Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾರಿ ಚಾಲಕನ ಕೊಲೆ ಪ್ರಕರಣ : ಆರೋಪಿಗೆ...

ಲಾರಿ ಚಾಲಕನ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ15 Sept 2021 7:31 PM IST
share

ಮಂಗಳೂರು, ಸೆ.15: ತಮಿಳುನಾಡಿನ ಲಾರಿ ಚಾಲಕ ಸೆಲ್ವಮಣಿ (40) ಎಂಬವರನ್ನು ಕೊಲೆಗೈದ ಮತ್ತೊಂದು ಲಾರಿಯ ಚಾಲಕ ತಮಿಳುನಾಡಿನ ಪ್ಯಾಟ್ರಿಕ್ ಸುರೇಶ್ ಕುಮಾರ್(48) ಎಂಬಾತನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಆರ್.ಪಲ್ಲವಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

2018ರ ಮಾ.3ರಂದು ಕೊಲೆ ಪ್ರಕರಣ ನಡೆದಿತ್ತು. ಅಂದರೆ ಲಾರಿ ಚಾಲಕ ಪ್ಯಾಟ್ರಿಕ್ ಸುರೇಶ್ ಕುಮಾರ್ ಮತ್ತು ಸೆಲ್ವಮಣಿ ತಮ್ಮ ಲಾರಿಗಳಲ್ಲಿ ತಮಿಳುನಾಡಿನಿಂದ ಸರಕು ತುಂಬಿಸಿಕೊಂಡು ಮಂಗಳೂರಿಗೆ ಬಂದಿದ್ದರು. ಸರಕು ಖಾಲಿ ಮಾಡಿ ವಾಪಸ್ ಹೋಗುವಾಗ ಬೇರೆ ಸರಕನ್ನು ತಮಿಳುನಾಡಿಗೆ ಕೊಂಡೊಯ್ಯುವ ಸಲುವಾಗಿ ಕಂಕನಾಡಿ ನಗರ ಠಾಣಾ ಪೊಲೀಸ್ ವ್ಯಾಪ್ತಿಯ ಪಡೀಲ್ ಓವರ್‌ ಬ್ರಿಡ್ಜ್ ಬಳಿಯ ಯಾರ್ಡ್‌ನಲ್ಲಿ ಲಾರಿಗಳನ್ನು ನಿಲ್ಲಿಸಿದ್ದರು. ಮಾ.3ರಂದು ರಾತ್ರಿ 1:05ರ ವೇಳೆಗೆ ಯಾರ್ಡ್‌ನಲ್ಲಿ ಸುರೇಶ್ ಕುಮಾರ್ ಮತ್ತು ಸೆಲ್ವಮಣಿ ನಡುವೆ ಮಾತಿನ ಚಕಮಕಿ ನಡೆದಿದೆ.

ಆರೋಪಿ ಸುರೇಶ್ ಕುಮಾರ್‌ನ ಸಂಬಂಧಿಯನ್ನು ಸೆಲ್ವಮಣಿ ವಿವಾಹವಾಗಿದ್ದ. ಈ ವಿಚಾರವಾಗಿ ವಾಗ್ವಾದ ನಡೆದು ಸುರೇಶ್ ಕುಮಾರ್ ಚೂರಿಯಿಂದ ಸೆಲ್ವಮಣಿಯ ಹೊಟ್ಟೆಗೆ ತಿವಿಯಲು ಮುಂದಾದ. ಆಗ ಸೆಲ್ವಮಣಿಯ ಕೈಗೆ ಗಾಯವಾಯಿತು. ಸ್ವಲ್ಪ ಹೊತ್ತಿನ ಬಳಿಕ ಮತ್ತೊಂದು ಚೂರಿ ತಂದ ಸುರೇಶ್ ಕುಮಾರ್ ಅದರಿಂದ ಸೆಲ್ವಮಣಿಗೆ ತಿವಿದು ಗಂಭೀರವಾಗಿ ಗಾಯಗೊಳಿಸಿದ. ಪರಿಸರದಲ್ಲಿದ್ದ ಇತರ ಲಾರಿಗಳ ಚಾಲಕರು ಸೇರಿ ಸೆಲ್ವಮಣಿಯನ್ನು ಲಾರಿಯಲ್ಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಸೆಲ್ವಮಣಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ರವಿ ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಿದ್ದರು.

ನ್ಯಾಯಾಧೀಶರು 25 ಮಂದಿ ಸಾಕ್ಷಿಗಳ ವಿಚಾರಣೆ ನಡೆಸಿ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಬುಧವಾರ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ತೀರ್ಪು ನೀಡಿದರು. ಅಲ್ಲದೆ ಕೊಲೆಯಾದ ಸೆಲ್ವಮಣಿಯ ಪತ್ನಿಗೆ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದರು.

ಈ ಪ್ರಕರಣದಲ್ಲಿ ವೈಜ್ಞಾನಿಕ ಸಾಕ್ಷಗಳು ಮಹತ್ವದ ಪಾತ್ರ ವಹಿಸಿದ್ದವು. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದ್ಯಾವರ ವಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X