ಕೋವಿಡ್ ಲಸಿಕೆ: ಗುರುವಾರ ಉಡುಪಿ ಜಿಲ್ಲಾಧಿಕಾರಿಗಳ ಫೋನ್ ಇನ್ ಕಾರ್ಯಕ್ರಮ
ಉಡುಪಿ, ಸೆ.14: ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಸೆ.16ರ ಗುರುವಾರ ಬೆಳಗ್ಗೆ 10 ರಿಂದ 11ರವರೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿಪಂ ಮುಖ್ಯ ಕಾರ್ಯರ್ನಿಹಣಾಧಿಕಾರಿ ಡಾ.ನವೀನ್ ಭಟ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಅಶ್ವಿನ್ ಕುಮಾರ್ ಇವರು ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಕೋವಿಡ್ ಲಸಿಕೆಗೆ ಸಂಬಂದಿಸಿದಂತೆ ಯಾವುದೇ ಪ್ರಶ್ನೆಗಳು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ: 96639 57222ನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





