ಸೆ.16ರಂದು 'ದೇವಸ್ಥಾನ ಧ್ವಂಸ' ವಿರೋಧಿಸಿ ಪ್ರತಿಭಟನೆ
ಉಡುಪಿ, ಸೆ.15: ಮೈಸೂರು ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಧ್ವಂಸ ಮಾಡಿರುವುದನ್ನು ಖಂಡಿಸಿ ಸೆ.16ರಂದು ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಜರಂಗದಳ ದಕ್ಷಿಣ ಕರ್ನಾಟಕದ ರಾಜ್ಯ ಸಂಚಾಲಕ ಸುನೀಲ್ ಕೆ.ಆರ್. ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆ ಹಿಂದು ಸಮಾಜದ ಮೇಲೆ ಆಗಿರುವ ದೊಡ ಆಘಾತ. ಇದಕ್ಕೆ ಸಂಬಂಧ ಪಟ್ಟ ಮೈಸೂರು ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲೂಕಿನ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಉಪಾಧ್ಯಕ್ಷ ಅಶೋಕ್ ಪಾಲ್ಕದ, ಜಿಲ್ಲಾ ಸಂಚಾಲಕ ಸುರೇಂದ್ರೆ ಕೋಟೇಶ್ವರ ಉಪಸ್ಥಿತರಿದ್ದರು.
Next Story





