ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರ
![ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರ](https://www.varthabharati.in/sites/default/files/images/articles/2021/09/15/306553-1631714149.jpg)
ಉಡುಪಿ, ಸೆ.15: ಈ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಹೊಸ ಶಿಕ್ಷಣ ನೀತಿಯ ಕುರಿತು ಕಾರ್ಯಾಗಾರ ವೊಂದನ್ನು ಕಾಲೇಜಿನಲ್ಲಿ ಏರ್ಪಡಿಸ ಲಾಗಿತ್ತು.
ಖ್ಯಾತ ಶಿಕ್ಷಣ ತಜ್ಞರಾದ ದಯಾನಂದ ಶೆಟ್ಟಿ ಕೊಜಕುಳಿ ಕಾರ್ಯಾಗಾರವನ್ನು ಉದ್ಘಾಟಿಸಿ ಹೊಸ ಶಿಕ್ಷಣ ನೀತಿಯ ಅನುಷ್ಠಾನದ ಅಗತ್ಯವನ್ನು ವಿವರಿಸಿದರು. ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ಸಂಪನ್ಮೂಲ ವ್ಯಕ್ತಿ ಗಳಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ರೀತಿಯನ್ನು ವಿವರಿಸಿದರು.
ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ. ಸುರೇಶ್ ರೈ ಕೆ. ಮತ್ತು ಎನ್ಇಪಿ ಸಂಯೋಜಕ ಡಾ. ರಾಜಶೇಖರ್ ಕುಂಬಾರ ಉಪಸ್ಥಿತರಿದ್ದರು. ಎನ್ಇಪಿ ಟಾಸ್ಕ್ ಪೋರ್ಸ್ನ ಮುಖ್ಯಸ್ಥರಾದ ಡಾ. ಸುನೀತಾ ಸ್ವಾಗತಿಸಿದರೆ, ಉಮೇಶ್ ಪೈ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು