ಉಡುಪಿ: ಕೋವಿಡ್ ಗೆ ಓರ್ವ ಬಲಿ, 89 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಸೆ.15: ಜಿಲ್ಲೆಯಲ್ಲಿ ಬುಧವಾರ 67 ವರ್ಷ ಪ್ರಾಯದ ಪುರುಷರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು, 89 ಹೊಸ ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದಿನದಲ್ಲಿ 121 ಮಂದಿ ಸೋಂಕಿ ನಿಂದ ಚೇತರಿಸಿಕೊಂಡರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1526 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಉಡುಪಿಯ 67 ವರ್ಷ ಪ್ರಾಯದ ಹಿರಿಯರೊಬ್ಬರು ಕೋವಿಡ್‌ನಿಂದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಗುಣಲಕ್ಷಣ ದೊಂದಿಗೆ ಉಸಿರಾಟದ ತೊಂದರೆಗೆ ಸಿಲುಕಿದ್ದ ಇವರು ಕಿಡ್ನಿ ಹಾಗೂ ಹೃದಯ ಸಮಸ್ಯೆ ಹೊಂದಿದ್ದು ಸೆ.8ರಂದು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ಸೋಂಕು ದೃಢಪಟ್ಟ 89 ಮಂದಿಯಲ್ಲಿ 44 ಮಂದಿ ಪುರುಷರು ಹಾಗೂ 45 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 47 ಮಂದಿ ಉಡುಪಿ ತಾಲೂಕು, 14 ಮಂದಿ ಕುಂದಾಪುರ ಹಾಗೂ 28 ಮಂದಿ ಕಾರ್ಕಳ ತಾಲೂಕಿನವರು. ಇವರಲ್ಲಿ 12 ಮಂದಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಉಳಿದ 77 ಮಂದಿಗೆ ವುನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ 121 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 73,362ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 5925 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 75,348ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 10,62,971 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
8696 ಮಂದಿಗೆ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ಬುಧವಾರ ಒಟ್ಟು 8696 ಮಂದಿ ಕೋವಿಡ್-19 ಲಸಿಕೆ ಪಡೆದಿದ್ದಾರೆ. ಇವರಲ್ಲಿ 3216 ಮಂದಿ ಮೊದಲ ಡೋಸ್ ಹಾಗೂ 5480 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 2125 ಮಂದಿ ಮೊದಲ ಹಾಗೂ 2268 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 1091 ಮಂದಿಗೆ ಮೊದಲ ಹಾಗೂ 3212 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಲಾಗಿದೆ.
ಇಂದು ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 8,43,589 ಮಂದಿ ಮೊದಲ ಡೋಸ್‌ನ್ನು ಪಡೆದರೆ, 3,29,993 ಮಂದಿ ಎರೂ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ.







