ಟೆಲಿಕಾಂ ಕಂಪೆನಿಗಳಿಗೆ ಶೇ.100ರಷ್ಟು ವಿದೇಶಿ ಹೂಡಿಕೆ ಅವಕಾಶಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

mage Source : TWITTER @ASHWINIVAISHNAW
ಹೊಸದಿಲ್ಲಿ: ದೇಶದ ದೂರ ಸಂಪರ್ಕ ವಲಯದ ಸುಧಾರಣೆಗಾಗಿ ಕೇಂದ್ರ ಸರಕಾರವು ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಟೆಲಿಕಾಂ ಕಂಪೆನಿಗಳಿಗೆ ಬಾಕಿ ಮೊತ್ತ ಪಾವತಿಗೆ 4 ವರ್ಷಗಳ ಗಡುವು, ಶೇಕಡ 100ರಷ್ಟು ವಿದೇಶಿ ಹೂಡಿಕೆಗೆ ಅವಕಾಶ ಸೇರಿದಂತೆ ಹಲವು ಕ್ರಮಗಳನ್ನು ಒಳಗೊಂಡ ಪರಿಹಾರ ಪ್ಯಾಕೇಜ್ ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಸಚಿವ ಸಂಪುಟವು ಕೈಗೊಂಡಿರುವ ನಿರ್ಧಾರಗಳ ಕುರಿತಾಗಿ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ದೂರ ಸಂಪರ್ಕ ಕ್ಷೇತ್ರದ ಉತ್ತೇಜನಕ್ಕಾಗಿ 9 ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ದೂರ ಸಂಪರ್ಕ ವಲಯದಲ್ಲಿ ಸ್ವಯಂ ಚಾಲಿತ ಮಾರ್ಗದಲ್ಲಿ ಶೇಕಡ 100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎಫ್ ಡಿಐ)ಅವಕಾಶವನ್ನು ಸಚಿವ ಸಂಪುಟ ಅನುಮೋದಿಸಿದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದರು.
ಟೆಲಿಕಾಂ ವಲಯದಲ್ಲಿ ಶೇಕಡ 100 ವಿದೇಶಿ ನೇರ ಹೂಡಿಕೆ ಸ್ವಯಂಚಾಲಿತ ಮಾರ್ಗದ ಮೂಲಕ ಅನುಮತಿಸುವ ಯೋಜನೆಯಾಗಿದೆ. ಹೂಡಿಕೆದಾರರಿಗೆ ರಿಸರ್ವ್ ಬ್ಯಾಂಕ್ ಅಥವಾ ಸರಕಾರದಿಂದ ಪೂರ್ವಾನುಮತಿ ಅಗತ್ಯವಿಲ್ಲ . ಶೇಕಡ 100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲದೆ ಇತರ ಎಂಟು ಪ್ರಮುಖ ಕ್ರಮಗಳಿಗೆ ಇಂದು ಕ್ಯಾಬಿನೆಟ್ ಅನುಮೋದನೆ ಪಡೆಯಿತು.







