ ಮಾಡುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X